ಗುಜರಾತ್ ವಿಮಾನ ದುರಂತ | ಡಿಎನ್‌ಎ ಹೊಂದಾಣಿಕೆ; ಮೊದಲ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

Date:

ಗುಜರಾತ್ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಒಂಬತ್ತು ಮಂದಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಪೈಕಿ ಡಿಎನ್‌ಎ ಹೊಂದಾಣಿಗೆ ಮಾಡಿ ಮೊದಲ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಶಿಷ್ಟಾಚಾರದ ಪ್ರಕಾರ, ಸಂಪೂರ್ಣ ಡಿಎನ್‌ಎ ಪರಿಶೀಲನೆ ಮತ್ತು ಕಾನೂನು ದಾಖಲೆಗಳ ನಂತರವೇ ಮೃತದೇಹಗಳ ಹಸ್ತಾಂತರ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಇನ್ನು ಸಂಬಂಧಿಕರು ಗುರುತಿಸಿದ ಕಾರಣ ಎಂಟು ಮಂದಿಯ ಮೃತದೇಹವನ್ನು ಡಿಎನ್‌ಎ ಪ್ರೊಫೈಲಿಂಗ್ ಇಲ್ಲದೆಯೇ ಆಸ್ಪತ್ರೆಯು ಅವರ ಕುಟುಂಬಗಳಿಗೆ ಹಸ್ತಾಂತರಿಸಿದೆ. ವಿಮಾನ ಅಪಘಾತ ಸ್ಥಳದಿಂದ ಇಲ್ಲಿಯವರೆಗೆ ಸುಮಾರು 270 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ ಎಂದು ವೈದ್ಯರು ಶನಿವಾರ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ಗುರುವಾರ ಪತನಗೊಂಡಿದೆ. ವಿಮಾನದಲ್ಲಿದ್ದ 242 ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳಿದ್ದ ಹಾಸ್ಟೆಲ್‌ಗೆ ಈ ವಿಮಾನ ಅಪ್ಪಳಿಸಿದ ಕಾರಣ ಮೆಸ್‌ನಲ್ಲಿ ಊಟ ಮಾಡುತ್ತಿದ್ದ ವೈದ್ಯರು ಸೇರಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಇನ್ನು ಡಿಎನ್‌ಎ ಗುರುತಿಸುವ ಪ್ರಕ್ರಿಯೆ ಪೂರ್ಣವಾಗುವವರೆಗೂ ಅಧಿಕೃತ ಮೃತರ ಸಂಖ್ಯೆ ಹೇಳಲಾಗದು ಎಂದು ವರದಿಯಾಗಿದೆ. ವಿಮಾನದಲ್ಲಿ 169 ಭಾರತೀಯ ಪ್ರಯಾಣಿಕರು, 53 ಬ್ರಿಟಿಷ್, ಏಳು ಮಂದಿ ಪೋರ್ಚುಗೀಸ್ ಮತ್ತು ಒಬ್ಬ ಕೆನಡಿಯನ್ ಮತ್ತು 12 ಸಿಬ್ಬಂದಿ ಇದ್ದರು ಎಂದು ಈಗಾಗಲೇ ಏರ್‌ ಇಂಡಿಯಾ ತಿಳಿಸಿದೆ. ಮೃತರ ಗುರುತಿಗಾಗಿ ವಿದೇಶದಲ್ಲಿರುವ ಕುಟುಂಬಸ್ಥರೂ ಭಾರತಕ್ಕೆ ಧಾವಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...