ಹಕ್ಕಿ ಡಿಕ್ಕಿ ಪ್ರಕರಣಗಳು: ದೆಹಲಿ, ಬೆಂಗಳೂರು, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ

Date:

ಕಳೆದ ಐದೂವರೆ ವರ್ಷಗಳಲ್ಲಿ ಭಾರತದ ಪ್ರಮುಖ ಹತ್ತು ವಿಮಾನ ನಿಲ್ದಾಣಗಳಲ್ಲಿ ಸುಮಾರು 2,800 ಹಕ್ಕಿ ಡಿಕ್ಕಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ದೆಹಲಿ, ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ದತ್ತಾಂಶ ತಿಳಿಸಿದೆ.

2020ರಿಂದ 2025ರ ಜೂನ್‌ವರೆಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 695 ಹಕ್ಕಿ ಡಿಕ್ಕಿ ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಮುಂಬೈ 407 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಬೆಂಗಳೂರು 343 ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಅಹಮದಾಬಾದ್ (337) ಮತ್ತು ಹೈದರಾಬಾದ್ ನಂತರದ ಸ್ಥಾನಗಳಲ್ಲಿವೆ. ಚೆನ್ನೈ (205), ಕೋಲ್ಕತ್ತ (193), ಭುವನೇಶ್ವರ (150), ಪುಣೆ (145) ಮತ್ತು ತಿರುವನಂತಪುರ (125) ಇತರೆ ಪ್ರಮುಖ ವಿಮಾನ ನಿಲ್ದಾಣಗಳಾಗಿವೆ.

ನಾಗರಿಕ ವಿಮಾನಯಾನ ಸಚಿವಾಲಯದ ವರದಿಯ ಪ್ರಕಾರ, 2020–21ರಲ್ಲಿ ಕೋವಿಡ್-19 ಲಾಕ್‌ಡೌನ್‌ನಿಂದಾಗಿ ವಿಮಾನಯಾನ ಸೇವೆಗಳು ಕಡಿಮೆಯಾದ ಕಾರಣ ಹಕ್ಕಿ ಡಿಕ್ಕಿ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿತ್ತು. 2020ರಲ್ಲಿ 309, 2021ರಲ್ಲಿ 354, 2022ರಲ್ಲಿ 588, 2023ರಲ್ಲಿ 709, 2024ರಲ್ಲಿ 609 ಮತ್ತು 2025ರ ಜೂನ್‌ವರೆಗೆ 238 ಪ್ರಕರಣಗಳು ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು

ದೆಹಲಿ ವಿಮಾನ ನಿಲ್ದಾಣವು ಪ್ರತಿ ವರ್ಷವೂ ಅತಿ ಹೆಚ್ಚು ಹಕ್ಕಿ ಡಿಕ್ಕಿ ಪ್ರಕರಣಗಳನ್ನು ದಾಖಲಿಸಿದೆ. 2020ರಲ್ಲಿ 62, 2021ರಲ್ಲಿ 94, 2022ರಲ್ಲಿ 183, 2023ರಲ್ಲಿ 185, 2024ರಲ್ಲಿ 130 ಮತ್ತು 2025ರ ಜೂನ್‌ವರೆಗೆ 41 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ರಮವಾಗಿ 29, 22, 84, 85, 88 ಮತ್ತು 35 ಪ್ರಕರಣಗಳು ದಾಖಲಾಗಿವೆ.

ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ರಾಜ್ಯಸಭೆಯಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ, ವಿಮಾನ ಕಾರ್ಯಾಚರಣೆಗಳ ಸುರಕ್ಷತೆಗಾಗಿ ವನ್ಯಜೀವಿ ಅಪಾಯ ನಿರ್ವಹಣಾ ಯೋಜನೆ (WHMP) ಅಭಿವೃದ್ಧಿಪಡಿಸುವುದನ್ನು ಸಚಿವಾಲಯವು ಕಡ್ಡಾಯಗೊಳಿಸಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...