ಪಹಲ್ಗಾಮ್ ದಾಳಿ ಅಪರಾಧಿಗಳ ಶೋಧ; ಅಮಾಯಕರಿಗೆ ಹಾನಿಯಾಗದಿರಲಿ: ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು 28 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಸದ್ಯ ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಭಾನುವಾರ ಜಮ್ಮು ಕಾಶ್ಮೀರ ಸಿಎಂ ಕರೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಗುಪ್ತಚರ ವೈಫಲ್ಯದ ಬಗ್ಗೆ ಅನುಮಾನವಿದೆ; ಯಾರನ್ನಾದರೂ ಹೊಣೆ ಮಾಡಬೇಕು: ಸೇನಾ ಮಾಜಿ ಮುಖ್ಯಸ್ಥ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಒಮರ್, “ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟ ನಡೆಯಬೇಕು. ಕಾಶ್ಮೀರದ ಜನರು ಭಯೋತ್ಪಾದನೆ ಮತ್ತು ಮುಗ್ಧ ಜನರ ಹತ್ಯೆಯ ವಿರುದ್ಧ ಬಹಿರಂಗವಾಗಿ ಹೊರಬಂದಿದ್ದಾರೆ. ಸ್ವಯಂಪ್ರೇರಿತವಾಗಿ ಬಹಿರಂಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಬೆಂಬಲವನ್ನು ನಿರ್ಮಿಸುವ ಮತ್ತು ಜನರನ್ನು ದೂರವಿಡುವ ಯಾವುದೇ ತಪ್ಪು ಕ್ರಮವನ್ನು ತಪ್ಪಿಸುವ ಸಮಯ ಇದು. ತಪ್ಪಿತಸ್ಥರನ್ನು ಶಿಕ್ಷಿಸಿ, ಅವರ ಮೇಲೆ ಯಾವ ಕರುಣೆಯೂ ಬೇಡ. ಆದರೆ ಮುಗ್ಧ ಜನರು ಹಾನಿಗೊಳಗಾಗಲು ಬಿಡಬೇಡಿ” ಎಂದು ಮನವಿ ಮಾಡಿದ್ದಾರೆ.

ಈ ಭಯೋತ್ಪಾದನ ದಾಳಿ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ಇನ್ನಷ್ಟೂ ಹೆಚ್ಚಾಗಿದೆ. ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ರದ್ದು ಮಾಡಲಾಗುತ್ತದೆ ಎಂದು ಭಾರತ ಈಗಾಗಲೇ ಘೋಷಿಸಿದೆ. ಪಾಕಿಸ್ತಾನದಿಂದಲೂ ಭಾರತೀಯರು ವಾಪಸ್ ಬರುತ್ತಿದ್ದಾರೆ, ಇಲ್ಲಿಂದಲೂ ಪಾಕಿಸ್ತಾನ ಪ್ರಜೆಗಳು ವಾಪಸ್ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...