ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೆಸಿಆರ್‌ಗೆ ಚುನಾವಣಾ ಆಯೋಗದ ನೋಟಿಸ್

Date:

ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಭಾರತ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.

ಏಪ್ರಿಲ್ 5 ರಂದು ಸಿರ್ಸಿಲ್ಲಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕೆಸಿಆರ್‌ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ ನಿರಂಜನ್ ಅವರು ದೂರು ನೀಡಿದ್ದು, ಈ ದೂರಿನ ಆಧಾರದಲ್ಲಿ ಚುನಾವಣಾ ಆಯೋಗವು ಕೆಸಿಆರ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಕೆಸಿಆರ್ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಹಲವು ಸಲಹೆಗಳು ಮತ್ತು ನೋಟಿಸ್‌, ಸೂಚನೆಗಳನ್ನು ನೀಡಲಾಗಿತ್ತು ಎಂದು ಆಯೋಗವು ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಕೆಸಿಆರ್ ಪ್ರಯಾಣಿಸುತ್ತಿದ್ದ ವಾಹನ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು

“ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರಿಂದ ಏಪ್ರಿಲ್ 6 ರಂದು ಚುನಾವಣಾ ಆಯೋಗಕ್ಕೆ ದೂರು ಬಂದಿದೆ. ಈ ದೂರಿನಲ್ಲಿ ಕೆ. ಚಂದ್ರಶೇಖರ್ ರಾವ್ ಅವರು ಸಿರ್ಸಿಲ್ಲಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ವಿರುದ್ಧ ಅಸಭ್ಯ, ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 18 ರಂದು ಬೆಳಿಗ್ಗೆ 11 ಗಂಟೆಯೊಳಗೆ ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸುವಂತೆ ಚುನಾವಣಾ ಆಯೋಗ ಕೆಸಿಆರ್‌ಗೆ ತಿಳಿಸಿದೆ. ನಿಗದಿತ ಸಮಯದೊಳಗೆ ಪ್ರತಿಕ್ರಿಯೆ ಬಾರದಿದ್ದರೆ ಚುನಾವಣಾ ಆಯೋಗವು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಬಂಧನ | ಪ್ರಜಾಪ್ರಭುತ್ವದಲ್ಲಿ ಮತ್ತೊಂದು ಕರಾಳ ದಿನ: ಕೆಸಿಆರ್

ಈ ನಡುವೆ 2024 ರ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾದ ಬಳಿಕ ಚುನಾವಣಾ ಆಯೋಗವು ಕೈಗೊಂಡ ಕ್ರಮಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿ) ಮಂಗಳವಾರ ಬಹಿರಂಗಪಡಿಸಿದೆ.

ಒಟ್ಟು ದೂರುಗಳಲ್ಲಿ 51 ಬಿಜೆಪಿ ನೀಡಿದ ದೂರಾಗಿದ್ದು ಈ ಪೈಕಿ 38 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ 59 ದೂರು ನೀಡಿದ್ದು ಈ ಪೈಕಿ 51 ಪ್ರಕರಣದಲ್ಲಿ ಕ್ರಮಕೈಗೊಳ್ಳಲಾಗಿದೆ. ಇತರೆ ಪಕ್ಷಗಳಿಂದ 90 ದೂರುಗಳು ಬಂದಿದ್ದು, ಈ ಪೈಕಿ 80 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಮಹಿಳೆಯರ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ ಪಕ್ಷಗಳ ಮುಖಂಡರಿಗೆ ನೋಟಿಸ್ ಜಾರಿ ಮಾಡುವ ಮೂಲಕ ಮಹಿಳೆಯರ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವ ದೃಢವಾದ ನಿಲುವು ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...