ವರದಕ್ಷಿಣೆ ದುರಾಸೆ | ಮದುವೆಯಾದ 3 ದಿನದಲ್ಲೇ ಮುರಿದುಬಿದ್ದ ಸಂಬಂಧ; ವರನಿಗೆ ಜೈಲು

Date:

ವರ ಮತ್ತು ಆತನ ಕುಟುಂಬದವರ ವರದಕ್ಷಿಣ ಹಾಗೂ ಚಿನ್ನದ ಮೇಲಿನ ದುರಾಸೆಯಿಂದಾಗಿ ಮದುವೆಯಾದ ಮೂರೇ ದಿನದಲ್ಲಿ ವಿವಾಹ ಸಂಬಂಧ ಮುರಿದುಬಿದ್ದಿದ್ದು, ಆರೋಪಿ ವರನಿಗೆ 3 ತಿಂಗಳು ಜೈಲು ಹಾಗೂ 3 ಲಕ್ಷ ದಂಡ ವಿಧಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ದಂಡದ ಹಣವನ್ನು ವಧುವಿಗೆ ಪರಿಹಾರವಾಗಿ ನೀಡಬೇಕೆಂದು ಸೂಚಿಸಿದೆ.

ತಮಿಳುನಾಡಿನ ಸೈದಾಪೇಟೆಯಲ್ಲಿ 2006ರ ಫೆಬ್ರವರಿ 3ರಂದು ವಿವಾಹ ನಡೆದಿತ್ತು. ವಿವಾಹವಾದ ಮೂರೇ ದಿನದಲ್ಲಿ ಸಂಬಂಧ ಮುರಿದುಬಿದ್ದಿತ್ತು. ಆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಾಲಯ, ಬರೋಬ್ಬರಿ 19 ವರ್ಷಗಳ ಬಳಿಕ ತೀರ್ಪು ನೀಡಿದೆ.

ವಿವಾಹ ನಿಶ್ಚಯದ ಸಮಯದಲ್ಲಿ ವಧುವಿಗೆ 60 ಪೌಂಡ್ ಮತ್ತು ವರನಿಗೆ 10 ಪೌಂಡ್ ಚಿನ್ನವನ್ನು ವಧುವಿನ ಪೋಷಕರು ನೀಡಬೇಕೆಂದು ಮಾತುಕತೆ ನಡೆಸಿದ್ದರು. ಆದರೆ, ಇನ್ಫೋಟೆಕ್ ಉದ್ಯೋಗಿಯಾಗಿದ್ದ ವರ, ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದನು. ವಿವಾಹವಾದ ಬಳಿಕ, ಉಳಿದ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕೆಂದರೆ, 30 ಪೌಂಡ್ ಚಿನ್ನ ಕೊಡಬೇಕೆಂದು ಒತ್ತಾಯಿಸಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ ಬೇಡಿಕೆಯಂತೆ ಮತ್ತೆ ಹೆಚ್ಚು ಚಿನ್ನ ಕೊಡಲು ವಧುವಿನ ಪೋಷಕರು ನಿರಾಕರಿಸಿದ್ದರು. ಆನಂತರವೂ ಮನೆಯಲ್ಲಿ ವರದಕ್ಷಿಣೆಗಾಗಿ ವಧುವನ್ನು ವರ ಮತ್ತು ಆತನ ಪೋಷಕರು ಪದೇ-ಪದೇ ಪೀಡಿಸುತ್ತಿದ್ದರು. ಇದರಿಂದ ಬೇಸತ್ತ ವಧು ಮೂರೇ ದಿನದಲ್ಲಿ ಗಂಡನ ಮನೆಯನ್ನು ತೊರೆದಿದ್ದರು.

ವರ ಮತ್ತು ಆತನ ಪೋಷಕರ ವರದಕ್ಷಿಣೆ ದುರಾಸೆಯನ್ನು ಸಹಿಸಲಾಗದೆ ವಧು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ವರ ಮತ್ತು ಆತನ ಪೋಷಕರ ವಿರುದ್ಧ ಐಪಿಸಿಯ ಸೆಕ್ಷನ್ 498A ಮತ್ತು ವರದಕ್ಷಿಣೆ ತಡೆ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ಡನೆಸಿದ್ದ ಸೈದಾಪೇಟೆ ವಿಚಾರಣಾ ನ್ಯಾಯಾಲಯವು ವರನನ್ನು ಐಪಿಸಿ ಮತ್ತು ಡಿಪಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿತ್ತು. ಆತನಿಗೆ ಐಪಿಸಿಯ ಸೆಕ್ಷನ್ 498A ಅಡಿಯಲ್ಲಿ 3,000 ರೂ. ದಂಡ ಮತ್ತು ಡಿಪಿ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಒಂದು ವರ್ಷ ಶಿಕ್ಷೆ ವಿಧಿಸಿತ್ತು.

ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವರ ಮದ್ರಾಸ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ ಜೈಲು ಶಿಕ್ಷೆಯ ಪ್ರಮಾಣವನ್ನು 2 ವರ್ಷಗಳಿಗೆ ಏರಿಸಿತ್ತು. ನಂತರದಲ್ಲಿ, ಆರೋಪಿ ವರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಆತನ ಅರ್ಜಿಯನ್ನು ಆಲಿಸಿರುವ ಸುಪ್ರೀಂ ಕೋರ್ಟ್‌, ದಂಡವನ್ನು 3 ಲಕ್ಷ ರೂ.ಗೆ ಏರಿಸಿದ್ದು, ಜೈಲು ಶಿಕ್ಷೆಯ ಪ್ರಮಾಣವನ್ನು 3 ತಿಂಗಳಿಗೆ ಇಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...