ಡಿ ಕೆ ಶಿವಕುಮಾರ್ ವಿವಾದ: ನಡ್ಡಾ, ರಿಜಿಜು ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

Date:

ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನೀಡಿರುವ ಮೀಸಲಾತಿ ಕುರಿತ ಹೇಳಿಕೆಗಳ ಕುರಿತು ಸದನವನ್ನು ದಿಕ್ಕುತಪ್ಪಿಸಿದ್ದಾರೆ ಎಂದು ಆರೋಪಿಸಿ ಸಭಾನಾಯಕ ಜೆ ಪಿ ನಡ್ಡಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ವಿರುದ್ಧ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಜೈರಾಮ್‌ ರಮೇಶ್ ಅವರು ರಾಜ್ಯಸಭೆಯಲ್ಲಿ ಕಾರ್ಯವಿಧಾನ ಮತ್ತು ನಡವಳಿಕೆಗಳ ನಿಯಮ 188 ರ ಅಡಿ ಈ ಇಬ್ಬರು ನಾಯಕರ ವಿರುದ್ಧ ಎರಡು ಪ್ರತ್ಯೇಕ ನೋಟಿಸ್ ನೀಡಿದ್ದಾರೆ.

ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್​ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ, ಮಾರ್ಚ್ 24 ರಂದು ರಾಜ್ಯಸಭೆಯು ಸಭೆ ಸೇರಿದ ಕೆಲ ಸಮಯದ ನಂತರ, ರಿಜಿಜು ಅವರು, ಶಿವಕುಮಾರ್ ಅವರ ಹೇಳಿಕೆಯನ್ನು ತಿರುಚುವ ಮೂಲಕ ಸದನವನ್ನು ದಾರಿತಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೇಲಂಗಿ ಕಳಚದೇ ಪಟ್ಟಣಂತಿಟ್ಟ ದೇಗುಲ ಪ್ರವೇಶ; ಕೇರಳದ ಪದ್ಧತಿ ವಿರುದ್ಧ ವಿನೂತನ ಪ್ರತಿಭಟನೆ

ಜೆ ಪಿ ನಡ್ಡಾ ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳು, ವಾಸ್ತವಿಕ ಆಧಾರಗಳ ಕೊರತೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಅದರ ನಾಯಕರನ್ನು ದೂಷಿಸುವ ಪೂರ್ವಯೋಜಿತ ಉದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದೆ. ಈ ಆರೋಪಗಳು ವಾಸ್ತವದಿಂದ ಕೂಡಿಲ್ಲ, ಸಚಿವರ ಹೇಳಿಕೆಗಳನ್ನು ತಿರುಚಿ ಸದನಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ಇದು ಸದನದ ಉಲ್ಲಂಘನೆಯಾಗಿದೆ ಎಂದು ಜೈರಾಮ್ ರಮೇಶ್ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಡಿ ಕೆ ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಖುದ್ದು ಶಿವಕುಮಾರ್‌ ಆ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ರಿಜಿಜು ಅವರು ತಿರುಚಿದ ಹೇಳಿಕೆ ನೀಡಿ ಸದನದ ದಿಕ್ಕು ತಪ್ಪಿಸಿದ್ದಾರೆ. ಹೀಗಾಗಿ ಇದು ಹಕ್ಕುಚ್ಯುತಿಗೆ ಅರ್ಹವಾದ ಪ್ರಕರಣ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮುಸ್ಲಿಮರಿಗೆ ಮೀಸಲಾತಿ ನೀಡಲು ನಮ್ಮ ಪಕ್ಷ ಸಂವಿದಾನವನ್ನು ಬದಲಿಸಲಿದೆ ಎಂದು ಸಾಂವಿಧಾನಿಕ ಹುದ್ದೆ ಹೊಂದಿರುವ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೆಸರು ಉಲ್ಲೇಖಿಸದೆ ರಿಜಿಜು ಅವರು ರಾಜ್ಯಸಭೆಯಲ್ಲಿ ಹೇಳಿದ್ದರು.

ಡಿ ಕೆ ಶಿವಕುಮಾರ್ ಹೇಳಿದ್ದೇನು?

ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಡಿಸಿಎಂ ಡಿ ಕೆ ಶಿವಕುಮಾರ್‌, ನಾನು ಧರ್ಮದಲ್ಲಿ ನಂಬಿಕೆ ಇಟ್ಟವನಲ್ಲ. ಮಾನವೀಯತೆಯಲ್ಲಿ ನಂಬಿಕೆ ಇಟ್ಟವನು. ಮಾನವ ಧರ್ಮವೇ ಶ್ರೇಷ್ಠ ಎಂದು ನಂಬಿದವನು’ ಎಂದು ಶಿವಕುಮಾರ್ ಹೇಳುತ್ತಾರೆ. ಆಗ, ಸರ್ಕಾರಿ ಗುತ್ತಿಗೆ ಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಅಗತ್ಯ ಏನಿತ್ತು? ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನ ಅವಕಾಶ ನೀಡುವುದಿಲ್ಲ ಎಂಬ ಟೀಕೆ ಇದೆಯಲ್ಲ ಎನ್ನುವ ಸಂದರ್ಶಕನ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ಹೌದು, ನಾನು ಅದನ್ನು ಒಪ್ಪುತ್ತೇನೆ. ನ್ಯಾಯಾಲಯ ಏನು ತೀರ್ಪು ನೀಡುತ್ತದೆ ಎಂಬುದನ್ನು ನೋಡೋಣ. ನಾವು ಏನೋ ಪ್ರಾರಂಭಿಸಿದ್ದೇವೆ. ಪ್ರತಿಯೊಬ್ಬರೂ ನ್ಯಾಯಾಲಯಕ್ಕೆ ಹೋಗುತ್ತಾರೆ ಎಂಬುದು ನನಗೆ ಗೊತ್ತು. ಒಳ್ಳೆಯ ದಿನ ಬರಲಿದೆ. ಸಾಕಷ್ಟು ಬದಲಾವಣೆ ಆಗಲಿದೆ. ಸಂವಿಧಾನದಲ್ಲಿ ಬದಲಾವಣೆ ಆಗಲಿದೆ. ನ್ಯಾಯಾಲಯಗಳ ಕೆಲವೊಂದು ತೀರ್ಪುಗಳು ಸಂವಿಧಾನದ ಪರಿಷ್ಕರಣೆ ಮಾಡಿವೆ’ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...