ಬಿಹಾರದಲ್ಲಿ ಸೇತುವೆಗಳ ನಿರ್ಮಿಸಿದ ಸಂಸ್ಥೆಯ ಕಚೇರಿಗಳ ಮೇಲೆ ಇಡಿ ದಾಳಿ

Date:

ಬಿಹಾರದಲ್ಲಿ ಸೇತುವೆಗಳ ನಿರ್ಮಿಸಿದ ನಿರ್ಮಾಣ ಸಂಸ್ಥೆ ಎಸ್‌ಪಿ ಸಿಂಗ್ಲಾ ಗ್ರೂಪ್ ಆಫ್ ಕಂಪನಿಗಳ ಕಚೇರಿಗಳ ಮೇಲೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಪಾಟ್ನಾ, ದೆಹಲಿ ಮತ್ತು ಹರಿಯಾಣದ ಪಂಚಕುಲದಲ್ಲಿ ಶುಕ್ರವಾರ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಪಾಟ್ನಾದ ಬೋರಿಂಗ್ ರೋಡ್ ಪ್ರದೇಶದಲ್ಲಿರುವ ಎಸ್‌ಪಿ ಸಿಂಗ್ಲಾ ಗ್ರೂಪ್ ಆಫ್ ಕಂಪನಿಗಳ ಕಚೇರಿಗೆ ತಲುಪಿ ಶೋಧ ನಡೆಸಿದರು. ಪಾಟ್ನಾ, ಝಂಜರ್‌ಪುರ, ದೆಹಲಿ ಮತ್ತು ಪುಣೆಯಲ್ಲಿ ಬಿಹಾರ-ಕೇಡರ್ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಕೇಂದ್ರ ಸಂಸ್ಥೆ ದಾಳಿ ನಡೆಸಿದ ನಂತರ ಈ ಶೋಧಗಳನ್ನು ನಡೆಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಅವರ ಮನೆಯಿಂದ ಐಷಾರಾಮಿ ಬ್ರಾಂಡ್‌ಗಳಾದ ರಾಡೋ ಮತ್ತು ರೋಲೆಕ್ಸ್ ಸೇರಿದಂತೆ 15 ವಾಚ್‌ಗಳು ಮತ್ತು ಸುಮಾರು 1.1 ಕೆಜಿ ಚಿನ್ನಾಭರಣಗಳನ್ನು ಇಡಿ ಬುಧವಾರ ವಶಪಡಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಗ್ಲಾ ಗ್ರೂಪ್ ಆಫ್ ಕಂಪನಿಗಳ ಆವರಣದ ಮೇಲಿನ ದಾಳಿಗಳು ಸಂಜೀವ್ ಹನ್ಸ್ ಮತ್ತು ಮಾಜಿ ಆರ್‌ಜೆಡಿ ಶಾಸಕ ಸಂಜೀವ್ ಯಾದವ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಈ ಹಿಂದೆ ನಡೆಸಲಾದ ದಾಳಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ?  ಬಿಹಾರ | ಮತ್ತೊಂದು ಸೇತುವೆ ಕುಸಿತ; ಮೂರು ವಾರಗಳಲ್ಲಿ 13ನೇ ಪ್ರಕರಣ!

ಸಂಜೀವ್ ಹನ್ಸ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ರಾಜ್ಯ ರಾಜಧಾನಿಯ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಹಲವಾರು ಹಿರಿಯ ಅಧಿಕಾರಿಗಳು ಮತ್ತು ಪತ್ರಕರ್ತರ ಹೆಸರನ್ನು ಒಳಗೊಂಡ ಡೈರಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಅಕ್ರಮದಲ್ಲಿ ಇವರೂ ಕೂಡಾ ಲಾಭ ಪಡೆದವರೇ ಎಂಬ ಬಗ್ಗೆ ತನಿಖೆ ನಡೆಯಲಿದೆ.

ಬಿಹಾರ ರಾಜ್ಯ ಪುಲ್ ನಿರ್ಮಾಣ್ ನಿಗಮ್ ಲಿಮಿಟೆಡ್‌ನ (BRPNNL) ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಹನ್ಸ್ ಅವರು ಲಂಚವನ್ನು ಪಡೆದು ಎಸ್‌ಪಿ ಸಿಂಗ್ಲಾ ಗ್ರೂಪ್‌ಗೆ ಬಹು ಸೇತುವೆ ಯೋಜನೆಯ ಟೆಂಡರ್‌ಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇಡಿ ಅಧಿಕಾರಿಗಳು ಈ ಹಣಕಾಸು ವಹಿವಾಟಿನ ಸಾಕ್ಷ್ಯವನ್ನೂ ವಶಪಡಿಸಿಕೊಂಡಿದ್ದಾರೆ.

ಎಸ್‌ಪಿ ಸಿಂಗ್ಲಾ ಗ್ರೂಪ್ ಆಫ್ ಕಂಪನಿ ಬಿಹಾರದ ಭಾಗಲ್‌ಪುರದ ಸುಲ್ತಂಗಂಜ್‌ನಲ್ಲಿ ಆಗುವನಿ ಸೇತುವೆಯ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ನಿರ್ವಹಿಸಿದೆ. ಆಗುವನಿ ಘಾಟ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗ ಕುಸಿದ ನಂತರ ಈ ಕಂಪನಿಯು ಹೆಚ್ಚು ಸುದ್ದಿಯಾಗಿದೆ.

ಭಾಗಲ್ಪುರ ಜಿಲ್ಲೆಯಲ್ಲಿ ಗಂಗಾ ನದಿಯ ಮೇಲೆ ಸುಮಾರು 1,716 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚತುಷ್ಪಥ ಸೇತುವೆ 2023ರ ಜೂನ್‌ನಲ್ಲಿ ಕುಸಿದಿತ್ತು. ನಿರ್ಮಾಣದ ಸಮಯದಲ್ಲಿ ಈ ಸೇತುವೆ ಎರಡು ಬಾರಿ ಕುಸಿದಿದೆ. ಇದಾದ ಬಳಿಕ ಬಿಹಾರದಲ್ಲಿ ಹಲವಾರು ಸೇತುವೆಗಳು ಕುಸಿತಗೊಂಡಿದೆ. ಆದ್ದರಿಂದ ಈ ಸಂಸ್ಥೆಯ ಮೇಲೆ ನಡೆದ ಇಡಿ ದಾಳಿ ಗಮನ ಸೆಳೆದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...