ವೈದ್ಯನನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ; 3 ಮಹಿಳೆಯರ ಬಂಧನ, 10 ಮಂದಿ ವಿರುದ್ಧ FIR

Date:

ಗ್ರಾಮೀಣ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರನ್ನು ಗ್ರಾಮದ ಕೆಲವರು ಮರಕ್ಕೆ ಕಟ್ಟಿಹಾಕಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಅಮಾನುಷ ಘಟನೆ ಬಿಹಾರದ ಗಯಾ ಜಿಲ್ಲೆಯ ಫತೇಪುರ ಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಫತೇಪುರ ಬಳಿಯ ಹರಕುರ್ಹಾ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಗಳು ವೈದ್ಯ ಜಿತೇಂದ್ರ ಯಾದವ್ ಅವರ ಮೇಲೆ ಅಮಾನುಷ ಕ್ರೌರ್ಯ ಎಸಗಿದ್ದಾರೆ. ಸಂತ್ರಸ್ತ ವೈದ್ಯನನ್ನು ಮಗಧ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯ ನೀಡಿದ ದೂರಿನ ಆಧಾರದ ಮೇಲೆ ಗುರ್ಪಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

10 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಮಹಿಳೆಯರೂ ಸೇರಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರ ತಂಡವನ್ನು ರಚಿಸಲಾಗಿದೆ. ಪೊಲೀಸ್ ತಂಡವು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಈವರೆಗೆ ಖುಷ್ಬೂ ದೇವಿ, ಬಸಂತಿ ದೇವಿ ಹಾಗೂ ಪುಟುಲ್ ದೇವಿ ಎಂಬ ಮೂವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂ ವಿವಾದಕ್ಕೆ ಸಂಬಂಧಿಸಿದಂತೆ ಆತನನ್ನು ಗ್ರಾಮದ ಕೆಲವರು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಎಸ್‌ಡಿಪಿಒ ಸುನಿಲ್ ಕುಮಾರ್ ಪಾಂಡೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...