ದೆಹಲಿ ಅಬಕಾರಿ ನೀತಿ ಪ್ರಕರಣ | ಇ.ಡಿ ಆರೋಪ ಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು ಉಲ್ಲೇಖ

Date:

  • ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧಿಸಿ ರಾಘವ್ ಚಡ್ಡಾ ಸೇರಿ ಅನೇಕರ ಹೆಸರು ಉಲ್ಲೇಖ
  • ಅಬಕಾರಿ ನಿತಿ ಹಗರಣ ಪ್ರಕರಣದಲ್ಲಿ ಬಂಧಿತನಾಗಿರುವ ಮನೀಶ್ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯಲ್ಲಿ ಆಮ್‌ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಹೆಸರನ್ನು ಉಲ್ಲೇಖಿಸಿದೆ ಎಂದು ಮಂಗಳವಾರ (ಮೇ 2) ವರದಿಯಾಗಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ. ಇ.ಡಿ ತನ್ನ ದೋಷಾರೋಪ ಪಟ್ಟಿಯಲ್ಲಿ ಚಡ್ಡಾ ಅವರನ್ನು ಆರೋಪಿಯಾಗಿ ಹೆಸರಿಸಿಲ್ಲ. ಆದರೆ ಪಟ್ಟಿಯಲ್ಲಿ ಚಡ್ಡಾ ಅವರ ಹೆಸರು ಸೇರಿಸಿದೆ ಎಂದು ಮಾಧ್ಯಮಗಳ ವರದಿ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ಸಲ್ಲಿಸಿದ ಪೂರಕ ದೋಷಾರೋಪ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆರೋಪಿಯಾಗಿ ಹೆಸರಿಸಲಾಗಿದೆ ಎಂದು ಮಾಧ್ಯಮಗಳು ತಪ್ಪಾಗಿ ಬಿಂಬಿಸುತ್ತಿವೆ ಎಂದು ಚಡ್ಡಾ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ನನ್ನನ್ನು ಆರೋಪಿಯನ್ನಾಗಿ ಇ.ಡಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು. ನನ್ನ ಘನತೆಗೆ ಕುಂದು ತರಲು ಹೀಗೆ ಮಾಡಲಾಗುತ್ತಿದೆ. ನಾನು ಇ.ಡಿ ವರದಿಯಲ್ಲಿ ಆರೋಪಿ ಅಥವಾ ಶಂಕಿತನಾಗಿ ಹೆಸರಿಸಲ್ಪಟ್ಟಿಲ್ಲ” ಎಂದು ಚಡ್ಡಾ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

“ಪ್ರಕರಣ ಸಂಬಂಧ ಕೆಲವು ಸಭೆಗಳಲ್ಲಿ ಹಾಜರಿದ್ದರು ಎಂದು ನನ್ನ ಹೆಸರನ್ನು ಉಲ್ಲೇಖಿಸಲಾಗಿದೆ. ಆದರೆ ಈ ಕುರಿತು ಸ್ಪಷ್ಟ ಆಧಾರಗಳಿಲ್ಲ” ಎಂದು ರಾಘವ್‌ ಚಡ್ಡಾ ಹೇಳಿದ್ದಾರೆ.

ಇ.ಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಸೇರಿ ಪಕ್ಷದ ಇತರ ನಾಯಕರನ್ನು ಹೆಸರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೇರಳ | ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ

ಬಂಧಿತ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಘವ್‌ ಚಡ್ಡಾ ಅವರು ಭಾಗವಹಿಸಿದ್ದರು. ರದ್ದುಗೊಂಡಿರುವ ಅಬಕಾರಿ ನೀತಿಯನ್ನು ತರುವ ಯೋಜನೆಯ ಬಗ್ಗೆ ಉದ್ಯಮಿಗಳೊಂದಿಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಇ.ಡಿ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧಿಸಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...