ದೆಹಲಿ ಗಲಭೆ | ಕೋಮುದ್ವೇಷಿ ಕಪಿಲ್ ಮಿಶ್ರಾಗೆ ಮಂತ್ರಿಗಿರಿ; ಸೌಹಾರ್ದತೆ ಸಾರಿದ ಉಮರ್‌ಗೆ ಸೆರೆವಾಸ

Date:

ಭಾರತದಲ್ಲಿ ನ್ಯಾಯ ವ್ಯವಸ್ಥೆ ಮತ್ತು ರಾಜಕೀಯದ ನಡುವಿನ ಸಂಬಂಧದ ಕುರಿತು ಆಗಾಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ನಂತರವಂತೂ ಈ ಚರ್ಚೆ ಇನ್ನೂ ಹೆಚ್ಚಾಗಿದೆ. ಇದೀಗ, ದೆಹಲಿ ಸರ್ಕಾರದ ಕಾನೂನು ಮತ್ತು ನ್ಯಾಯ ಪರಿಪಾಲನಾ ಸಚಿವ ಕಪಿಲ್ ಮಿಶ್ರ ಅವರ ವಿಚಾರದಲ್ಲಿ ನ್ಯಾಯ ವ್ಯವಸ್ಥೆ ಮತ್ತು ರಾಜಕೀಯ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ.

2020ರ ಫೆಬ್ರವರಿಯಲ್ಲಿ, ದೆಹಲಿಯ ಉತ್ತರ-ಪೂರ್ವ ಭಾಗದಲ್ಲಿ ನಡೆದ ಕೋಮು ಗಲಭೆ ಕುರಿತು ಕಪಿಲ್ ಮಿಶ್ರಾ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದರು. ಫೆಬ್ರವರಿ 23ರಂದು ದೆಹಲಿಯ ಮೌಜಪುರ್ ಸರ್ಕಲ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಮಿಶ್ರಾ, ಪೊಲೀಸರ ಸಮ್ಮುಖದಲ್ಲಿಯೇ, ‘ಗೋಲಿ ಮಾರೋ ಸಾಲೋ ಕೋ’ (ಅವರಿಗೆ ಗುಂಡು ಹಾರಿಸಿ) ಎಂಬ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು. ಅಲ್ಲದೆ, ‘ಮುಲ್ಲಾ ಕೆ ದೋ ಸ್ಥಾನ್—ಕಬ್ರಿಸ್ತಾನ್ ಯಾ ಪಾಕಿಸ್ತಾನ್’ (ಮುಸ್ಲಿಮರಿಗೆ ಎರಡೇ ಸ್ಥಳಗಳು: ಕಬರ್‌ಸ್ತಾನ ಅಥವಾ ಪಾಕಿಸ್ತಾನ) ಎಂಬ ಕೋಮು ದ್ವೇಷದ ಹೇಳಿಕೆಯನ್ನೂ ನೀಡಿದ್ದರು.

ಆ ಸಮಯದಲ್ಲಿ, ಅವರ ಹೇಳಿಕೆಗಳ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಗಳೂ ಕೇಳಿಬಂದಿದ್ದವು. ಅವರ ಹೇಳಿಕೆಯನ್ನು ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ಕಾನೂನು ತಜ್ಞರು ‘ದ್ವೇ‍ಷ ಭಾಷಣ’ವೆಂದೇ ಬೊಟ್ಟು ಮಾಡಿದ್ದರು. ಅಷ್ಟು ಮಾತ್ರವಲ್ಲ, ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಮುರಳೀಧರ್ ಕೂಡ ಪೊಲೀಸರ ಧೋರಣೆಯನ್ನು ತರಾಟೆಗೆ ತೆಗೆದುಕೊಂಡು, ‘ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಿ’ ಎಂದು ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೂ, ಕಪಿಲ್ ಮಿಶ್ರಾ ವಿರುದ್ಧ ಪ್ರಕರಣ ದಾಖಲಾಗಲಿಲ್ಲ. ಅವರು ಕೋಮುದ್ವೇಷ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿ ಈಗ ಬರೋಬ್ಬರಿ 6 ವರ್ಷಗಳು ಕಳೆದಿವೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಲು ಹಿಂದೇಟು ಹಾಕುತ್ತಲೇ ಬಂದಿದ್ದಾರೆ. ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸಲ್ಲಿಸಲಾಗಿದ್ದ ಹಲವು ಅರ್ಜಿಗಳು ನ್ಯಾಯಾಲಯಗಳಲ್ಲಿ ತಿರಸ್ಕಾರಗೊಂಡಿವೆ. ಅವರ ವಿರುದ್ಧ ಎಫ್‌ಐಆರ್ ದಾಖಲಾಗದಂತೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೋಡಿಕೊಂಡಿದ್ದಾರೆ ಎಂಬ ಆರೋಪಗಳೂ ಇವೆ.

ಗಮನಾರ್ಹವೆಂದರೆ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ, ಇದೇ ಪ್ರಚೋದನಾಕಾರಿ, ಕೋಮುದ್ವೇಷದ ಭಾಷಣಕಾರ ಕಪಿಲ್ ಮಿಶ್ರಾ ಅವರನ್ನು ಕಾನೂನು ಮತ್ತು ನ್ಯಾಯ ಪರಿಪಾಲನಾ ಸಚಿವನ್ನಾಗಿ ಬಿಜೆಪಿ ನೇಮಿಸಿದೆ. ಜೊತೆಗೆ, ಬಿಜೆಪಿಯ ದೆಹಲಿ ಘಟಕದ ಉಪಾಧ್ಯಕ್ಷರೂ ಆಗಿದ್ದಾರೆ.

ಕೋಮು ದ್ವೇಷ ಹರಡಿದ ವ್ಯಕ್ತಿಯೊಬ್ಬ ಬಿಜೆಪಿ ಆಡಳಿತದಲ್ಲಿ ಕಾನೂನು ಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಆದರೆ, ಅದೇ ಸಮಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ದುಡಿಯುತ್ತಿದ್ದ ಯುವ ಚಿಲುಮೆ ಉಮರ್ ಖಾಲಿದ್, ಇದೇ ಕಳೆದ ಆರು ವರ್ಷಗಳಿಂದ ಬಿಜೆಪಿಯ ದಮನ ರಾಜಕೀಯಕ್ಕೆ ತುತ್ತಾಗಿ, ಜೈಲಿನಲ್ಲಿದ್ದಾರೆ.

2020ರಲ್ಲಿ, ಉಮರ್ ಖಾಲಿದ್ ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳಲ್ಲಿ ಸಕ್ರಿಯರಾಗಿದ್ದರು. 2020ರ ಫೆಬ್ರವರಿಯಲ್ಲಿ ನಡೆದ ಅದೇ ದೆಹಲಿ ಗಲಭೆಯ ಸಂದರ್ಭದಲ್ಲಿ ಉಮರ್ ಖಾಲಿದ್, ಶಾಂತಿ ಮತ್ತು ಸೌಹಾರ್ದತೆ ಸಾರುವ ಭಾಷಣ ಮಾಡಿದ್ದರು. ಆದರೆ, ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ, 2020ರ ಸೆಪ್ಟೆಂಬರ್‌ನಲ್ಲಿ ಇದೇ ಮೋದಿ-ಶಾ ಅಧೀನದಲ್ಲಿರುವ ದೆಹಲಿ ಪೊಲೀಸರು ಬಂಧಿಸಿದರು.

ಈ ಲೇಖನ ಓದಿದ್ದೀರಾ?: ಉಮರ್ ಖಾಲಿದ್ ಸೆರೆವಾಸಕ್ಕೆ ಐದು ವರ್ಷಗಳು: ಮುಕ್ತಿ ಎಂದು?

ಉಮರ್ ಖಾಲಿದ್ ಬಂಧನವಾಗಿ ಆರು ವರ್ಷಗಳು ಕಳೆದಿವೆ. ಆರು ವರ್ಷಗಳಿಂದ ಉಮರ್ ಜೈಲಿನಲ್ಲಿಯೇ ಇದ್ದಾರೆ. ಈವರೆಗೂ, ಅವರ ವಿರುದ್ಧದ ಪ್ರಕರಣದ ವಿಚಾರಣೆ ಆರಂಭವಾಗಿಲ್ಲ. ಜಾಮೀನು ಕೂಡ ದೊರೆತಿಲ್ಲ. ನಿರಂತರವಾಗಿ ಅವರು ಸಲ್ಲಿಸುತ್ತಿರುವ ಜಾಮೀನು ಅರ್ಜಿಗಳನ್ನು ನ್ಯಾಯಾಲಯಗಳು ವಜಾಗೊಳಿಸುತ್ತಲೇ ಇವೆ. 2026ರ ಜನವರಿ 5ರಂದು ಇದೇ ಪ್ರಕರಣದಲ್ಲಿ ಐವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿತು. ಆದರೆ, ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿತು. ಅಲ್ಲದೆ, ಒಂದು ವರ್ಷದವರೆಗೆ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಾರದೆಂದು ತಾಕೀತನ್ನೂ ಮಾಡಿದೆ.

ಆದರೆ, ಉಮರ್ ವಿರುದ್ಧದ ಪ್ರಕರಣದಲ್ಲಿ ಅವರನ್ನು ಆರೋಪಿಯನ್ನಾಗಿ ಸಾಬೀತು ಮಾಡಲು ದೆಹಲಿ ಪೊಲೀಸರ ಬಳಿ ಯಾವುದೇ ಪುರಾವೆಗಳಿಲ್ಲ. ಅವರ ವಿರುದ್ಧದ ಪ್ರಕರಣ ದುರ್ಬಲವಾದದ್ದು. ಆದರೆ, ಬಿಜೆಪಿಯ ದ್ವೇಷ ರಾಜಕಾರಣದಿಂದಾಗಿ ಉಮರ್ ಸೆರೆವಾಸ ಅನುಭವಿಸುತ್ತಿದ್ದಾರೆ ಎಂದು ಮಾನವ ಹಕ್ಕುಗಳ ಸಂಸ್ಥೆಗಳು ಹೇಳಿವೆ. ಈ ಪ್ರಕರಣವು ‘ರಾಜಕೀಯ ಪ್ರೇರಿತ’ವೆಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಬಣ್ಣಿಸಿದೆ.

ಕಪಿಲ್ ಶರ್ಮಾ ಮತ್ತು ಉಮರ್ ಖಾಲಿದ್ ಪ್ರಕರಣಗಳಲ್ಲಿ ನ್ಯಾಯ ವ್ಯವಸ್ಥೆ ಮತ್ತು ರಾಜಕೀಯ ಒಟ್ಟುಗೂಡಿವೆ ಮತ್ತು ವ್ಯತಿರಿಕ್ತವಾಗಿ ಕೆಲಸ ಮಾಡುತ್ತಿವೆ ಎಂಬ ಆರೋಪಗಳಿವೆ. ಮೋದಿ ಸರ್ಕಾರವು ಬಿಜೆಪಿ ನಾಯಕರು ಕೋಮು ದ್ವೇಷದ ಭಾಷಣ ಮಾಡಿದರೂ ಅವರನ್ನು ರಕ್ಷಿಸುತ್ತಿದೆ. ವಿರೋಧಿಗಳನ್ನು ದಮನಿಸುತ್ತಿದೆ. ಇದನ್ನು, ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಚಿಂತಕರು ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...