ಖಲಿಸ್ತಾನ್ ಪರ ಹಣ ಸಹಾಯ ಆರೋಪ: ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸ್ಸು

Date:

ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್‌ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್‌ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶಿಫಾರಸ್ಸು ಮಾಡಿದ್ದಾರೆ.

1993 ದೆಹಲಿ ಸ್ಫೋಟಗಳ ಆರೋಪಿ ಹಾಗೂ ಭಯೋತ್ಪಾದಕ ದೇವೇಂದ್ರ ಪಾಲ್‌ ಬುಲ್ಲರ್ ಬಿಡುಗಡೆ ಹಾಗೂ ಖಲಿಸ್ತಾನ ಪರ ಭಾವನೆಗಳನ್ನು ಪ್ರತಿಪಾದಿಸಲು ಖಲಿಸ್ತಾನ್‌ ಪರ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ ಹಣ ಸ್ವೀಕರಿಸಿರುವ ಬಗ್ಗೆ ಸಕ್ಸೇನಾ ಅವರು ದೂರು ಸ್ವೀಕರಿಸಿದ್ದರು.

ಅರವಿಂದ್‌ ಕೇಜ್ರಿವಾಲ್ ಅವರು ನಿಷೇಧಿತ ಗುಂಪುಗಳಿಂದ ರಾಜಕೀಯ ಹಣ ಸಹಾಯ ಸಂಬಂಧ ದೂರು ನೀಡಲಾಗಿದೆ. ದೂರುದಾರರು ಸೇರಿಸಿರುವ ವಿದ್ಯುನ್ಯಾನ ಪುರಾವೆಗಳಿಗೆ ಫಾರೆನ್ಸಿಕ್ ಪರೀಕ್ಷೆ ಒಳಗೊಂಡ ತನಿಖೆಯ ಅಗತ್ಯವಿದೆ ಎಂದು ಲೆಫ್ಟಿನೆಂಟ್ ಗನರ್ನರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಜ್ರಿವಾಲ್ ಅವರು 2014ರ ಜನವರಿಯಲ್ಲಿ ಇಕ್ಬಾಲ್‌ ಸಿಂಗ್‌ ಎಂಬುವವರಿಗೆ ಬರೆದಿದ್ದ ಪತ್ರ ಹಾಗೂ ದೇವೇಂದ್ರ ಪಾಲ್‌ ಬುಲ್ಲರ್ ಎಂಬುವವರನ್ನು ಬಿಡುಗಡೆ ಕೋರಿ ಎಎಪಿ ಸರ್ಕಾರ ರಾಷ್ಟ್ರಪತಿಗೆ ಶಿಫಾರಸ್ಸು ಒಳಗೊಂಡ ವಿಷಯಗಳ ಬಗ್ಗೆ ತನಿಖೆ ಕೈಗೊಳ್ಳುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಬುಲ್ಲರ್ ಬಿಡುಗಡೆ ಸಂಬಂಧ ಇಕ್ಬಾಲ್‌ ಸಿಂಗ್‌ ಜಂತರ್‌ ಮಂತರ್‌ನಲ್ಲಿ ಉಪವಾಸ ಕುಳಿತ್ತಿದ್ದರು.  ಆಗ ಉಪವಾಸ ನಿಲ್ಲಿಸುವಂತೆ ಕೇಜ್ರಿವಾಲ್‌ ಪತ್ರ ಬರೆದಿದ್ದರು ಎಂದು ಸಕ್ಸೇನಾ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಏಪ್ರಿಲ್ 1ರಿಂದ ತಿಹಾರ್‌ ಸೆರೆಮನೆಯಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...