ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂ ನಿವಾಸಕ್ಕೆ ದಾವಿಸಿದ ಇಡಿ ಅಧಿಕಾರಿಗಳು

Date:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೊಳ್ಳಲು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿ ಆಗಮಿಸಿದ್ದಾರೆ. ಸೊರೇನ್ ಅವರು ಕೂಡ ಇಡಿ ಅವರ ಹೊಸ ಸಮನ್ಸ್‌ಗೆ ಪ್ರತಿಕ್ರಿಯೆಯಾಗಿ ದೆಹಲಿಗೆ ಅನಿರೀಕ್ಷಿತ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ.

ಜನವರಿ 29 ಅಥವಾ 31 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಹೇಮಂತ್ ಸೊರೇನ್ ಅವರಿಗೆ ಮನವಿ ಮಾಡಿದ್ದರು.

“ಭೇಟಿಯು ಪೂರ್ವ ಯೋಜನೆಯನ್ನು ಹೊಂದಿರಲಿಲ್ಲ. ಇಡಿಯವರ ಹೊಸ ಸಮನ್ಸ್ ವಿತರಿಸಿದ ನಂತರ ಅನಿರೀಕ್ಷಿತ ಭೇಟಿಯಾಗಿದೆ. ಜನವರಿ 29,30 ಹಾಗೂ 31ರಂದು ಕೆಲವೊಂದು ವೇಳಾಪಟ್ಟಿಯನ್ನು ಕೈಗೊಂಡಿದ್ದರು” ಎಂದು ಅನಾಮಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಮಂತ್ ಸೊರೇನ್ ಅವರು ದೆಹಲಿಗೆ ಕಾನೂನು ಸಮಾಲೋಚನೆಗಾಗಿ ಆಗಮಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ. ಆದರೆ ಈ ಮಾಹಿತಿಯನ್ನು ಸಿಎಂ ಕಚೇರಿ ಪರಿಶೀಲಿಸಿರಲಿಲ್ಲ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ಅಧಿಕಾರಿಗಳು ಜನವರಿ 20 ರಂದು ಸೊರೇನ್ ಅವರ ಅಧಿಕೃತ ಕಚೇರಿಯಲ್ಲಿ ಈ ಹಿಂದೆ ಹೇಳಿಕೆ ಪಡೆದುಕೊಂಡಿದ್ದವು. ವಿಚಾರಣೆ ಪೂರ್ಣಗೊಂಡಿಲ್ಲದ ಕಾರಣ ಹೊಸದಾಗಿ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯು ಮಾಫಿಯಾದಿಂದ ಅಕ್ರಮವಾಗಿ ಭೂಮಾಲಿಕತ್ವ ಬದಲಾವಣೆಯ ದೊಡ್ಡ ಹಗರಣವಾಗಿದೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯು 2011ರ ಬ್ಯಾಚಿನ ಐಎಎಸ್ ಅಧಿಕಾರಿ ಒಳಗೊಂಡು 14 ಮಂದಿಯನ್ನು ಬಂಧಿಸಿದೆ.

ಆದಾಗ್ಯೂ, ಇಡಿ ನೀಡುತ್ತಿರುವ ಹಲವು ಸಮನ್ಸ್‌ಗಳ ಬಗ್ಗೆ ಆಡಳಿತರೂಢ ಪಕ್ಷ ಜೆಎಂಎಂ, ಪ್ರಜಾಸತ್ತಾತ್ಮಕ ಸರ್ಕಾರವನ್ನು ಇಡಿ, ಸಿಬಿಐಗಳ ಮೂಲಕ ದುರ್ಬಳಕೆ ಮಾಡಿಕೊಂಡು ಬಿಜೆಪಿ ಅಸ್ಥಿರಗೊಳಿಸುತ್ತಿದೆ ಎಂದು ಪ್ರತಿಭಟನೆ ನಡೆಸುತ್ತಿದೆ. ರಾಂಚಿಯ ಮೊರಬದಿ ಕ್ರೀಡಾಂಗಣದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...