‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕನನ್ನು ಬಂಧಿಸಿದ ಇಡಿ; ಮೋದಿ ವಿರುದ್ಧ ಬರೆದದ್ದೇ ಕಾರಣ?

Date:

ಗುಜರಾತ್‌ನ ಪ್ರಮುಖ ಪತ್ರಿಕೆಗಳಲ್ಲಿ ಒಂದಾದ ‘ಗುಜರಾತ್ ಸಮಾಚಾರ್‌’ನ ಮಾಲೀಕ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಆರ್ಥಿಕ ವಂಚನೆ ಆರೋಪದ ಮೇಲೆ ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ಟೀಕಿಸಿ ತಮ್ಮ ಪತ್ರಿಕೆಯಲ್ಲಿ ಬರೆದ ಕಾರಣಕ್ಕಾಗಿಯೇ ಅವರನ್ನು ಇಡಿ ಬಂಧಿಸಿದೆ ಎಂದು ವಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

“ಆದಾಯ ತೆರಿಗೆ ಇಲಾಖೆಯು ಬಾಹುಬಲಿ ಶಾ ಅವರ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ, ಶೋಧ ನಡೆಸಿದೆ. ಇದಾದ ಬೆನ್ನಲ್ಲೇ, ಅವರನ್ನು ಇಡಿ ಬಂಧಿಸಿದೆ. ಅವರ ವಿರುದ್ಧ ಆರ್ಥಿಕ ವಂಚನೆ ಆರೋಪ ಹೊರಿಸಲಾಗಿದೆ. ಆದರೆ, ಅವರ ಬಂಧನಕ್ಕೆ ನಿಜವಾದ ಕಾರಣ ಅವರು ಮೋದಿ ಮತ್ತು ಬಿಜೆಪಿ ಸರ್ಕಾರವನ್ನು ಟೀಕಿಸಿ ಬರೆದಿದ್ದು” ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಶಕ್ತಿಸಿನ್ಹ ಗೋಹಿಲ್ ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಗೋಹಿಲ್, “ಗುಜರಾತ್ ಸಮಾಚಾರ್ ಪತ್ರಿಕೆಯಲ್ಲಿ ಇತ್ತೀಚಿನ ಭಾರತ-ಪಾಕಿಸ್ತಾನ ಸಂಘರ್ಷದ ಬಗ್ಗೆ ವರದಿ ಮಾಡಿದ್ದರು. ಆ ವರದಿಯಲ್ಲಿ ಮೋದಿ ಮತ್ತು ಕೇಂದ್ರ ಸರ್ಕಾರದ ಧೋರಣೆ, ವೈಫಲ್ಯಗಳ ಬಗ್ಗೆ ಪ್ರಶ್ನಿಸಿದ್ದರು. ಆ ಕಾರಣಕ್ಕಾಗಿಯೇ ಅವರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ. ಈಗ ಅವರನ್ನು ಬಂಧಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸತ್ಯಕ್ಕಾಗಿ ನಿಲ್ಲುವವರಿಗೆ ಶಿಕ್ಷೆ ನೀಡುವುದೇ ಬಿಜೆಪಿ ಸರ್ಕಾರದ ಧ್ಯೇಯವಾಗಿದೆ. ಪ್ರಮುಖ ಗುಜರಾತಿ ಪತ್ರಿಕೆ ಗುಜರಾತ್ ಸಮಾಚಾರ್ ಯಾವಾಗಲೂ ಅಧಿಕಾರದ ವಿರುದ್ಧ ಗಟ್ಟಿಯಾಗಿ ನಿಂತಿದೆ. ಅದು ಯಾರೇ ಆಗಿದ್ದರೂ, ಅವರ ಸರ್ಕಾರವನ್ನು ಕಠುವಾಗಿ ಟೀಕಿಸುತ್ತದೆ, ಪ್ರಶ್ನಿಸುತ್ತದೆ. ಆದಾಗ್ಯೂ, ಇತ್ತೀಚಿನ ಭಾರತ-ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಪತ್ರಿಕೆಯಲ್ಲಿ ಪ್ರಟಕವಾದ ವರದಿ, ಲೇಖನಗಳು ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರನ್ನು ವಿಚಲಿತಗೊಳಿಸಿದೆ. ಹೀಗಾಗಿ, ಬಾಹುಬಲಿ ಶಾ ಅವರ ವಿರುದ್ಧ ಬಿಜೆಪಿ ತನ್ನ ನೆಚ್ಚಿನ ಟೂಲ್ ಕಿಟ್ ಮತ್ತು ಬೇಟೆಗಾರರನ್ನು ಛೂಬಿಟ್ಟಿದೆ” ಎಂದು ಹೋಗಿಲ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಬಿಡದಿ ಗ್ರೌಂಡ್ ರಿಪೋರ್ಟ್: ಹಕ್ಕಿಪಿಕ್ಕಿ ಬಾಲಕಿಯ ಅತ್ಯಾಚಾರ, ಕೊಲೆ ಮುಚ್ಚಿ ಹಾಕುವ ಷಡ್ಯಂತ್ರ ನಡೆದಿದೆಯೇ?

“ಗುಜರಾತ್ ಸಮಾಚಾರ್ ಮತ್ತು ಅದರ ದೂರದರ್ಶನ ಚಾನೆಲ್ GSTv ಸೇರಿದಂತೆ ಇತರ ವ್ಯವಹಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿವೆ. ಗುಜರಾತ್ ಸಮಾಚಾರ್ ಮಾಲೀಕ ಬಾಹುಬಲಿ ಭಾಯಿ ಶಾ ಅವರನ್ನು ಬಂಧಿಸಲಾಗಿದೆ” ಎಂದು ಗೋಹಿಲ್ ಹೇಳಿದ್ದಾರೆ.

“ಸುಮಾರು ಮೂರು ವಾರಗಳ ಹಿಂದೆ ಐಟಿ ದಾಳಿ ನಡೆದಾಗ, ಬಾಹುಬಲಿ ಶಾ ಅವರ ಮನೆಯು ತಮ್ಮ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಮಾತೃಮೂರ್ತಿ ಸ್ಮೃತಿಬೆನ್ ಅವರ ಮರಣದಿಂದಾಗಿ ದುಃಖದಲ್ಲಿ ಮುಳುಗಿತ್ತು. ಬಾಹುಬಲಿ ಶಾ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರಾಗಿದ್ದಾರೆ. ಅವರ ಮೇಲೆ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ. ಸರ್ಕಾರದ ಈ ಅತಿರೇಕವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೆಲವು ಮಾಧ್ಯಮಗಳು ತಮ್ಮ ಕೆಲಸವನ್ನು ನಿರ್ದಯವಾಗಿ ಮುಂದುವರೆಸಿವೆ. ಪ್ರತಿಯೊಂದು ಮಾಧ್ಯಮವೂ ಗೋದಿ ಮೀಡಿಯಾ ಅಲ್ಲ, ತಮ್ಮ ಆತ್ಮವನ್ನು ಮಾರಲು ಸಿದ್ಧವಾಗಿಲ್ಲ ಎಂಬುದನ್ನು ಬಿಜೆಪಿ ತಿಳಿದುಕೊಳ್ಳಬೇಕು. ಸರ್ಕಾರದ ತಪ್ಪುಗಳನ್ನು ಟೀಕಿಸುವ ಗುಜರಾತ್ ಸಮಾಚಾರ್ ಸೇರಿದಂತೆ ಎಲ್ಲ ಮಾಧ್ಯಮಗಳೊಂದಿಗೆ ನಾನು ನಿಲ್ಲುತ್ತೇನೆ” ಎಂದು ಗೋಹಿಲ್ ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...