ಪತಿಯೊಂದಿಗೆ ‘ಲೈಂಗಿಕ ಸಂಬಂಧ’ಕ್ಕೆ ಪತ್ನಿ ನಿರಾಕರಿಸಿದರೆ ವಿಚ್ಛೇದನ ನೀಡಬಹುದು: ಬಾಂಬೆ ಹೈಕೋರ್ಟ್

Date:

ಪತಿಯೊಂದಿಗೆ ಪತ್ನಿ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸುವುದು, ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತಿಯನ್ನು ಅನುಮಾನಿಸುವುದು ಕ್ರೌರ್ಯಕ್ಕೆ ಸಮಾನವಾಗಿದೆ. ಇಂತಹ ವಿಚಾರಗಳನ್ನು ವಿಚ್ಛೇದನ ಪಡೆಯಲು ಕಾರಣವಾಗಿ ಉಲ್ಲೇಖಿಸಬಹುದು ಎಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ.

ದಂಪತಿಗಳಿಗೆ ಪುಣೆ ಕೌಟುಂಬಿಕ ನ್ಯಾಯಾಲಯವು ನೀಡಿದ ವಿಚ್ಛೇದನವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಬಾಂಬೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯಲ್ಲಿ ವಾದಿಸಿದ್ದ ಮಹಿಳೆಯು, ತಮಗೆ ತನ್ನ ಅತ್ತೆ-ಮಾವ ಮಾತ್ರವೇ ಕುರುಕುಳ ನೀಡುತ್ತಿದ್ದರು. ತನ್ನ ಪತಿಯನ್ನು ಪ್ರೀತಿಸುತ್ತೇನೆ, ಅವರಿಂದ ದೂರವಾಗಲು ಬಯಸುವುದಿಲ್ಲ. ತಮಗೆ ವಿಚ್ಛೇದನ ಬೇಡ ಎಂದು ಮನವಿ ಮಾಡಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ನೀಲಾ ಗೋಖಲೆ ಅವರಿದ್ದ ಪೀಠವು, ಮಹಿಳೆಯ ಅರ್ಜಿಯನ್ನು ವಜಾಗೊಳಿಸಿದೆ. ಕುಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಛೇದನ ಆದೇಶವನ್ನು ಎತ್ತಿ ಹಿಡಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ರಷ್ಯಾ ತೈಲ ಖರೀದಿಸಿದರೆ 500% ಸುಂಕ ಬೆದರಿಕೆ: ಭಾರತದ ಮೇಲೆ ಅಮೆರಿಕ-ನ್ಯಾಟೋ ‘ಇಬ್ಬಂದಿ ನೀತಿ’

ವಿಚಾರಣೆ ವೇಳೆ, ಮಹಿಳೆಯು ತನ್ನ ಪತಿಯೊಂದಿಗೆ ಅವರ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಎದುರು ವರ್ತಿಸಿರುವ ರೀತಿಯನ್ನು ದೌರ್ಜನ್ಯವೆಂದು ಪರಿಗಣಿಸಲಾಗಿದೆ. ವಿಶೇ‍ಷಚೇತನ ಸಹೋದರಿ ಮತ್ತು ಅವರ ಕುಟುಂಬ ಸದಸ್ಯರ ವಿಚಾರದಲ್ಲಿ ಆಕೆಯ ಅಸಡ್ಡೆ ಕೂಡ ಅವರ ದುಃಖಕ್ಕೆ ಕಾರಣವಾಗಿದೆ ಎಂಬುದನ್ನು ನ್ಯಾಯಾಧೀಶರು ಗಮನಿಸಿದ್ದಾರೆ.

ಮಹಿಳೆಯ ಪತಿ ಪರವಾಗಿ ವಾದ ಮಂಡಿಸಿ ವಕೀಲರು, “2013ರಲ್ಲಿ ವಿವಾಹವಾದ ದಂಪತಿಗಳು ಅಂದಿನಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪತಿಯ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಉದ್ಯೋಗಿಗಳ ಎದುರು ಆಕೆ ಕಿರುಕುಳ ನೀಡುವ ರೀತಿಯಲ್ಲಿ ವರ್ತಿಸಿದ್ದಾರೆ. ಪತಿಯೊಂದಿಗೆ ಲೈಂಗಿಕ ಸಂಬಂಧವನ್ನು ನಿರಾಕರಿದ್ದಾರೆ. ಮಾತ್ರವಲ್ಲದೆ, ವಿವಾಹೇತರ ಸಂಬಂಧ ಹೊಂದಿದ್ದಾನೆಂದು ಶಂಕಿಸಿ, ನಿರಂತರ ಜಗಳ ಮಾಡುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಮದುವೆಯಾದ ಎರಡೇ ವರ್ಷದಲ್ಲಿ – 2015ರಲ್ಲಿ ಅರ್ಜಿದಾರ ಮಹಿಳೆಯ ಪತಿಯು ವಿಚ್ಛೇದನಕ್ಕಾಗಿ ಪುಣೆಯ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಅವರ ಮನವಿಯನ್ನು ಪುರಸ್ಕರಿಸಿತ್ತು. ವಿಚ್ಛೇದನ ನೀಡಿತ್ತು. ವಿಚ್ಛೇದನದ ಆದೇಶವನ್ನು ಪ್ರಶ್ನಿಸಿ, ಮಹಿಳೆಯು ಬಾಂಬೆ ಹೈಕೋರ್ಟ್‌ ಮೊರೆಹೋಗಿದ್ದರು. ಆದರೆ, ಆಕೆಯ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...