ಅನಿಲ್ ಅಂಬಾನಿ ಗ್ರೂಪ್‌ಗೆ ಸೇರಿದ 3,000 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Date:

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಕಂಪನಿಗಳ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಸುಮಾರು 3,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇಡಿ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ನೀಡಿದೆ ಎಂದು ವರದಿಯಾಗಿದೆ.

ಇಡಿ ಮುಂಬೈನ ಪಾಲಿ ಹಿಲ್‌ನಲ್ಲಿರುವ ಅನಿಲ್ ಅಂಬಾನಿ ಅವರ ಮನೆ, ಸಂಸ್ಥೆಗೆ ಸೇರಿದ ವಸತಿ ಮತ್ತು ವಾಣಿಜ್ಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ. ಹಾಗೆಯೇ ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸೇರಿದ ಭೂಮಿ ಮತ್ತು ನೋಯ್ಡಾ, ಗಾಜಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಮತ್ತು ಪೂರ್ವ ಗೋದಾವರಿಯಲ್ಲಿರುವ ಅನೇಕ ಇತರ ಆಸ್ತಿಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಒಟ್ಟಾಗಿ ಸುಮಾರು 3,084 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಇದನ್ನು ಓದಿದ್ದೀರಾ? ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ಮತ್ತು ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ಸೇರಿದಂತೆ ಇತರೆ ಕಂಪನಿಗಳು ವಿವಿಧ ಬ್ಯಾಂಕುಗಳಿಗೆ ₹17,000 ಕೋಟಿಗೂ ಹೆಚ್ಚು ಸಾಲ ವಂಚನೆ ಮಾಡಿವೆ ಎಂಬ ಗಂಭೀರ ಆರೋಪಗಳಿವೆ. ಈ ಸಂಬಂಧ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿವೆ.

ಅನಿಲ್ ಅಂಬಾನಿ ಒಡೆತನದ ಸಂಸ್ಥೆಗಳು ₹41,921 ಕೋಟಿಗೂ ಹೆಚ್ಚು ಹಣವನ್ನು ಕಾನೂನು ಬಾಹಿರವಾಗಿ ವರ್ಗಾಯಿಸಿವೆ ಎಂದು ಕೋಬ್ರಾಪೋಸ್ಟ್ ಎಂಬ ತನಿಖಾ ಸಂಸ್ಥೆಯು ಆರೋಪಿಸಿದೆ. ಅದಲ್ಲದೆ ವಿದೇಶಿ ಬ್ಯಾಂಕ್ ಖಾತೆಗಳಲ್ಲಿ ಅಕ್ರಮವಾಗಿ ಹಣ ಇಡಲಾಗಿದೆ ಎಂಬ ಆರೋಪವೂ ಅನಿಲ್ ಅಂಬಾನಿ ಮೇಲಿದೆ. ಈ ಸಂಬಂಧ ಆದಾಯ ತೆರಿಗೆ ಇಲಾಖೆಯು ಕಪ್ಪುಹಣ ಕಾಯ್ದೆಯಡಿ ವಿಚಾರಣೆ ನಡೆಸುತ್ತಿದೆ. ಸುಮಾರು ₹814 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯ ₹420 ಕೋಟಿ ತೆರಿಗೆ ವಂಚನೆ ಮಾಡಲಾಗಿದೆ ಎಂಬ ಆರೋಪವಿದೆ.

2017–2019ರ ಅವಧಿಯಲ್ಲಿ, ಯೆಸ್ ಬ್ಯಾಂಕ್ ರಿಲಯನ್ಸ್‌ ಹೋಮ್ ಫೈನಾನ್ಸ್‌ ಲಿಮಿಟೆಡ್(RHFL) ಮೇಲೆ ₹2,965 ಕೋಟಿ ಮತ್ತು ರಿಲಯನ್ಸ್‌ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್(RCFL) ಮೇಲೆ ₹2,045 ಕೋಟಿ ಹೂಡಿಕೆ ಮಾಡಿದೆ. 2019ರ ಡಿಸೆಂಬರ್ ವೇಳೆಗೆ ಈ ಮೊತ್ತವು ಸಂಪೂರ್ಣವಾಗಿ ಮರುಪಾವತಿಯಾಗಿಲ್ಲ. RHFL ₹1,353.50 ಕೋಟಿ ಮತ್ತು RCFL ₹1,984 ಕೋಟಿ ಬಾಕಿ ಉಳಿಸಿವೆ.

ಈ ಪ್ರಕರಣದಲ್ಲಿ ಆಗಸ್ಟ್‌ನಲ್ಲಿ ಇಡಿ ಅನಿಲ್ ಅಂಬಾನಿಯ ವಿಚಾರಣೆ ನಡೆಸಿತ್ತು. ಜುಲೈ 24ರಂದು ಮುಂಬೈನಲ್ಲಿ 50 ಕಂಪನಿಗಳ 35 ಆವರಣಗಳು ಮತ್ತು ಸಂಸ್ಥೆಯ 25 ಜನರಿಗೆ ಸೇರಿದ ಸ್ಥಳದಲ್ಲಿ ಇಡಿ ಶೋಧ ನಡೆಸಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...