ಹಲಾಲ್ ಪ್ರಮಾಣಿತ ಉತ್ಪನ್ನ ಖರೀದಿಸಬೇಡಿ: ಯುಪಿ ಸಿಎಂ ಯೋಗಿ ದ್ವೇಷ ಭಾಷಣ

Date:

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಖರೀದಿಸಬೇಡಿ. ಉತ್ತರ ಪ್ರದೇಶವು ಈ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ಯಾಕೆಂದರೆ, ಅವುಗಳ ಮಾರಾಟದಿಂದ ಬರುವ ಲಾಭವನ್ನು ಬಲವಂತದ ಮತಾಂತರ, ಭಯೋತ್ಪಾದನೆ ಹಾಗೂ ಲವ್‌ ಜಿಹಾದ್‌ಗೆ ಬಳಸಲಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ದ್ವೇಷ ಭಾಷಣ ಮಾಡಿದ್ದಾರೆ. ತಮ್ಮೊಳಗಿನ ವಿಕೃತಿಯನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆಗಾಗಿ ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ. “ನೀವು ಏನನ್ನಾದರೂ ಖರೀದಿಸುವಾಗ, ಅದಕ್ಕೆ ಹಲಾಲ್ ಪ್ರಮಾಣೀಕರಣ ಟ್ಯಾಗ್ ಇಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ನಂತರ ಖರೀದಿಸಿ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ಮಾರಾಟ ಮಾಡಲು ಯಾರೂ ಧೈರ್ಯ ಮಾಡುವುದಿಲ್ಲ. ಸೋಪುಗಳು, ಬಟ್ಟೆಗಳು, ಬೆಂಕಿಕಡ್ಡಿಗಳು ಇತ್ಯಾದಿ ಹಲವಾರು ಉತ್ಪನ್ನಗಳು ಈಗ ಹಲಾಲ್ ಪ್ರಮಾಣೀಕರಣ ಟ್ಯಾಗ್‌ನೊಂದಿಗೆ ಬರುತ್ತವೆ. ಹಲಾಲ್ ಪ್ರಮಾಣೀಕರಣವನ್ನು ಬಳಸಿಕೊಂಡು 25,000 ಕೋಟಿ ರೂ. ಗಳಿಸಲಾಗುತ್ತದೆ” ಎಂದು ಯೋಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದಲ್ಲಿ ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ಮಾರಾಟದಿಂದ ಬರುವ ಎಲ್ಲ ಲಾಭದ ಹಣವನ್ನು ಭಯೋತ್ಪಾದನೆ, ಲವ್ ಜಿಹಾದ್ ಹಾಗೂ ಮತಾಂತರಕ್ಕೆ ದುರುಪಯೋಗ ಮಾಡಿಕೊಳ್ಳಲಾಗುತ್ತದೆ” ಎಂದು ಆದಿತ್ಯನಾಥ್ ದ್ವೇಷದ ಆರೋಪ ಮಾಡಿದ್ದಾರೆ.

“ನಮ್ಮ ಪೂರ್ವಜರು ಬ್ರಿಟಿಷರು ಮತ್ತು ಫ್ರೆಂಚ್ ವಿರುದ್ಧ ಮಾತ್ರವಲ್ಲದೆ ರಾಜಕೀಯ ಇಸ್ಲಾಂ ವಿರುದ್ಧವೂ ಹೋರಾಡಿದರು. ವೀರ ಶಿವಾಜಿ ಮತ್ತು ಮಹಾರಾಣಾ ಪ್ರತಾಪ್‌ರಂತಹ ವೀರರು ಇದಕ್ಕೆ ಸಾಕ್ಷಿಯಾಗಿದ್ದಾರೆ. ಬ್ರಿಟಿಷ್ ಮತ್ತು ಫ್ರೆಂಚ್ ವಸಾಹತುಶಾಹಿಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ನಂಬಿಕೆಯನ್ನು ದುರ್ಬಲಗೊಳಿಸಿದ ರಾಜಕೀಯ ಇಸ್ಲಾಂ ಬಗ್ಗೆ ಚರ್ಚೆ ನಡೆಯುವುದು ಅಪರೂಪ” ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...