ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ: ರಾಜೀನಾಮೆಗೆ ಮುಂದಾದ ಡಿಸಿಎಂ ಫಡ್ನವಿಸ್

Date:

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ, ತಾವು ಆ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ತನ್ನ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸಿ ಎಂದು ಬಿಜೆಪಿ ನಾಯಕರಿಗೆ ಮನವಿ ಮಾಡಿರುವುದಾಗಿ ಫಡ್ನವಿಸ್ ತಿಳಿಸಿದ್ದಾರೆ.

“ಮಹಾರಾಷ್ಟ್ರದ ಫಲಿತಾಂಶದ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ನಾನು ಪಕ್ಷವನ್ನು ಮುನ್ನಡೆಸಿದ್ದೆ. ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ತಮ್ಮನ್ನು ತಮ್ಮ ಕರ್ತವ್ಯಗಳಿಂದ ಮುಕ್ತಗೊಳಿಸಿ ಎಂದು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

ಈ ವರ್ಷದ ನವೆಂಬರ್‌ ನಂತರದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯುವ ಕಾರಣದಿಂದ ಪಕ್ಷದ ಕಡೆ ಗಮನಹರಿಸಲು ಅವಕಾಶ ನೀಡಬೇಕೆಂದು ಬಿಜೆಪಿ ನಾಯಕರಿಗೆ ತಿಳಿಸಿರುವುದಾಗಿ ಫಡ್ನವೀಸ್‌ ಹೇಳಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಿಜೆಪಿ ಘಟಕ ಪಕ್ಷದ ಕಳಪೆ ಪ್ರದರ್ಶನವನ್ನು ವಿಮರ್ಶಿಸಲು ಸಭೆಯನ್ನು ಹಮ್ಮಿಕೊಂಡಿತ್ತು. ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಹಾಗೂ ಜಿಬೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬವಾನ್‌ಕುಲೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ 45 ಕ್ಷೇತ್ರಗಳಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 17 ಸ್ಥಾನ ಮಾತ್ರ ಗೆದ್ದಿತ್ತು. ಇವುಗಳಲ್ಲಿ ಬಿಜೆಪಿ 9, ಶಿಂಧೆ ಶಿವಸೇನೆ 7, ಅಜಿತ್‌ ಪವಾರ್‌ ಎನ್‌ಸಿಪಿ 1 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ 2019ರ ಲೋಕಸಭಾ ಚುನಾವಣೆಯಲ್ಲಿ 23 ಸ್ಥಾನಗಳಲ್ಲಿ ಜಯಗಳಿಸಿತ್ತು.

ಇಂಡಿಯಾ ಒಕ್ಕೂಟದ ಪಕ್ಷಗಳು 30 ಸ್ಥಾನಗಳನ್ನು ಗೆದ್ದು ಉತ್ತಮ ಸಾಧನೆ ತೋರಿದ್ದವು. ಇದರಲ್ಲಿ ಕಾಂಗ್ರೆಸ್ 13, ಉದ್ಧವ್‌ ಠಾಕ್ರೆ ಶಿವಸೇನೆ 9, ಶರದ್‌ ಪವಾರ್‌ ಎನ್‌ಸಿಪಿ 8 ಸ್ಥಾನಗಳಲ್ಲಿ ವಿಜಯಗಳಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...