Big Breaking: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

Date:

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ  ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣಾ ದಿನಾಂಕ ವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ವೇಳಾಪಟ್ಟಿ ಪ್ರಕಟಿಸಿದರು.

ವೇಳಾಪಟ್ಟಿ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯ ಪ್ರದೇಶ: ಚುನಾವಣಾ ದಿನಾಂಕ:ನವೆಂಬರ್ 17, ಫಲಿತಾಂಶ: ಡಿಸೆಂಬರ್ 3

ಛತ್ತೀಸ್‌ಗಢ: ಚುನಾವಣಾ ದಿನಾಂಕ: ನವೆಂಬರ್ 7 ಮತ್ತು 17, ಫಲಿತಾಂಶ: ಡಿಸೆಂಬರ್ 3 – ಎರಡು ಹಂತ

ತೆಲಂಗಾಣ: ಚುನಾವಣಾ ದಿನಾಂಕ: ನವೆಂಬರ್ 30, ಫಲಿತಾಂಶ: ಡಿಸೆಂಬರ್ 3

ರಾಜಸ್ಥಾನ: ಚುನಾವಣಾ ದಿನಾಂಕ: ನವೆಂಬರ್ 23, ಫಲಿತಾಂಶ: ಡಿಸೆಂಬರ್ 3

ಮಿಜೋರಾಂ: ಚುನಾವಣಾ ದಿನಾಂಕ: ನವೆಂಬರ್ 7, ಫಲಿತಾಂಶ: ಡಿಸೆಂಬರ್ 3

ಈ ಸುದ್ದಿ ಓದಿದ್ದೀರಾ: ಲಡಾಕ್ ಹಿಲ್ ಕೌನ್ಸಿಲ್ ಚುನಾವಣೆ: ಬಿಜೆಪಿಗೆ ಭಾರೀ ಮುಖಭಂಗ; ಮೈತ್ರಿಗೆ ಭರ್ಜರಿ ಗೆಲುವು

ಛತ್ತೀಸ್‌ಗಢ ಹೊರತುಪಡಿಸಿ ಉಳಿದ 4 ರಾಜ್ಯಗಳ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ

ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 8.2 ಕೋಟಿ ಪುರುಷ ಮತ್ತು 7.8 ಕೋಟಿ ಮಹಿಳಾ ಮತದಾರರು ಇದ್ದಾರೆ. ಈ ಪೈಕಿ 60.2 ಲಕ್ಷ ಮಂದಿ ಹೊಸ ಮತದಾರರಾಗಿದ್ದಾರೆ.

ಚುನಾವಣಾ ಆಯುಕ್ತರು ನೀಡಿರುವ ಮಾಹಿತಿಯಂತೆ ಮಿಜೋರಾಂ ವಿಧಾನಸಭೆಯ ಅವಧಿ ಡಿಸೆಂಬರ್ 17ಗೆ ಕೊನೆಗೊಳ್ಳಲ್ಲಿದ್ದು, ಛತ್ತೀಸ್‌ಗಢ ವಿಧಾನಸಭೆ ಅವಧಿ ಜನವರಿ 3, ಮಧ್ಯಪ್ರದೇಶ ವಿಧಾನಸಭೆ ಅವಧಿ ಜನವರಿ 8, ರಾಜಸ್ಥಾನ ವಿಧಾನಸಭೆ ಅವಧಿ ಜನವರಿ 14 ಮತ್ತು ತೆಲಂಗಾಣ ವಿಧಾನಸಭೆ ಅವಧಿಯು ಜನವರಿ 18ಕ್ಕೆ ಕೊನೆಗೊಳ್ಳಲಿದೆ.

ಮಧ್ಯಪ್ರದೇಶ – 230 ಸ್ಥಾನಗಳು, ಛತ್ತೀಸ್‌ಗಢದ – 90 ಸ್ಥಾನಗಳು, ರಾಜಸ್ಥಾನ – 200 ಸ್ಥಾನಗಳು, ತೆಲಂಗಾಣ – 119 ಸ್ಥಾನಗಳು ಮತ್ತು ಮಿಜೋರಾಂ – 90 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮತದಾರರು ಅಕ್ಟೋಬರ್ 17 ರಿಂದ ನವೆಂಬರ್ 30 ರವರೆಗೆ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ನವೀಕರಿಸಬಹುದಾಗಿದೆ.

5 ರಾಜ್ಯಗಳ 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳಿವೆ ಮತ್ತು 1.01 ಲಕ್ಷ ಮತಗಟ್ಟೆಗಳು ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿವೆ. 17,734 ಮಾದರಿ ಮತಗಟ್ಟೆ ಕೇಂದ್ರಗಳು ಇರಲಿವೆ. 621 ಮತಗಟ್ಟೆಗಳನ್ನು ಅಂಗವಿಕಲ ಸಿಬ್ಬಂದಿಯು ನಿರ್ವಹಿಸಲಿದ್ದಾರೆ. 8,192 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿ ನಿರ್ವಹಿಸಲಿದ್ದಾರೆ.

ಮತದಾರರು:

ಮಿಜೋರಾಂ – 8.52 ಲಕ್ಷ

ಛತ್ತೀಸ್‌ಗಢ- 2.03 ಕೋಟಿ

ಮಧ್ಯ ಪ್ರದೇಶ- 5.6 ಕೋಟಿ

ರಾಜಸ್ಥಾನ- 5.25 ಕೋಟಿ

ತೆಲಂಗಾಣ- 3.17 ಕೋಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...