ಕೋಲ್ಕತ್ತಾ ಆರ್‌ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲರ ಮನೆ ಮೇಲೆ ಇಡಿ ದಾಳಿ

Date:

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಕಾಲೇಜು ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ, ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್​ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶುಕ್ರವಾರ ಮುಂಜಾನೆಯೇ ಕೋಲ್ಕತ್ತಾದಲ್ಲಿರುವ ಸಂದೀಪ್ ಘೋಷ್ ಅವರ ಬೆಳೆಘಾಟ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಜಾನೆ 6.25ರ ವೇಳೆಗೆ ಅಧಿಕಾರಿಗಳು ಘೋಷ್ ಅವರ ನಿವಾಸದ ಬಳಿಗೆ ತೆರಳಿದ್ದಾರೆ. ಅಧಿಕಾರಿಗಳು ನಿವಾಸದ ಹೊರಗೆಯೇ ನಿಂತಿದ್ದು, ಮನೆಯನ್ನು ಸುತ್ತವರಿಸಿದ್ದಾರೆ. ಆದರೆ, ಅವರು ಮನೆಯೊಳಗೆ ಪ್ರವೇಶಿಸಲು ಬಾಗಿಲನ್ನು ತೆರೆದಿಲ್ಲ ಎಂದು ವರದಿಯಾಗಿದೆ.

ಸಂದೀಪ್ ಘೋಷ್ ಅವರು ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಣಕಾಸು ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿ ಕೋಲ್ಕತ್ತಾ ಹೈಕೋರ್ಟ್ ಈ ಹಿಂದೆಯೇ ಆದೇಶಿಸಿತ್ತು. ಅಲ್ಲದೆ, ಘೋಷ್ ಅವರನ್ನು ಸಿಬಿಐ ಈಗಾಗಲೇ ಬಂಧಿಸಿದೆ. ಸೋಮವಾರ (ಸೆ.2) ಘೋಷ್ ಅವರನ್ನು ಬಂಧಿಸಲಾಗಿದ್ದು, ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋಲ್ಕತ್ತಾ ಹೈಕೋರ್ಟ್‌ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘೋಷ್ ಅವರ ವಿರುದ್ಧ ಸಿಬಿಐ ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಸೆಕ್ಷನ್ 420 ಐಪಿಸಿ (ವಂಚನೆ ಮತ್ತು ಅಪ್ರಮಾಣಿಕತೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...