ದೆಹಲಿ | ಸ್ಪೋಟ ಸಂಭವಿಸಿದ್ದ ಸ್ಥಳದಲ್ಲಿ ಬಳಕೆಗೆ ಅನುಮತಿ ಇಲ್ಲದ 9ಎಂಎಂ ಕಾರ್ಟ್ರಿಡ್ಜ್‌ ಪತ್ತೆ: ವರದಿ

Date:

ದೆಹಲಿಯ ಕೆಂಪು ಕೋಟೆ ಬಳಿಯ ಕಾರು ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ವರದಿಯಾಗಿದೆ. ಸ್ಪೋಟ ಸಂಭವಿಸಿದ್ದ ಸ್ಥಳದಲ್ಲಿ ಮೂರು ಕಾರ್ಟ್ರಿಡ್ಜ್‌ಗಳು (ಎರಡು ಜೀವಂತ ಮತ್ತು ಒಂದು ಖಾಲಿ) ಪತ್ತೆಯಾಗಿದ್ದು, ಅವುಗಳು 9 ಎಂಎಂ ಕ್ಯಾಲಿಬರ್‌ನದ್ದಾಗಿವೆ. ಈ 9ಎಂಎಂ ಕ್ಯಾಲಿಬರ್‌ ನಾಗರಿಕರು ಬಳಕೆ ಮಾಡಲು ನಿಷೇಧಿಸಲಾದ ಬಂದೂಕುಗಳಲ್ಲಿ ಒಂದಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.

ಘಟನಾ ಸ್ಥಳದಲ್ಲಿ ಯಾವುದೇ ಪಿಸ್ತೂಲ್ ಅಥವಾ ಅದರ ಯಾವುದೇ ಭಾಗಗಳು ಕಂಡುಬಂದಿಲ್ಲ. ಈ ಕಾರ್ಟ್ರಿಡ್ಜ್‌ಗಳನ್ನು ಸಾಮಾನ್ಯವಾಗಿ ಸಶಸ್ತ್ರ ಪಡೆಗಳು ಅಥವಾ ವಿಶೇಷ ಅನುಮತಿ ಹೊಂದಿರುವವರು ಮಾತ್ರ ಹೊಂದಿರುತ್ತಾರೆ. ಈ ಮದ್ದುಗುಂಡುಗಳು ಸ್ಥಳದಲ್ಲಿ ಹೇಗೆ ಸಿಕ್ಕವು ಮತ್ತು ಶಂಕಿತ ಇವುಗಳನ್ನು ಬಳಸಿದ್ದನೇ” ಎಂದು ತನಿಖೆ ನಡೆಯುತ್ತಿದೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ನಂತರ ಐತಿಹಾಸಿಕ ‘ಕೆಂಪು ಕೋಟೆ’ ಸ್ಮಾರಕದ ಸುತ್ತಲೂ ಭದ್ರತೆ ಬಿಗಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ, ಜಮ್ಮು ಮತ್ತು ಕಾಶ್ಮೀರ ಮೂಲದ ನಾಲ್ವರು ವೈದ್ಯರಾದ ಡಾ. ಮುಜಾಫರ್ ಅಹ್ಮದ್, ಡಾ. ಅದೀಲ್ ಅಹ್ಮದ್ ರಾಥರ್, ಡಾ. ಮುಜಾಮಿಲ್ ಶಕೀಲ್ ಮತ್ತು ಡಾ. ಶಾಹೀನ್ ಸಯೀದ್ ಅವರನ್ನು ಎನ್‌ಐಎ ಬಂಧಿಸಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ಈ ವೈದ್ಯರ ನೋಂದಣಿಯನ್ನು ಭಾರತೀಯ ವೈದ್ಯಕೀಯ ನೋಂದಣಿ/ರಾಷ್ಟ್ರೀಯ ವೈದ್ಯಕೀಯ ನೋಂದಣಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ತನಿಖಾ ಸಂಸ್ಥೆಗಳು ಸುಮಾರು ಎಂಟು ಶಂಕಿತರು ನಾಲ್ಕು ಸ್ಥಳಗಳಲ್ಲಿ ಸ್ಫೋಟಗಳನ್ನು ನಡೆಸಲು ಯೋಜಿಸಿದ್ದರು. ತಲಾ ಇಬ್ಬರ ನಾಲ್ಕು ತಂಡಗಳು ಏಕಕಾಲದಲ್ಲಿ ದಾಳಿ ಮಾಡಲು ಬಹು ಸುಧಾರಿತ ಸ್ಫೋಟಕ ಸಾಧನಗಳನ್ನು (IED) ಹೊತ್ತೊಯ್ಯುತ್ತಿದ್ದರು. ಡಾ. ಉಮರ್ ಉನ್ ನಬಿ ಕೆಂಪು ಕೋಟೆ ಸ್ಫೋಟವನ್ನು ನಡೆಸಿದ್ದಾರೆ ಎಂಬುದನ್ನು ಡಿಎನ್ಎ ಪರೀಕ್ಷೆಯು ದೃಢಪಡಿಸಿದೆ ಎಂದು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...