ಮಾರ್ಗಸೂಚಿಗಳ ಉಲ್ಲಂಘನೆ: ಮೂವರು ಅಧಿಕಾರಿಗಳನ್ನು ತೆಗೆದುಹಾಕಲು ಏರ್‌ ಇಂಡಿಯಾಗೆ ಡಿಜಿಸಿಎ ಸೂಚನೆ

Date:

ಮೂರು ಅಧಿಕಾರಿಗಳನ್ನು ತೆಗೆದುಹಾಕುವಂತೆ ಟಾಟಾ ಗ್ರೂಪ್ ಒಡೆತನದ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಸೂಚಿಸಿದೆ. ಮಾರ್ಗಸೂಚಿ ಉಲ್ಲಂಘನೆ ಸೇರಿದಂತೆ ಗಂಭೀರ ಲೋಪಗಳನ್ನು ಮಾಡಿರುವ ಕಾರಣದಿಂದಾಗಿ ಏರ್‌ ಇಂಡಿಯಾದ ವಿಭಾಗೀಯ ಉಪಾಧ್ಯಕ್ಷರು ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ತೆಗೆದುಹಾಕುವಂತೆ, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಡಿಜಿಸಿಎ ಹೇಳಿದೆ.

ಇನ್ನೊಂದೆಡೆ ಮೇ 16 ಮತ್ತು 17ರಂದು ಬೆಂಗಳೂರು-ಲಂಡನ್ ವಿಮಾನಗಳ ಸ್ಪಾಟ್‌ ಚೆಕ್‌ಗಳ ಸಮಯದಲ್ಲಿ 10 ಗಂಟೆಗಳ ಮಿತಿಯನ್ನು ಮೀರಿರುವುದನ್ನು ಪತ್ತೆಹಚ್ಚಲಾಗಿದೆ. ಸಿಬ್ಬಂದಿಗೆ ವಿಮಾನ ಕರ್ತವ್ಯ ಸಮಯ ಮಿತಿಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಏರ್ ಇಂಡಿಯಾಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನು ಓದಿದ್ದೀರಾ? ವಿಮಾನ ದುರಂತ | ಭವಿಷ್ಯದಲ್ಲಿ ಸಂಭವಿಸುವ ಅನಾಹುತ ತಡೆಗೆ ಉನ್ನತ ಮಟ್ಟದ ಸಮಿತಿ ರಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏರ್‌ ಇಂಡಿಯಾ ಅಧಿಕಾರಿಗಳು ಮಾರ್ಗಸೂಚಿ ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಈ ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದ್ದು, ಪ್ರತಿಕ್ರಿಯಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.

ಜೂನ್ 12ರಂದು ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನ ಕೆಲವೇ ನಿಮಿಷಗಳಲ್ಲಿ ಅಪಘಾತಗೊಂಡಿದೆ. ಹಾಸ್ಟೆಲ್‌ ಮೇಲೆ ವಿಮಾನ ಪತನಗೊಂಡಿದ್ದು, 270ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ. ಈ ಘಟನೆ ನಡೆದು ಎರಡು ವಾರದಲ್ಲೇ ಏರ್‌ ಇಂಡಿಯಾಗೆ ಶೋಕಾಸ್ ನೋಟಿಸ್ ಬಂದಿದೆ. ಜೊತೆಗೆ ಮೂವರು ಹಿರಿಯ ಅಧಿಕಾರಿಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.

ಹೀಗೆಯೇ ಮುಂದುವರೆದರೆ ಪರವಾನಗಿ ರದ್ಧತಿಯಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಈ ಬೆನ್ನಲ್ಲೇ ಸುರಕ್ಷತೆ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಮತ್ತು ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಏರ್ ಇಂಡಿಯಾ ಬದ್ಧವಾಗಿದೆ ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...