ಇವಿಎಂ ದತ್ತಾಂಶಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Date:

ಇವಿಎಂ ದತ್ತಾಂಶಗಳನ್ನು ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.

ಸದ್ಯಕ್ಕೆ, ಇವಿಎಂನಿಂದ ಯಾವುದೇ ದತ್ತಾಂಶವನ್ನು ಅಳಿಸಬೇಡಿ ಅಥವಾ ಯಾವುದೇ ದತ್ತಾಂಶವನ್ನು ಮರುಲೋಡ್ ಮಾಡಬೇಡಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ.

ಚುನಾವಣೆಯ ನಂತರ ಇವಿಎಂ ಮೆಮೊರಿ ಮತ್ತು ಮೈಕ್ರೋಕಂಟ್ರೋಲರ್ ಅನ್ನು ಸುಡುವ ಪ್ರಕ್ರಿಯೆಯ ಬಗ್ಗೆ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಮಾಹಿತಿಯನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಡಿಆರ್, ಹರಿಯಾಣ ಹಾಗೂ ಕಾಂಗ್ರೆಸ್‌ನ ಒಂದು ಗುಂಪು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕ ಮಾನವೀಯ ಮಾದರಿಯ ತಿರಸ್ಕರಿಸಿ ನೆತ್ತರು ಹರಿಸಿದ ಅಮಿತ್ ಶಾ

ವಿಚಾರಣೆ ಸಂದರ್ಭದಲ್ಲಿ ಎಡಿಆರ್ ಪರವಾಗಿ ಹಿರಿಯ ನ್ಯಾಯವಾದಿ ಪ್ರಶಾಂತ್‌ ಭೂಷಣ್ ಹಾಜರಾಗಿದ್ದರು. ಸುಪ್ರೀಂ ಕೋರ್ಟ್ ತೀರ್ಪಿನಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ಚುನಾವಣಾ ಆಯೋಗ ಅಳವಡಿಸಿಕೊಳ್ಳಬೇಕು. ಒಂದು ವೇಳೆ ಇವಿಎಂ ತಂತ್ರಾಂಶದಲ್ಲಿ ದೋಷವಿದ್ದರೆ ಅಥವಾ ತಿರುಚಿರುವ ಆರೋಪದ ಬಗ್ಗೆ ಯಾರಾದರೂ ಅನುಮಾ ವ್ಯಕ್ತಪಡಿಸಿದರೆ ಈ ಬಗ್ಗೆ ಪರೀಕ್ಷಿಸಲು ಕೋರಬಹುದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇವಿಎಂ ಅನ್ನು ನಾಶಗೊಳಿಸುವುದಿಲ್ಲ ಎಂದು ಸಾಬೀತುಪಡಿಸಲು ಇವಿಎಂನ ಸುಟ್ಟ ಮೆಮೊರಿ ಹಾಗೂ ಮೈಕ್ರೊಕಂಟ್ರೋಲರ್‌ ಅನ್ನು ಇಂಜಿನಿಯರ್ ಪರಿಶೀಲಿಸಬೇಕು ಎಂದು ಅರ್ಜಿದಾರರು ಕೋರ್ಟ್‌ಗೆ ಮನವಿ ಸಲ್ಲಿಸಿದರು.

ಮುಂದಿನ 15 ದಿನಗಳಲ್ಲಿ ಈ ಬಗ್ಗೆ ವಿವರ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು. ಮುಂದಿನ ವಿಚಾರಣೆ ಮಾರ್ಚ್‌ 3 ರಂದು ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...