ಅನ್ನದಾತರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬೇಡಿ: ಕೇಂದ್ರದ ವಿರುದ್ಧ ಎಂ ಎಸ್ ಸ್ವಾಮಿನಾಥನ್ ಪುತ್ರಿ ಆಕ್ರೋಶ

Date:

ಇತ್ತೀಚಿಗಷ್ಟೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ಕೃಷಿ ಕ್ರಾಂತಿಯ ಹರಿಕಾರ ಎಂ ಎಸ್ ಸ್ವಾಮಿನಾಥನ್ ಪುತ್ರಿ ರೈತರ ಪ್ರತಿಭಟನೆಗೆ ಸರ್ಕಾರ ನಡೆಸಿಕೊಳ್ಳುವ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅರ್ಥಶಾಸ್ತ್ರಜ್ಞೆಯು ಆಗಿರುವ ಮಧುರಾ ಸ್ವಾಮಿನಾಥನ್, ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬೇಡಿ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಂಜಾಬಿನ ರೈತರು ಇಂದು ದೆಹಲಿಗೆ ಮೆರವಣಿಗೆ ಹೊರಟಿದ್ದಾರೆ. ಪತ್ರಿಕೆಗಳ ವರದಿಯಂತೆ ಹರಿಯಾಣದಲ್ಲಿ ಜೈಲುಗಳನ್ನು ಸಿದ್ದಪಡಿಸಲಾಗುತ್ತಿದೆ.ಬ್ಯಾರಿಕೇಡ್‌ಗಳಿವೆ, ರೈತರನ್ನು ತಡೆಯಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ರೈತರು, ಅಪರಾಧಿಗಳಲ್ಲ. ಮುಂಚೂಣಿಯಲ್ಲಿರುವ ಭಾರತದ ಎಲ್ಲ ವಿಜ್ಞಾನಿಗಳಿಗೆ ನಾನು ಮನವಿ ಮಾಡುವುದೇನೆಂದರೆ ನಾವು ಅನ್ನದಾತರೊಂದಿಗೆ ಮಾತನಾಡಬೇಕು. ನಾವು ಅವರನ್ನು ಅಪರಾಧಿಗಳಂತೆ ಪರಿಗಣಿಸಬಾರದು. ನಾವು ಇದಕ್ಕೆ ಪರಿಹಾರ ಹುಡುಕಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ದಯವಿಟ್ಟು ಇದು ನನ್ನ ಮನವಿ. ನಾವು ಎಂ ಎಸ್‌ ಸ್ವಾಮಿನಾಥನ್‌ ಅವರನ್ನು ಗೌರವಿಸಬೇಕೆಂದರೆ ಭವಿಷ್ಯತ್ತಿನಲ್ಲಿ ಯಾವುದಾದರೂ ಕಾರ್ಯತಂತ್ರದ ಯೋಜನೆಗಳನ್ನು ರೂಪಿಸಿದರೂ ನಮ್ಮೊಂದಿಗೆ ರೈತರನ್ನು ಕರೆದುಕೊಂಡು ಹೋಗಬೇಕು” ಎಂದು ಮಧುರಾ ಸ್ವಾಮಿನಾಥನ್ ಹೇಳಿದರು.

ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಪಂಜಾಬ್,ಹರಿಯಾಣ ಹಾಗೂ ಉತ್ತರ ಪ್ರದೇಶದ ಒಂದು ಲಕ್ಷಕ್ಕೂ ಅಧಿಕ ರೈತರು (ಫೆ.13ರಿಂದ) ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನಿನ್ನೆ ಪಂಜಾಬ್ – ಹರಿಯಾಣ ಗಡಿಯಲ್ಲಿ ಮೆರವಣಿಗೆ ಸಾಗುವಾಗ ರೈತರು ಪೊಲೀಸರು ನಿರ್ಮಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿಯಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಪೊಲೀಸರು ರೈತರ ಮೇಲೆ ಅಶ್ರುವಾಯು ಶೆಲ್, ಸ್ಮೋಕ್‌ ಬಾಂಬ್, ರಬ್ಬರ್ ಬುಲೆಟ್‌ಗಳು, ಜಲ ಪಿರಂಗಿಗಳನ್ನು ಬಳಸಿದರು. ಪೊಲೀಸರ ದಾಳಿಯಿಂದಾಗಿ  ಹಲವು ರೈತರು ಗಾಯಗೊಂಡರು. ಕೆಲವರನ್ನು ಬಂಧಿಸಲಾಯಿತು.

ರೈತರನ್ನು ದೆಹಲಿಯತ್ತ ಬರುವುದನ್ನು ತಡೆಯುವ ಸಲುವಾಗಿಯೆ ಮುಳ್ಳುತಂತ್ತಿಗಳ ಬ್ಯಾರಿಕೇಡ್‌ಗಳು, ಚೂಪಾದ ಬಾಣದ ರೀತಿಯ ಸಲಾಕೆಗಳು, ಸಿಮೆಂಟ್ ತಡೆಗೋಡೆ ಮುಂತಾದ ಕ್ರಮವನ್ನು ಪೊಲೀಸರು ಅಳವಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...