ಜೀ-ಪೇ ಸ್ಕ್ಯಾನ್ ಮಾಡಿ ಕೇಂದ್ರದ ಭ್ರಷ್ಟಾಚಾರ ತಿಳಿಯಿರಿ; ತಮಿಳುನಾಡಿನಲ್ಲಿ ಪ್ರಧಾನಿ ವಿರುದ್ಧ ಅಭಿಯಾನ

Date:

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳ ಬಗ್ಗೆ ತಮಿಳುನಾಡಿನ ಡಿಎಂಕೆ ನೇತೃತ್ವದ ಆಡಳಿತ ಪಕ್ಷ ರಾಜ್ಯದಾದ್ಯಂತ ಜಿ-ಪೇ ಪೋಸ್ಟರ್‌ ಅಭಿಯಾನ ಹಮ್ಮಿಕೊಂಡಿದೆ.

‘ಕೋಡ್‌ ಸ್ಕ್ಯಾನ್‌ ಮಾಡಿ, ಸರ್ಕಾರದ ಹಗರಣಗಳನ್ನು ನೋಡಿ’ ಎಂಬ ಪ್ರಧಾನಿ ಭಾವಚಿತ್ರವಿರುವ ಪೋಸ್ಟರ್‌ಗಳು ರಾಜ್ಯದಾದ್ಯಂತ ಗೋಡೆಗಳು, ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಿಗೆ ಲಭ್ಯಗೊಳಿಸಲಾಗಿದೆ.

ಗೋಡೆಗಳಲ್ಲಿರುವ ಪ್ರಧಾನಿ ಭಾವಚಿತ್ರವನ್ನು ಸ್ಕ್ಯಾನ್ ಮಾಡಿದರೆ ವಿಡಿಯೋ ಮೂಲಕ ಚುನಾವಣಾ ಬಾಂಡ್‌ಗಳ ಹಗರಣಗಳು ಒಳಗೊಂಡ ಹತ್ತಾರು ಭ್ರಷ್ಟಾಚಾರದ ದೃಶ್ಯಗಳು ತೆರೆದುಕೊಳ್ಳುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ವೇಲೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಭಾಷಣ ಮಾಡಿದ ಪ್ರಧಾನಿ, ಆಡಳಿತ ಪಕ್ಷ ಡಿಎಂಕೆ ವಿರುದ್ಧ ಕಟುವಾಗಿ ಟೀಕಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಒಡೆದು ಆಳುವ ನೀತಿಯ ಮೂಲಕ ರಾಜಕಾರಣ ಮಾಡುತ್ತಿದೆ. ಡಿಎಂಕೆ ಹಾಗೂ ಅದರ ಮಿತ್ರ ಪಕ್ಷ ಕಾಂಗ್ರೆಸ್ ಸಾರ್ವಜನಿಕ ಹಿತಾಸಕ್ತಿಗಿಂತ ಕುಟುಂಬ ಅಭಿವೃದ್ಧಿಯತ್ತ ತೊಡಗಿಕೊಂಡಿದೆ ಎಂದು ಪ್ರಧಾನಿ ಹೇಳಿದ್ದರು.

ಈ ರೀತಿ ಹೇಳಿದ ಮರುದಿನವೆ ರಾಜ್ಯದಾದ್ಯಂತ ಪ್ರಧಾನಿ ವಿರುದ್ಧದ ಜಿ-ಪೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಕೇಂದ್ರದ ವಿರುದ್ಧ ಡಿಎಂಕೆ ಸರ್ಕಾರ ಅಭಿಯಾನದಲ್ಲಿ ತೊಡಗಿದೆ.

ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏ.19ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಇಂಡಿಯಾ ಮೈತ್ರಿಕೂಟದ ಪಕ್ಷಗಳಾದ ಡಿಎಂಕೆ 21, ಕಾಂಗ್ರೆಸ್ 9 ಸೇರಿದಂತೆ ಇತರ ಮಿತ್ರ ಪಕ್ಷಗಳು ಎಲ್ಲ 39 ಸ್ಥಾನಗಳಲ್ಲಿ ಸ್ಪರ್ಧಿಸಿವೆ.

ಅದೇ ರೀತಿ ಎನ್‌ಡಿಎ ಮಿತ್ರ ಪಕ್ಷಗಳಾದ ಬಿಜೆಪಿ 19, ಪಿಎಂಕೆ 10 ಕ್ಷೇತ್ರ ಸೇರಿ 39 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ 32 ಸ್ಥಾನಗಳಲ್ಲಿ ಸ್ಪರ್ಧಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...