ಯುವತಿಯರ ಉಡುಗೆ ಬಗ್ಗೆ ಮಧ್ಯ ಪ್ರದೇಶ ಸಚಿವ ವಿವಾದಾತ್ಮಕ ಹೇಳಿಕೆ

Date:

ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಧ್ಯ ಪ್ರದೇಶ ಸಚಿವ ಕೈಲಾಶ್ ವಿಜಯ್ ವರ್ಗೀಯ ಮತ್ತೊಮ್ಮೆ ವಿವಾದವನ್ನು ಸೃಷ್ಟಿಸಿದ್ದಾರೆ.

ಇಂದೋರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೈಲಾಶ್ ವಿಜಯ್ ವರ್ಗೀಯ, “ಯುವತಿಯರು ತುಂಡುಡುಗೆ ಧರಿಸುವುದನ್ನು ನಾನು ಇಷ್ಟಪಡುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ತುಂಡುಡುಗೆ ಧರಿಸಿದ ಯುವತಿಯರನ್ನು ಸೌಂದರ್ಯವತಿಯರು ಎಂದು ಪರಿಗಣಿಸಲಾಗುತ್ತದೆ. ಆದರೆ, ನಾನಿದನ್ನು ಒಪ್ಪುವುದಿಲ್ಲ. ಭಾರತದಲ್ಲಿ ಚೆನ್ನಾಗಿ ಉಡುಪು,ಆಭರಣಗಳನ್ನು ಧರಿಸಿ, ಆಕರ್ಷಕವಾಗಿ ಅಲಂಕಾರ ಮಾಡಿಕೊಂಡಿರುವ ಮಹಿಳೆಯರನ್ನು ಸೌಂದರ್ಯವತಿಯರು ಎಂದು ಪರಿಗಣಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಮಿತವಾದ ಮಾತು ಹಾಗೂ ಮಿತವಾದ ಉಡುಪಿನೊಂದಿಗೆ ಹೋಲಿಕೆ ಮಾಡಿದ ಅವರು, “ಪಾಶ್ಚಿಮಾತ್ಯ ದೇಶಗಳಲ್ಲಿ ಕಡಿಮೆ ಮಾತನಾಡುವ ಹಾಗೂ ಕಡಿಮೆ ಉಡುಪು ಧರಿಸುವ ಮಹಿಳೆಯರನ್ನು ಸೌಂದರ್ಯವತಿಯರು ಎಂದು ಪರಿಗಣಿಸಲಾಗುತ್ತದೆ. ಆದರೆ, ನಾನದನ್ನು ಒಪ್ಪುವುದಿಲ್ಲ. ಮಹಿಳೆಯು ದೇವತೆಯ ಸ್ವರೂಪವಿದ್ದಂತೆ ಎಂಬುದು ನನ್ನ ಭಾವನೆ. ಆಕೆ ಚೆನ್ನಾಗಿ ಉಡುಪುಗಳನ್ನು ಧರಿಸಬೇಕು. ತುಂಡುಡುಗೆ ಧರಿಸುವ ಮಹಿಳೆಯರು ನನಗೆ ಆಕರ್ಷಕವೆನಿಸುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಜಿಕರ್‌ ಆಸ್ಪತ್ರೆ, ಅಣ್ಣಾ ವಿ ವಿ ರೀತಿ ಎಲ್ಲ ಅತ್ಯಾಚಾರ ಪ್ರಕರಣಗಳಲ್ಲೂ ತ್ವರಿತ ನ್ಯಾಯದಾನ ಅತ್ಯಗತ್ಯ

“ಕೆಲವೊಮ್ಮೆ ಯುವತಿಯರು ನನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಆಗ ನಾನು, “ಮಗಳೆ, ಮುಂದಿನ ಬಾರಿ ಸರಿಯಾದ ಬಟ್ಟೆ ಧರಿಸಿ ಬಾ. ಆಗ ಪೋಟೊ ತೆಗೆದುಕೊಳ್ಳೋಣ” ಎಂದು ಅವರಿಗೆ ಕಿವಿಮಾತು ಹೇಳುತ್ತೇನೆ” ಎಂದು ಹೇಳಿದರು.

ಸಚಿವ ಕೈಲಾಶ್ ವಿಜಯ್ ವರ್ಗೀಯ ಈ ಮೊದಲು ಕೂಡ ಇದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.

2022ರಲ್ಲಿ ಇಂದೋರ್‌ನಲ್ಲಿ ನಡೆದಿದ್ದ ಹನುಮಾನ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದಾಗ, ನಾನು ಹನುಮಾನ್ ಜಯಂತಿಯಂದು ಸುಳ್ಳು ಹೇಳುವುದಿಲ್ಲ. ಈಗಿನ ಕಾಲದ ಯುವತಿಯರು ಅಸಹ್ಯ ಉಡುಪುಗಳನ್ನು ಧರಿಸುತ್ತಾರೆ. ನಾವು ಅವರನ್ನು ದೇವತೆಯರು ಎಂದು ಕರೆಯುತ್ತೇವೆ. ಆದರೆ, ಅವರು ಹಾಗೆ ಕಾಣಿಸುವುದಿಲ್ಲ. ಅವರು ಶೂರ್ಪನಖಿಗಳಂತೆ ಕಾಣಿಸುತ್ತಾರೆ. ದೇವರು ನಿಮಗೆ ಸುಂದರವಾದ ದೇಹ ನೀಡಿದ್ದಾನೆ. ಕನಿಷ್ಠ ಪಕ್ಷ ಸಭ್ಯ ಉಡುಪುಗಳನ್ನಾದರೂ ಧರಿಸಿ. ನಿಮ್ಮ ಮಕ್ಕಳಿಗೆ ಮೌಲ್ಯಗಳನ್ನು ಕಲಿಸಿ” ಎಂದು ತಾಕೀತು ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...