ಶೀತಮಾರುತಕ್ಕೆ ಕಂಗೆಟ್ಟ ಮಧ್ಯ-ಉತ್ತರ ಭಾರತ: ರೈಲು, ವಿಮಾನ ಸಂಚಾರಕ್ಕೆ ಮಂಜು ಅಡ್ಡಿ

Date:

ಶೀತಮಾರುತ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಮಧ್ಯ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಮೈಕೊರೆಯುವ ಚಳಿಯಿದೆ. ದಟ್ಟವಾದ ಮಂಜು ಆವರಿಸಿದ್ದು ರೈಲು, ವಿಮಾನ ಸಂಚಾರಕ್ಕೆ ಮಂಜು ಅಡ್ಡಿಯಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಇನ್ನಷ್ಟು ಕೆಲವು ದಿನಗಳವರೆಗೆ ಇದೇ ರೀತಿ ಮಂಜು ಇರಲಿದೆ, ಜತೆಗೆ ಕೆಲವೆಡೆ ಭಾರೀ ಮಳೆಯಾಗು ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ, ವಾಯುವ್ಯ ಮತ್ತು ಪೂರ್ವ ಭಾರತದಲ್ಲಿ ಚಳಿ ತೀವ್ರವಾಗಿದೆ. ಆದರೆ ದಕ್ಷಿಣ ರಾಜ್ಯಗಳು ಮಳೆ ಮತ್ತು ಮಿಶ್ರಿತ ಹವಾಮಾನವನ್ನು ಕಾಣಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿದ್ದೀರಾ? ಶೀತಮಾರುತಕ್ಕೆ ಸಿಕ್ಕಿ ತತ್ತರಿಸುತ್ತಿರುವ ಉತ್ತರ ಭಾರತ: ಹಿಮಪಾತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕರಾವಳಿ ತಮಿಳುನಾಡು ಮತ್ತು ಪಕ್ಕದ ಮನ್ನಾರ್ ಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಸರಣ ಮುಂದುವರಿದಿದೆ. ಇದರಿಂದಾಗಿ ಜನವರಿ 12ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ದಕ್ಷಿಣ ಪರ್ಯಾಯ ದ್ವೀಪದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಜನವರಿ 14ರವರೆಗೆ ತೀವ್ರ ಚಳಿ ಇರಲಿದೆ. ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದ ಹಲವಾರು ಪ್ರದೇಶಗಳಲ್ಲಿ ಶೀತಮಾರುತ ಇರಲಿದೆ. ನೆರೆಯ ರಾಜ್ಯಗಳಿಗೂ ಶೀತಮಾರುತದ ಪ್ರಭಾವ ಉಂಟಾಗಬಹುದು. 16ರವರೆಗೆ ಬಿಹಾರ, ಜಾರ್ಖಂಡ್‌ನ ಪ್ರತ್ಯೇಕ ಭಾಗಗಳಲ್ಲಿ ಹಗಲಿನಲ್ಲಿ ತಾಪಮಾನ ಗಮನಾರ್ಹವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.

ರೈಲು, ವಿಮಾನ ಸಂಚಾರಕ್ಕೆ ಮಂಜು ಅಡ್ಡಿ

ಉತ್ತರ ಭಾರತದಲ್ಲಿ ಹಗಲಲ್ಲೂ ಅತಿ ದಟ್ಟವಾದ ಮಂಜು ಇದ್ದು ಈ ಹವಾಮಾನ ಸ್ಥಿತಿ ಮುಂದುವರೆಯಲಿದೆ. ಪಂಜಾಬ್ ಮತ್ತು ಪಶ್ಚಿಮ ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಈಗಾಗಲೇ ದಟ್ಟವಾಗಿ ಮಂಜು ಆವರಿಸಿದೆ. ಬಿಹಾರ, ಉತ್ತರ ಪ್ರದೇಶದ ಪೂರ್ವ ಭಾಗಗಳು, ಹರಿಯಾಣ, ದೆಹಲಿ ಮತ್ತು ಈಶಾನ್ಯ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿದೆ. ರಾಜಸ್ಥಾನದ ಶ್ರೀಗಂಗಾನಗರ ಮತ್ತು ಪಂಜಾಬ್‌ನ ಅಮೃತಸರದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿದ್ದು, ಹಜರತ್ ನಿಜಾಮುದ್ದೀನ್, ನವದೆಹಲಿ ಮತ್ತು ಆನಂದ್ ವಿಹಾರ್ ನಿಲ್ದಾಣಗಳಿಗೆ ಬರುವ ಹಲವು ರೈಲುಗಳು ಒಂದರಿಂದ ನಾಲ್ಕು ಗಂಟೆಗಳವರೆಗೆ ತಡೆವಾಗಿ ಚಲಿಸುತ್ತಿವೆ. ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (12649) ಸುಮಾರು 1 ಗಂಟೆ ಮತ್ತು ಕರ್ನಾಟಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12627) 1 ಗಂಟೆ 18 ನಿಮಿಷ ವಿಳಂಬವಾಗಿವೆ. ಶ್ರೀಧಾಮ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12192) ಗರಿಷ್ಠ 3 ಗಂಟೆ 34 ನಿಮಿಷಗಳಷ್ಟು ತಡವಾಗಿ ಸಂಚರಿಸುತ್ತಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಕಡಿಮೆ ಗೋಚರತೆಯಿಂದಾಗಿ ಹಲವು ವಿಮಾನಗಳು ವಿಳಂಬವಾಗಿವೆ ಅಥವಾ ರದ್ದಾಗಿವೆ. ಇಂಡಿಗೋ ಮತ್ತು ಏರ್ ಇಂಡಿಯಾ ಕಂಪನಿಗಳು ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ನೀಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...