ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಭೂಕಂಪ; ಹಾನಿ ಇಲ್ಲ

Date:

ದೇಶದ ಎರಡು ರಾಜ್ಯಗಳಲ್ಲಿ ಶುಕ್ರವಾರ (ಮಾರ್ಚ್‌ 24) ಬೆಳಿಗ್ಗೆ ಮಧ್ಯಮ ಪ್ರಮಾಣದ ಭೂಕಂಪ ಉಂಟಾಗಿದೆ. ಆದರೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ ಬಳಿ ಬೆಳಿಗ್ಗೆ 10.31ರ ಸುಮಾರಿಗೆ ರಿಕ್ಟರ್‌ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ದಾಖಲಾಗಿದೆ. ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಬೆಳಿಗ್ಗೆ 10.28ಕ್ಕೆ ಭೂಮಿ ಕಂಪಿಸಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಆಗ್ನೇಯಕ್ಕೆ 28 ಕಿಮೀ ದೂರದಲ್ಲಿ ಅಕ್ಷಾಂಶ 26.01 ಮತ್ತು ರೇಖಾಂಶ 78.35ರ ನಡುವೆ ಭೂಕಂಪ ಉಂಟಾಗಿದೆ. ಇದು 10 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛತ್ತೀಸ್‌ಗಢದ ಅಂಬಿಕಾಪುರದಲ್ಲಿ 6 ಸೆಕೆಂಡುಗಳ ಕಾಲ ಭೂಮಿ ನಡುಗಿದೆ. ಇದರಿಂದ ಭಯಭೀತರಾದ ಪ್ರದೇಶದ ನಿವಾಸಿಗಳು ಮನೆಯಿಂದ ಹೊರಗೆ ಓಡಿದ್ದಾರೆ.

ಅಂಬಿಕಾಪುರದಿಂದ 12 ಕಿಮೀ ದೂರದಲ್ಲಿ ಅಕ್ಷಾಂಶ 23.08 ಮತ್ತು ರೇಖಾಂಶ 83.08ರ ನಡುವೆ ಭೂಕಂಪ ಸಂಭವಿಸಿದೆ. ಇದು 10 ಕಿಮೀ ಆಳದಲ್ಲಿತ್ತು ಎಂದು ಎನ್‌ಸಿಎಸ್‌ ಟ್ವೀಟ್‌ ಮಾಡಿದೆ.

ಆದರೆ ಯಾವುದೇ ಜೀವ ಹಾನಿ, ಆಸ್ತಿ ನಷ್ಟವಾದ ಬಗ್ಗೆ ವರದಿಯಾಗಿಲ್ಲ.  

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...