ಅತ್ಯಾಚಾರ ಪ್ರಕರಣ | ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್: ಇದು 15ನೇ ಬಾರಿ

Date:

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್ ಸಿಂಗ್‌ಗೆ ಮತ್ತೆ 40 ದಿನಗಳ ಪೆರೋಲ್ ಮಂಜೂರಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿಯೂ ಪೆರೋಲ್ ಪಡೆದಿದ್ದ ಗುರ್ಮೀತ್‌ ಸಿಂಗ್‌ ಈಗ 15ನೇ ಬಾರಿಗೆ ಪೆರೋಲ್ ಮೇಲೆ ಹೊರಬರಲಿದ್ದಾರೆ.

ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರುವ ಗುರ್ಮೀತ್‌ ಸಿಂಗ್‌ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಆದರೆ ಗುರ್ಮೀತ್‌ ಸಿಂಗ್‌ಗೆ ಪದೇ ಪದೇ ಪೆರೋಲ್ ಲಭಿಸುವುದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರಿ ‘ದೇವಮಾನವ’ನಿಗೆ ಈ ಪರಿ ‘ಪೆರೋಲ್‌’ ಸಿಗುವುದಾದರೂ ಹೇಗೆ? ಸಂತ್ರಸ್ತೆಯರಿಗೆ ಶಿಕ್ಷೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2017ರಲ್ಲಿ ಶಿಕ್ಷೆ ಪ್ರಕಟವಾದ ನಂತರ ರಾಮ್ ರಹೀಮ್ ಜೈಲಿನಿಂದ ಹೊರಗಡೆ ಬರುತ್ತಿರುವುದು ಇದು 15 ನೇ ಬಾರಿಯಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 21 ದಿನಗಳ ಪೆರೋಲ್, ಫೆಬ್ರವರಿ 5ರ ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಜನವರಿಯಲ್ಲಿ 30 ದಿನಗಳ ಪೆರೋಲ್ ಪಡೆದಿದ್ದಾರೆ.

ಅಕ್ಟೋಬರ್ 5ರ ಹರಿಯಾಣ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು, ಅಕ್ಟೋಬರ್ 1ರಂದು ಅವರಿಗೆ 20 ದಿನಗಳ ಪೆರೋಲ್ ನೀಡಲಾಗಿತ್ತು. ಇದಕ್ಕೂ ಮೊದಲು, 2024ರ ಆಗಸ್ಟ್‌ನಲ್ಲಿ ಸಿಂಗ್‌ಗೆ 21 ದಿನಗಳ ಪೆರೋಲ್ ಸಿಕ್ಕಿದೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಕೇವಲ ಎರಡು ವಾರಗಳ ಮೊದಲು 2022ರ ಫೆಬ್ರವರಿ 7ರಿಂದ ಮೂರು ವಾರಗಳ ಪೆರೋಲ್ ನೀಡಲಾಗಿದೆ. ಜೈಲಿನಿಂದ ಹೊರಗಿದ್ದ 13 ಸಂದರ್ಭಗಳಲ್ಲಿ, ಗುರ್ಮೀತ್‌ ಸಿಂಗ್‌ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಡೇರಾ ಆಶ್ರಮದಲ್ಲಿ ತಂಗಿದ್ದರು ಎಂದು ಹೇಳಲಾಗಿದೆ.

ಅತ್ಯಾಚಾರ ಮತ್ತು ಕೊಲೆಗಳಂತಹ ಗಂಭೀರ ಅಪರಾಧಗಳಿಗಾಗಿ ಶಿಕ್ಷೆಗೊಳಗಾದ ವ್ಯಕ್ತಿಗೆ ಹೀಗೆ ಪದೇ ಪದೇ ಪೆರೋಲ್ ನೀಡುತ್ತಿರುವುದಕ್ಕೆ ವಿವಿಧ ಸಂಘಟನೆಗಳು, ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಈ ಹಿಂದೆ ಹರಿಯಾಣ ಸರ್ಕಾರವನ್ನು ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (SGPC) ಟೀಕಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...