ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಘಟನೆಯ ವಿಡಿಯೋಗಳನ್ನು ತೆಗೆದುಹಾಕಲು ‘ಎಕ್ಸ್‌’ಗೆ ಕೇಂದ್ರ ಸರ್ಕಾರ ಆದೇಶ

Date:

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್‌ಗಳನ್ನು ತೆಗೆದುಹಾಕುವಂತೆ ‘ಎಕ್ಸ್‌’ಗೆ (ಟ್ವಿಟರ್‌) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ, ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಕಾಯ್ದೆಯ ಸೆಕ್ಷನ್ 79(3)(ಬಿ) ಅಡಿಯಲ್ಲಿ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕರು (ರೈಲ್ವೇ ಮಂಡಳಿ) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರೈಲ್ವೇಗೆ ಸಂಬಂಧಿಸಿದ ವಿಚಾರಗಳನ್ನು ತೆಗೆದುಹಾಕುವಂತೆ ನೇರವಾಗಿ ಸೂಚನೆ ನೀಡಬಹುದಾದ ಅಧಿಕಾರವನ್ನು ರೈಲ್ವೇ ಸಚಿವಾಲಯ ನೀಡಿದೆ. ಇದನ್ನೂ ಮುಂಚೆ, ಐಟಿ ಸಚಿವಾಲಯದ ಸೆಕ್ಷನ್ 69ಎ ಬ್ಲಾಕ್ ಸಮಿತಿಯ ಮೂಲಕ ಇಂತಹ ಆದೇಶಗಳನ್ನು ನೀಡಲಾಗುತ್ತಿತ್ತು.

ಈಗ, ಐಟಿ ಕಾಯ್ದೆಯ ಸೆಕ್ಷನ್ 79(3)(ಬಿ) ಅಡಿಯಲ್ಲಿ ರೈಲ್ವೇ ಮಂಡಳಿಯೇ ಸಾಮಾಜಿಕ ಜಾಲತಾಣ ವೇದಿಕೆಗಳಿಗೆ ನೇರವಾಗಿ ಆದೇಶ ನೀಡಬಹುದಾಗಿದೆ. ಅದೇ ಅಧಿಕಾರವನ್ನು ಬಳಸಿಕೊಂಡು ರೈಲ್ವೇ ಸಚಿವಾಲಯವು ‘ಎಕ್ಸ್‌’ಗೆ ದೆಹಲಿ ರೈಲ್ವೇ ನಿಲ್ದಾಣ ದುರಂತದ ವಿಡಿಯೋಗಳನ್ನು ಅಳಿಸಿಹಾಕುವಂತೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೃತ ವ್ಯಕ್ತಿಗಳನ್ನು ಚಿತ್ರಿಸುವ ಸೂಕ್ಷ್ಮ ಅಥವಾ ಗೊಂದಲದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ಇದು ಕಳವಳಕಾರಿಯಾಗಿದೆ. ಇಂತಹ ಚಿತ್ರಗಳು, ವಿಡಿಯೋಗಳನ್ನು ಹಲವಾರು ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಆ ವಿಡಿಯೋಗಳು, ಚಿತ್ರಗಳು, ಲಿಂಕ್‌ಗಳನ್ನು ಆದೇಶ ಜಾರಿಯಾದ 36 ಗಂಟೆಗಳ ಒಳಗೆ ಅಳಿಸಿಹಾಕಬೇಕು” ಎಂದು ‘ಎಕ್ಸ್‌’ಗೆ ರೈಲ್ವೇ ಸಚಿವಾಲಯ ಸೂಚಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ದೆಹಲಿ ರೈಲ್ವೇ ನಿಲ್ದಾಣದ ಭೀಕರ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ನಾಲ್ಕು ಪುರುಷರು ಮತ್ತು ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ದೆಹಲಿ | ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ; ರೈಲ್ವೇ ಇಲಾಖೆಯ ವೈಫಲ್ಯ

ಅಂದಾಜಿನ ಪ್ರಕಾರ, ಕುಂಭಮೇಳದಲ್ಲಿ ಭಾಗಿಯಾಗಲು ಪ್ರಯಾಗ್‌ರಾಜ್‌ಗೆ ರೈಲಿನಲ್ಲಿ ತೆರಳಲು ಸುಮಾರು 50,000 ಕ್ಕೂ ಹೆಚ್ಚು ಜನರು ನವದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಭಾರೀ ಸಂಖ್ಯೆಯ ಪ್ರಯಾಣಿಕರಿಂದ ರೈಲು ನಿಲ್ದಾಣ ತುಂಬಿಹೋಗಿತ್ತು. ಇಂತಹ ಸಮಯದಲ್ಲಿ ರೈಲು ನಿಲ್ಲುವ ಪ್ಲಾಟ್‌ಫಾರಂಅನ್ನು ಕೊನೆ ಕ್ಷಣದಲ್ಲಿ ಬದಲಿಸಲಾಯಿತು. ಪರಿಣಾಮ, ಜನರು ಮತ್ತೊಂದು ಪ್ಲಾಟ್‌ಫಾರಂಗೆ ಹೋಗಲು ಓಡಲಾರಂಭಿಸಿದರು. ಅದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ವರಿದಯಾಗಿದೆ.

ರೈಲು ನಿಲ್ಧಾಣದಲ್ಲಿ ಭಾರಿ ಸಂಖ್ಯೆಯ ಪ್ರಯಾಣಿಕರು ಧಾವಿಸುತ್ತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅವುಗಳಲ್ಲಿ, ಹಲವರು ತಮ್ಮ ಮಕ್ಕಳನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು, ತಮ್ಮ ಸಾಮಾನುಗಳನ್ನು ಎಳೆದುಕೊಂಡು ಓಡುತ್ತಿರುವುದು, ಹೆಣಗಾಡುತ್ತಿರುವುದು ಕಂಡುಬಂದಿದೆ.

ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ಎಚ್ಚರಿಕೆ ವಹಿಸಲು ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೆ ತರುವಂತೆ ಕೇಂದ್ರ ಸರ್ಕಾರ, ಭಾರತೀಯ ರೈಲ್ವೇ ಹಾಗೂ ರೈಲ್ವೇ ಮಂಡಳಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...