ದೆಹಲಿ ವಿಮಾನ ನಿಲ್ದಾಣದ ಸುತ್ತ ಆವರಿಸಿದ ಮಂಜು: 40 ವಿಮಾನಯಾನ ರದ್ದುಗೊಳಿಸಿದ ಏರ್ ಇಂಡಿಯಾ

Date:

ದೆಹಲಿ ವಿಮಾನ ನಿಲ್ದಾಣದ ಸುತ್ತ ಸೋಮವಾರ ದಟ್ಟವಾದ ಮಂಜು ಆವರಿಸಿದ್ದು ಅನೇಕ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಸೋಮವಾರ ದೆಹಲಿಗೆ ಮತ್ತು ಅಲ್ಲಿಂದ ಹೊರಡುವ 40 ವಿಮಾನಯಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ. ಈ ನಡುವೆ ಕೆಲವು ವಿಮಾನಗಳು ವಿಳಂಬವಾಗಬಹುದು ಎಂದು ಇಂಡಿಗೋ ಕೂಡಾ ಹೇಳಿದೆ.

ದಟ್ಟವಾದ ಮಂಜು ವಿಮಾಯಯಾನ ರದ್ದುಗೊಳಿಸಲು ಕಾರಣ ಎಂದು ಹೇಳಿರುವ ಏರ್‌ ಇಂಡಿಯಾ, “ನಾವು ಪರಿಸ್ಥಿತಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಯಾಣ ಸುರಕ್ಷಿತವಾದ ತಕ್ಷಣ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆ. ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ನಮ್ಮ ಅತಿಥಿಗಳಿಗೆ ಸಮಸ್ಯೆಯಾಗುವುದನ್ನು ತಪ್ಪಿಸಲು, ನಾವು ಕೆಲವು ವಿಮಾಯಯಾನಗಳನ್ನು ರದ್ದುಗೊಳಿಸಿದ್ದೇವೆ. ಇದೂ ಸಮಸ್ಯೆ ಉಂಟು ಮಾಡಬಹುದು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ವಿಮಾನ ನಿಲ್ದಾಣಗಳಲ್ಲಿ ನಮ್ಮ ತಂಡ ನಿಮಗೆ ಸಹಾಯ ಮಾಡಲು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದೆಹಲಿ | ಧೂಳಿನ ಬಿರುಗಾಳಿ; 205 ವಿಮಾನಗಳು ವಿಳಂಬ, ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರದ್ದಾದ ಏರ್ ಇಂಡಿಯಾ ವಿಮಾನಗಳು:

AI2767 / 2768
AI1787 / 1872
AI1721 / 1837
AI1701 / 1806
AI1725 / 1860
AI1745 / 1890
AI1797 / 1838
AI1703 / 1884
AI2653 / 2808
AI2469 / 2470
AI866
AI1737 / 1820
AI1719 / 1844
AI1785 / 1851
AI2495 / 2496
AI1715 / 1816
AI3313 / 3314
AI881 / 882
AI2465 / 2880

ನಾಗರಿಕ ವಿಮಾನಯಾನ ಸಚಿವಾಲಯವು ಪ್ರಯಾಣ ಸಲಹೆಯನ್ನು ನೀಡಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ತಮ್ಮ ವಿಮಾನಯಾನ ಸಂಸ್ಥೆಯೊಂದಿಗೆ ಮಾಹಿತಿಯನ್ನು ಪಡೆದು ತೆರಳುವಂತೆ ಹೇಳಿದೆ. ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಆವರಿಸಿರುವುದು ವಿಮಾನ ಪ್ರಯಾಣದ ಮೇಲೆ ಪ್ರಭಾವ ಬೀರಬಹುದು ಎಂದು ತಿಳಿಸಿದೆ.

ಇಂಡಿಗೋ ವಿಮಾನಗಳು ವಿಳಂಬ

ಇತ್ತೀಚೆಗೆ ಸಿಬ್ಬಂದಿ ಕೊರತೆಯಿಂದ ಹಲವು ವಿಮಾನಯಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ ಈಗ ದಟ್ಟ ಮಂಜು ಆವರಿಸಿರುವ ಕಾರಣದಿಂದಾಗಿ ಹಲವು ವಿಮಾನಗಳು ವಿಳಂಬವಾಗಬಹುದು ಎಂದು ಹೇಳಿದೆ. ಮಂಜಿನಿಂದಾಗಿ ರಸ್ತೆ ಸಂಚಾರವೂ ನಿಧಾನವಾಗಿರಬಹುದು ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...