ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ರಾಜಕಾರಣಿಯ ಜನನಾಂಗ ಕತ್ತರಿಸಿದ ವೈದ್ಯೆ

Date:

ಮದುವೆಯಾಗುವುದಾಗಿ ವರ್ಷಾನುಗಟ್ಟಲೆ ಸುತ್ತಾಡಿ ವಂಚಿಸಿದ್ದ ರಾಜಕಾರಣಿಯೊಬ್ಬನ ಜನನಾಂಗ ವನ್ನು ಮಹಿಳಾ ವೈದ್ಯರೊಬ್ಬರು ಕತ್ತರಿಸಿದ ಘಟನೆ ಬಿಹಾರದ ಸರನ್‌ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ವೈದ್ಯೆಯನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಯತ್ನ ಸೇರಿ ಹಲವಾರು ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನನಾಂಗ ಕತ್ತರಿಕೊಂಡ ರಾಜಕಾರಣಿ ಸರನ್‌ ಜಿಲ್ಲೆಯ ಮಧುಕರ್‌ ಬ್ಲಾಕ್‌ನ 12ನೇ ವಾರ್ಡ್‌ನಲ್ಲಿ ನಗರಸಭಾ ಸದಸ್ಯನಾಗಿದ್ದಾನೆ. ಗಾಯಗೊಂಡಿರುವ ರಾಜಕಾರಣಿಯನ್ನು ಪಾಟ್ನಾ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ವೈದ್ಯೆಯ ಪ್ರಕಾರ ರಾಜಕಾರಣಿಯು ಮಹಿಳೆಯೊಂದಿಗೆ ಮದುವೆಯಾಗುವುದಾಗಿ ಹೇಳಿ ಐದು ವರ್ಷಗಳಿಂದ ಸಂಬಂಧವಿಟ್ಟುಕೊಂಡಿದ್ದ. ಇತ್ತೀಚಿಗಷ್ಟೆ ರಾಜಕಾರಣಿಯನ್ನು ವೈದ್ಯೆ ಮನವೊಲಿಸಿ ಕೋರ್ಟ್‌ನಲ್ಲಿ ನೋಂದಣಿ ಮದುವೆಗೆ ಒಪ್ಪಿಸಿದ್ದರು. ಮದುವೆಯ ಸಿದ್ಧತೆ ಮಾಡಿಕೊಂಡು ವೈದ್ಯೆಯು ಕೋರ್ಟ್‌ಗೆ ಆಗಮಿಸಿದ್ದರು. ಆದರೆ ರಾಜಕಾರಣಿ ಕೋರ್ಟ್‌ಗೆ ಆಗಮಿಸದೆ ವಂಚಿಸಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಹಳ ಕಾಲ ನೆನಪಿನಲ್ಲುಳಿಯುವ ಫೈನಲ್ ಪಂದ್ಯ

ಇದಾದ ನಂತರ ವೈದ್ಯೆ ರಾಜಕಾರಣಿಯನ್ನು ತನ್ನ ಮನೆಗೆ ಕರೆಸಿ ಆತನ ಖಾಸಗಿ ಜನನಾಂಗವನ್ನು ಕತ್ತರಿಸಿದ್ದಾರೆ. ರಾಜಕಾರಣಿಯ ಕಿರುಚಾಟವನ್ನು ಕೇಳಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲಿಸರು ಸ್ಥಳಕ್ಕೆ ಆಗಮಿಸಿದಾಗ ಸಂತ್ರಸ್ತ ರಕ್ತದ ಮಡುವಿನಲ್ಲಿ ಮಂಚದ ಮೇಲೆ ಬಿದ್ದಿದ್ದ.

“25 ವರ್ಷದವರಾದ ಅವಿವಾಹಿತ ವೈದ್ಯೆ ಹಾಜಿಪುರದ ನಿವಾಸಿಯಾಗಿದ್ದು, ಮದುರಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕಾರಣಿ ಕೂಡ ಅವಿವಾಹಿತ” ಎಂದು ಸರನ್‌ ಜಿಲ್ಲೆಯ ಮದುರಾ ಪೊಲೀಸ್‌ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...