ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಗರ್ಭಿಣಿ ಹೊಟ್ಟೆಗೆ ಆ್ಯಸಿಡ್ ಹಾಕಿದ ವೈದ್ಯರು

Date:

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೇಳೆ ಗರ್ಭಿಯ ಹೊಟ್ಟೆಗೆ ವೈದ್ಯರು ವೈದ್ಯಕೀಯ ಜೆಲ್ ಬದಲಾಗಿ ಹೈಡ್ರೋಕ್ಲೋರಿಕ್ ಆ್ಯಸಿಡ್‌ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯು ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಭೋಕರ್ದನ್‌ನಲ್ಲಿ ನಡೆದಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಕರ್ದನ್‌ನ ಸರ್ಕಾರಿ ಗ್ರಾಮೀಣ ಆಸ್ಪತ್ರೆಯಲ್ಲಿ ಶುಕ್ರವಾರ ಘಟನೆ ನಡೆಸಿದೆ. ಘಟನೆಯಲ್ಲಿ ಮಹಿಳೆಗೆ ಸುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೆರಿಗೆಗಾಗಿ ಗರ್ಭಿಣಿ ಶೀಲಾ ಭಲೇರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ಹೆರಿಗೆ ಮಾಡಿಸಲು ಸಿದ್ಧತೆ ನಡೆಸುವಾಗ ನರ್ಸ್‌ವೊಬ್ಬರು ಹೆರಿಗೆ ಪ್ರಕ್ರಿಯೆಯಲ್ಲಿ ಬಳಸುವ ವೈದ್ಯಕೀಯ ಜೆಲ್‌ ಎಂದು ಭಾವಿಸಿ ಹೈಡ್ರೋಕ್ಲೋರಿಕ್ ಆ್ಯಸಿಡ್‌ಅನ್ನು ಗರ್ಭಿಣಿಯ ಹೊಟ್ಟೆಗೆ ಹಚ್ಚಿಸಿದ್ದಾರೆ. ಇದರಿಂದ, ಗರ್ಭಿಯ ಹೊಟ್ಟೆಯ ಮೇಲೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರ್ಸ್‌ಎಸಗಿದ ಗಂಭೀರದ ಲೋಪಗಳ ಹೊರತಾಗಿಯೂ ಶೀಲಾ ಅವರು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯಕರವಾಗಿದೆ. ಆದರೆ, ಶೀಲಾ ಅವರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ನೈರ್ಮಲ್ಯ ಕಾರ್ಮಿಕರು ಕಣ್ತಪ್ಪಿನಿಂದ ಔಷಧಿ ಟ್ರೇನಲ್ಲಿ ಶುಚಿಗೊಳಿಸುವ ಉದ್ದೇಶಕ್ಕೆ ಬಳಸುವ ಆ್ಯಸಿಡ್‌ಅನ್ನು ಇರಿಸಿದ್ದರು. ಪರಿಣಾಮ, ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಸಿವಿಲ್ ಸರ್ಜನ್ ಡಾ. ಆರ್.ಎಸ್ ಪಾಟೀಲ್, “ಇದು ನಿರ್ಲಕ್ಷ್ಯದ ಗಂಭೀರ ಪ್ರಕರಣ. ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ. ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...