ಮಹಿಳೆಯ ಗುಪ್ತಾಂಗಕ್ಕೆ ಕಾರದ ಪುಡಿ ಹಾಕಿ, ಕಾದ ಕಬ್ಬಿಣದಿಂದ ಸುಟ್ಟು ಚಿತ್ರಹಿಂಸೆ: ಪತಿ, ಅತ್ತೆ, ಮಾವನಿಂದ ವಿಕೃತಿ

Date:

ಮಹಿಳೆಯೊಬ್ಬರ ಮೇಲೆ ಆಕೆಯ ಪತಿ, ಅತ್ತೆ, ಮಾವ ವಿಕೃತವಾಗಿ ದೌರ್ಜನ್ಯ ಎಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಮೆಣಸಿನಕಾಯಿ ಪುಡಿ ಹಾಕಿ, ಆಕೆಯ ದೇಹದ ಅಂಗಗಳಿಗೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮಧ್ಯಪ್ರದೇಶದ ರಾಜಗಢದಲ್ಲಿ ಘಟನೆ ನಡೆದಿದೆ. ಸಂತ್ರಸ್ತೆಯು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಮಹಿಳೆಯ ಪತಿ, ಅತ್ತೆ-ಮಾವ ಮತ್ತು ಅತ್ತಿಗೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೂರು ದಾಖಲಿಸಿರುವ ಮಹಿಳೆ, “ತನ್ನ ಮೇಲೆ ನಾಲ್ವರೂ ಆರೋಪಿಗಳು ನಿರಂತರ 2 ಗಂಟೆಗಳ ಕಾಲ ದೌರ್ಜನ್ಯ ನಡೆಸಿ, ಚಿತ್ರಹಿಂಸೆ ನೀಡಿದ್ದಾರೆ. ತನ್ನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ತನ್ನ ಗುಪ್ತಾಂಗಕ್ಕೆ ಮಾವ ಮೆಣಸಿನಕಾಯಿ ಪುಡಿ ಹಾಕಿದ್ಧಾನೆ. ಅತ್ತೆ ಕಾದ ಕಬ್ಬಿಣದ ರಾಡ್‌ನಿಂದ ಕೈ, ಕಾಲು ಸೇರಿದಂತೆ ವಿವಿಧ ಅಂಗಗಳಿಗೆ ಬರೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರಂತರವಾಗಿ ಎಸಗಿದ ಹಲ್ಲೆ, ದೌರ್ಜನ್ಯದಿಂದ ನಾನು ಪ್ರಜ್ಞಾಹೀನಳಾಗಿದ್ದೆ. ಮರುದಿನ ಮತ್ತೆ ಹಲ್ಲೆ ಮಾಡಿದರು. ನನ್ನನ್ನು ಬೈಕ್‌ನಲ್ಲಿ ಕರೆದೊಯ್ದು ನಿರ್ಜನ್ಯ ಪ್ರದೇಶದಲ್ಲಿ ಬಿಟ್ಟುಹೋಗಿದ್ದರು” ಎಂದು ವಿವರಿಸಿದ್ದಾರೆ.

ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...