ದೇಶದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರು ಪ್ರಾಣತ್ಯಾಗ ಮಾಡಿದ್ದಾರೆ: ಡಿಎಂಕೆ ಸಂಸದೆ ಕನಿಮೋಳಿ

Date:

ಈ ದೇಶದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಂ ಸಮುದಾಯದ ಜನರು ಹೋರಾಟ ನಡೆಸಿದ್ದಾರೆ. ಅವರು ಜೈಲುಗಳಿಗೆ ಹೋಗಿದ್ದು, ದೇಶಕ್ಕಾಗಿ ಹೋರಾಡುವಾಗ ಪ್ರಾಣ ತ್ಯಾಗವನ್ನೂ ಮಾಡಿದ್ದಾರೆ. ಅಂತಹ ಒಬ್ಬ ಆರ್‌ಎಸ್‌ಎಸ್‌ ನಾಯಕನನ್ನು ನನಗೆ ತೋರಿಸಿ ಎಂದು ಡಿಎಂಕೆ ಸಂಸದೆ ಕನಿಮೋಳಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚೆನ್ನೈನ ಇಂಡಿಯನ್ ವುಮೆನ್ ಲೀಗ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಆರ್‌ಎಸ್‌ಎಸ್‌ ಯಾವುದೇ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.

ಆರ್‌ಎಸ್‌ಎಸ್‌ ಕ್ಷಮಾಪಣೆ ಪತ್ರ ಬರೆದು ಜೈಲಿನಿಂದ ಹೊರಬಂದಿದ್ದ ಓರ್ವ ವ್ಯಕ್ತಿಯನ್ನು ಮಾತ್ರ ಹೆಸರಿಸುತ್ತಾರೆ. ಆದರೆ,ಅದಕ್ಕಾಗಿ ಅವರು ಒಂದು ಕತೆಯನ್ನು ನಿರೂಪಿಸುತ್ತಾರೆ. ನಾನದನ್ನು ತುಂಬಾ ಇಷ್ಟಪಡುತ್ತೇನೆ, ಸಾವರ್ಕರ್ ಕ್ಷಮಾಪಣೆ ಪತ್ರ ನೀಡಿ, ಜೈಲಿನಿಂದ ಹೊರ ಬಂದರು ಎಂಬುದು ಎಲ್ಲರಿಗೂ ತಿಳಿದಿದ್ದರೂ, ಆರ್‌ಎಸ್‌ಎಸ್‌ನವರು ಮಾತ್ರ ಸಾವರ್ಕರ್ ಪಕ್ಷಿಯ ಮೇಲೆ ಕುಳಿತುಕೊಂಡು ಜೈಲಿನಿಂದ ಹೊರಗೆ ಬಂದರು ಎಂದು ಹೇಳುತ್ತಾರೆ ಎಂದು ಕನಿಮೋಳಿ ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!

ಅವರು ನಮ್ಮತ್ತ ನೋಡಿ, ನಮ್ಮನ್ನು ದೇಶದ್ರೋಹಿಗಳು ಹಾಗೂ ನಗರ ನಕ್ಸಲೀಯರು ಎಂದು ಟೀಕಿಸುತ್ತಾರೆ.ಇತ್ತೀಚೆಗೆ ಸಹ, ಕೇಂದ್ರ ಸಚಿವರು ನಮ್ಮನ್ನು ಅನಾಗರಿಕರು ಎಂದು ಬಣ್ಣಿಸಿದ್ದರು. ನಿಮಗೆ ನಾಗರಿಕತೆ ಎಂದರೇನು ಎಂದು ತಿಳಿಯದಿರುವುದರಿಂದ, ನೀವು ನಮ್ಮನ್ನು ಅನಾಗರಿಕರು ಎಂದು ಕರೆದಿರುವ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಕನಿಮೋಳಿ ಹೇಳಿದರು.

ಈ ವೇಳೆ, ಕೇಂದ್ರ ಸರ್ಕಾರದ ತ್ರಿವಳಿ ತಲಾಖ್ ಕಾಯ್ದೆಯನ್ನೂ ಟೀಕಿಸಿದ ಕನಿಮೋಳಿ, ಈ ಕಾಯ್ದೆಯು ಮುಸ್ಲಿಂ ಮಹಿಳೆಯರ ಕಲ್ಯಾಣದ ಗುರಿಯನ್ನು ಹೊಂದಿಲ್ಲ, ಬದಲಿಗೆ ಮುಸ್ಲಿಂ ಪುರುಷರನ್ನು ಅಪರಾಧೀಕರಣಗೊಳಿಸುವ ಉದ್ದೇಶ ಹೊಂದಿದೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಬೃಹತ್ ಪ್ರತಿಭಟನೆಗಳು ನಡೆದವು. ಈ ಕಾಯ್ದೆಯು ಹಲವು ವಿಧದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ದಮನಿಸುತ್ತದೆ ಹಾಗೂ ಅವರನ್ನು ದೇಶದ ಶತ್ರುಗಳು ಎಂದು ಬಿಂಬಿಸುತ್ತದೆ. ಆದರೆ, ಮುಸ್ಲಿಂ ಸಮುದಾಯದವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ್ದಾರೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...