ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

Date:

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು ತಿಳಿದು ಬಂದಿದೆ ಎಂದು ಬುಧವಾರ ಸುಪ್ರೀಂ ಕೋರ್ಟ್‌ಗೆ ಇಡಿ ತಿಳಿಸಿದೆ.

ಇಡಿ ತನ್ನ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿಗೆ ಪ್ರತಿಕ್ರಿಯೆಯಾಗಿ ಇಡಿ ಅಫಿಡವಿಟ್ ಸಲ್ಲಿಸಿದೆ. ಒಂಬತ್ತು ಸಮನ್ಸ್‌ಗಳ ಹೊರತಾಗಿಯೂ ತನಿಖಾಧಿಕಾರಿಯ ಮುಂದೆ ಹಾಜರಾಗದೆ ಎಎಪಿ ನಾಯಕ ಕೇಜ್ರಿವಾಲ್ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಕೇಂದ್ರ ಸಂಸ್ಥೆ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಎಎಪಿ ಅಫಿಡವಿಟ್‌ಗೆ ಪ್ರತಿಕ್ರಿಯಿಸಿದ್ದು ಏಜೆನ್ಸಿಯನ್ನು “ಸುಳ್ಳು ಹೇಳುವ ಯಂತ್ರ” ಎಂದು ಕರೆದಿದೆ. “ಇಡಿ ಸುಳ್ಳನ್ನು ಹೇಳುವ ಯಂತ್ರವಾಗಿ ಮಾರ್ಪಟ್ಟಿದೆ. ಪ್ರತಿ ಬಾರಿಯೂ ಇಡಿ ತಮ್ಮ ಯಜಮಾನರಾದ ಬಿಜೆಪಿಯ ಇಚ್ಛೆಗೆ ತಕ್ಕಂತೆ ಹೊಸ ಸುಳ್ಳುಗಳನ್ನು ಹೊರತರುತ್ತದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ?  ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ಇನ್ನು ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯು ಅನರ್ಹವಾಗಿದ್ದು ಅದನ್ನು ವಜಾಗೊಳಿಸಿ ಎಂದು ಇಡಿ ಸುಪ್ರೀಂ ಕೋರ್ಟ್‌ ಮುಂದೆ ಹೇಳಿದೆ. ಹಾಗೆಯೇ ಮೂರು ವಿಭಿನ್ನ ಹಂತಗಳಲ್ಲಿ ಮೂರು ವಿಭಿನ್ನ ನ್ಯಾಯಾಂಗ ಅಧಿಕಾರಿಗಳು (ನ್ಯಾಯಾಲಯಗಳು) ಅರವಿಂದ್ ಕೇಜ್ರಿವಾಲ್ ಬಂಧನ ಮಾಡಬಹುದೇ ಎಂದು ಪರಿಶೀಲಿಸಿದ್ದಾರೆ ಎಂದು ಇಡಿ ಅಫಿಡವಿಟ್‌ನಲ್ಲಿ ಸೇರಿಸಿದೆ.

ದೆಹಲಿ ಸಿಎಂ ಅವರ ಮನವಿಯು ಜಾಮೀನಿನ ಮೇಲೆ ಬಿಡುಗಡೆ ಪಡೆಯುವ ಉದ್ದೇಶವನ್ನು ಹೊಂದಿಲ್ಲ. ಬದಲಾಗಿ ಪ್ರಾಸಿಕ್ಯೂಷನ್ ದೂರು ಇನ್ನೂ ದಾಖಲಾಗದಿದ್ದರೂ ತನಿಖೆಯ ಬಾಕಿ ಇರುವಾಗ ಬಂಧನವನ್ನು ಪ್ರಶ್ನಿಸುವ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮನವಿಯಾಗಿದೆ ಎಂದು ಇಡಿ ವಾದಿಸಿದೆ.

ಇದನ್ನು ಓದಿದ್ದೀರಾ? ‘ನನ್ನ ಪತಿಯ ಹತ್ಯೆಗೆ ಸಂಚು’: ದೆಹಲಿ ಸಚಿವರ ನಂತರ ಕೇಜ್ರಿವಾಲ್ ಪತ್ನಿ ಆರೋಪ

“ಈ ಸಂಬಂಧವಾಗಿ, ಅರ್ಜಿದಾರರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣ ಇಲ್ಲ” ಎಂದು ಹೇಳಿರುವ ಇಡಿ ಬಂಧನವು ದುರುದ್ದೇಶಪೂರಿತವಾಗಿದೆ ಎಂಬುವುದನ್ನು ಸ್ಪಷ್ಟವಾಗಿ ನಿರಾಕರಿಸಲಾಗಿದೆ. ಅರ್ಜಿದಾರರ ವಾದಗಳು ಮಾತ್ರ ಆಧಾರರಹಿತ. ಅಸ್ಪಷ್ಟವಾಗಿದೆ ಮತ್ತು ನಿರ್ದಿಷ್ಟವಾಗಿಲ್ಲ ಎಂದು ಇಡಿ ಹೇಳಿದೆ.

ಈ ಬಂಧನವು ತನಿಖೆಯ ಭಾಗವಾಗಿದೆ, ತನಿಖೆಯ ಸಮಯದಲ್ಲಿ ಬಂಧನ ಮಾಡುವುದು ತನಿಖಾ ಸಂಸ್ಥೆಗೆ ಬಿಟ್ಟದ್ದು ಎಂದು ಸಂಸ್ಥೆ ಅಫಿಡವಿಟ್‌ನಲ್ಲಿ ತಿಳಿಸಿದೆ. ಅಷ್ಟೇ ಅಲ್ಲ, 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆರೋಪಿ (ಕೇಜ್ರಿವಾಲ್) ತಪ್ಪಿತಸ್ಥರಾಗಿದ್ದಾರೆ ಎಂದು ನಂಬಲು ತಮ್ಮ ಬಳಿ ಸಾಕಷ್ಟು ಸಾಕ್ಷಿ ಇದೆ ಎಂದು ಇಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...