ಆಹಾರ ದ್ವೇಷ | ಚಿಕನ್ ಬಿರಿಯಾನಿ ಆರ್ಡರ್ ಮಾಡಿದ್ದಕ್ಕೆ ಗ್ರಾಹಕರನ್ನು ನಿಂದಿಸಿದ ಡೆಲಿವೆರಿ ಏಜೆಂಟ್

Date:

ಚಿಕನ್ ಬಿರಿಯಾನಿಯನ್ನು ಆರ್ಡರ್‌ ಮಾಡಿದ್ದಕ್ಕಾಗಿ ಗ್ರಾಹಕರನ್ನು ಆಹಾರ ವಿತರಣಾ (ಡೆಲಿವೆರಿ) ಏಜೆಂಟ್ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಬಿರಿಯಾನಿ ತಿನ್ನುವೆಯಾ ಎಂದು ಡೆಲಿವೆರಿ ಏಜೆಂಟ್ ಗದ್ದಲ ಮಾಡಿದ್ದಾನೆಂದು ಆರೋಪಿಸಲಾಗಿದೆ.

ದೆಹಲಿಯ ನಿವಾಸಿಯೊಬ್ಬರು ಇತ್ತೀಚೆಗೆ ಚಿಕನ್ ಬಿರಿಯಾನಿ ಆರ್ಡರ್‌ ಮಾಡಿದ್ದಕ್ಕಾಗಿ ತಾವು ಡೆಲಿವೆರಿ ಏಜೆಂಟ್‌ನಿಂದ ನಿಂದನೆಗೆ ಒಳಗಾಗಿರುವುದಾಗಿ ‘ರೆಡ್ಡಿಟ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ಡೆಲಿವೆರಿ ಏಜೆಂಟ್‌ ನಾನು ಆರ್ಡರ್‌ ಮಾಡಿದ್ದ ಆಹಾರವನ್ನು ತಲುಪಿಸಿ ಹೋಗುವ ಬದಲು, ದೀಪಾವಳಿಯ ಸಮಯದಲ್ಲಿ ಮಾಂಸಾಹಾರಿ ಆಹಾರ ತಿನ್ನುವೆಯಾ? ನೀನು ಸಂಸ್ಕೃತಿಯನ್ನು ಪಾಲಿಸುತ್ತಿಲ್ಲ. ದೀಪಾವಳಿಯ ವರೆಗೆ ಏನಾದರು ಸ್ವಚ್ಛ ಆಹಾರ ತಿನ್ನಿ, ಹಬ್ಬದ ಬಳಿಕ ಎಲ್ಲ ಚಿಕನ್ ಮತ್ತು ಮಟನ್ ತಿನ್ನಿರಿ” ಎಂದಿದ್ದಾನೆ. ಆತನ ವರ್ತನೆಯಿಂದ ಗ್ರಾಹಕ ದಿಗ್ಭ್ರಾಂತರಾಗಿದ್ದಾರೆ.

“ಡೆಲಿವರಿ ಏಜೆಂಟ್ ಆಹಾರವನ್ನು ತಲುಪಿಸಬೇಕೇ ಹೊರತು, ಗ್ರಾಹಕರು ಯಾವ ಆಹಾರ ಆಯ್ಕೆ ಮಾಡಬೇಕು ಎಂಬ ವಿಚಾರದಲ್ಲಿ ಮೂಗು ತೂರಿಸಬಾರದು. ಆತನ ವಿರುದ್ಧ ಡೆಲಿವೆರಿ ಕಸ್ಟಮರ್ ಕೇರ್‌ಗೆ ದೂರು ನೀಡಲು ಯೋಜಿಸಿದ್ದೆ. ಆದರೆ, ಯಾವ ಕ್ರಮ ಕೈಗೊಳ್ಳಬಹುದು ಎಂಬ ಗೊಂದಲದಲ್ಲಿ ಸುಮ್ಮನಾದೆ. ಆದರೂ, ಆ ಘಟನೆ ನನ್ನ ಇಡೀ ದಿನವನ್ನೇ ಹಾಳು ಮಾಡಿತು. ಅಲ್ಲದೆ, ಆತ ಬಿರಿಯಾನಿಯಲ್ಲಿ ಏನನ್ನಾದರೂ ಬೆರೆಸಿರಬಹುದೇ ಎಂಬ ಭಯದಲ್ಲಿ ಬಿರಿಯಾನಿಯನ್ನೂ ತಿನ್ನಲಾಗಲಿಲ್ಲ” ಎಂದು ಗ್ರಾಹಕ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಭಯ ಬಿತ್ತುವ ವರ್ತನೆಗಳಲ್ಲಿ ಒಂದಾಗಿ. ಈ ರೀತಿಯ ಅನೈತಿಕ ಪೊಲೀಸ್‌ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಮತ್ತೋರ್ವ ವ್ಯಕ್ತಿ, “ನಾನೂ ಸಹ ಸಸ್ಯಾಹಾರಿ. ಆದರೆ ಯಾರಾದರೂ ತಮ್ಮ ಆಹಾರದ ಆದ್ಯತೆಗಳನ್ನು ಇತರರ ಮೇಲೆ ಹೇರಲು ಮುಂದಾದರೆ ನಾನು ಅದನ್ನು ವಿರೋಧಿಸುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...