ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಅಶೋಕ ವಿವಿಯ ಪ್ರಾಧ್ಯಾಪಕ ಅಲಿ ಖಾನ್ ಯಾರು ಗೊತ್ತೆ?

Date:

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದರು. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿತ್ತು.

ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಬಂಧಿಸಿದ ನಂತರ, ನೂರಾರು ವಿದ್ಯಾರ್ಥಿಗಳು ಈ ಕ್ರಮವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಾಧ್ಯಾಪಕರು ದೇಶ ಅಥವಾ ಸಂವಿಧಾನದ ಬಗ್ಗೆ ಎಂದಿಗೂ ಅಗೌರವ ವ್ಯಕ್ತಪಡಿಸಿಲ್ಲ. ಅವರು ನಮಗೆ ತರಗತಿಯಲ್ಲಿ ಅಂತಹ ಅಗೌರವವನ್ನು ಎಂದಿಗೂ ಕಲಿಸಿಲ್ಲ, ಅವರನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದರು.

ಈ ನಡುವೆ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಮಹ್ಮದಾಬಾದ್ ಅವರ ಕುಟುಂಬ ಶ್ರೇಷ್ಠ ಪರಂಪರೆ ಹಾಗೂ ಪೂರ್ವಜರು ಜಾತ್ಯತೀತತೆ, ದೇಶಪ್ರೇಮವನ್ನೇ ಉಸಿರಾಗಿಸಿಕೊಂಡಿದ್ದವರು ಎಂಬುದನ್ನು ತಿಳಿದುಕೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂದಿನ ಮೂರು ವರ್ಷದಲ್ಲಾದರೂ ಸರ್ಕಾರ ಜನಪರವಾಗಿರಬಹುದೇ?

ಅಲಿ ಖಾನ್ ಮಹ್ಮದಾಬಾದ್ ಅವರು ವಿಶ್ವದಲ್ಲೇ ಹೆಸರುವಾಸಿಯಾಗಿರುವ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅವರ ತಂದೆ, ರಾಜಾ ಮಹ್ಮದಾಬಾದ್ ಕೂಡ ರಾಜಕೀಯದಲ್ಲಿದ್ದವರು. ಮಹ್ಮದಾಬಾದ್ ಅವರ ತಾಯಿ, ರಾಣಿ ವಿಜಯ್ ಅವರು ನಾಗರೀಕ ಸೇವೆ ಅಧಿಕಾರಿಯಾಗಿ ಭಾರತದ ರಾಯಭಾರಿ ಕಚೇರಿಯಲ್ಲಿ ಅಧಿಕಾರಿಯಾಗಿ ಹೆಸರು ಮಾಡಿದ್ದ ಜಗತ್ ಸಿಂಗ್ ಮೆಹ್ತಾ ಅವರ ಪುತ್ರಿ. ಅವರ ಸೋದರ ವಿಕ್ರಮ್ ಮೆಹ್ತಾ ಕೂಡ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದವರು.

ಬಹುತೇಕ ದೇಶಗಳಲ್ಲಿ, ಇಂತಹ ಶ್ರೇಷ್ಠ ಪರಂಪರೆ ಮತ್ತು ವಿದ್ವತ್‌ಪೂರ್ಣ ಸ್ಥಾನಮಾನ ಹೊಂದಿರುವ ನಾಗರಿಕರನ್ನು ಹಾಗೂ ಅವರ ಕುಟುಂಬದವರನ್ನು ಗೌರವಿಸಲಾಗುತ್ತದೆ. ಆದರೆ ನಮ್ಮ ದೇಶದಲ್ಲಿ ದೇಶದ್ರೇಹದ ಪಟ್ಟಕಟ್ಟಲಾಗುತ್ತದೆ. ಇದು ನಮ್ಮ ನವ ಭಾರತ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...