ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

Date:

ತನಗೆ ಹೆಣ್ಣು ಮಗು ಬೇಡವೆಂದು ತಾಯಿಯೊಬ್ಬಳು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ಘಟನೆ ಹೊರ ದೆಹಲಿಯ ಮುಂಡ್ಕಾ ಪ್ರದೇಶದ ನಡೆದಿದೆ.

22 ವರ್ಷದ ಮಹಿಳೆಯು ತನಗೆ ಜನಿಸಿ ಮಗು ಹೆಣ್ಣಾದ ಕಾರಣ ತನ್ನ ಮನೆಯಲ್ಲಿ ಮಗುವಿನ ಕತ್ತನ್ನು ಸೀಳಿ ಕೊಂದಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ಗೋವಿಂದ ಎಂಬ ವ್ಯಕ್ತಿ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ತನ್ನ ಪತ್ನಿ ತಮ್ಮ ಮಗಳ ಕತ್ತು ಕೊಯ್ದಿದ್ದಾಳೆ ಎಂದು ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಡ್ಕಾದ ಟಿಕ್ರಿಯಲ್ಲಿರುವ ಬಾಬಾ ಹರಿದಾಸ್ ಕಾಲೋನಿಯಲ್ಲಿರುವ ಈ ದಂಪತಿಯ ಮನೆಗೆ ತಂಡವನ್ನು ಕಳುಹಿಸಲಾಗಿದೆ. ತಂಡವು ಎರಡನೇ ಮಹಡಿಯಲ್ಲಿರುವ ಕೋಣೆಯಲ್ಲಿ ಶಿಶುವು ಶವವಾಗಿ ಪತ್ತೆಯಾಗಿದೆ. ಅಲ್ಲಿಯೇ ತಾಯಿಯು ಕೂಡಾ ಇದ್ದಳು ಎಂದು ಉಪ ಪೊಲೀಸ್ ಆಯುಕ್ತ (ಹೊರ) ಜಿಮ್ಮಿ ಚಿರಂ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಚಾಮರಾಜನಗರ | ಮಹಿಳೆಯೊಬ್ಬರು ಬಿಟ್ಟುಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆ

“ನಿರಂತರ ವಿಚಾರಣೆಯ ನಂತರ ಮಹಿಳೆ ತನಗೆ ಹೆಣ್ಣು ಮಗು ಇಷ್ಟವಿರಲಿಲ್ಲ. ಅದಕ್ಕಾಗಿಯೇ ಮಗಳನ್ನು ಕೊಂಡಿದ್ದೇನೆ ಎಂದು ಬಹಿರಂಗಪಡಿಸಿದಳು” ಎಂದು ಚಿರಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಅಪರಾಧಕ್ಕೆ ಬಳಸಿದ ಚಾಕುವನ್ನು ವಶಕ್ಕೆ ಪಡೆದಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 103 (1) ಅಡಿಯಲ್ಲಿ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾರೆ. ಆಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮಹಿಳೆಯ ಪತಿ ಹರಿಯಾಣದ ಬಹದ್ದೂರ್‌ಗಢದ ಶೂ ಫ್ಯಾಕ್ಟರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ದಂಪತಿಗೆ ಸುಮಾರು ಎರಡು ವರ್ಷದ ಮಗನಿದ್ದಾನೆ ಎಂದು ವರದಿಯಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...