17 ಸಾವಿರ ಕೋಟಿ ರೂ. ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ಇಡಿ ಸಮನ್ಸ್‌

Date:

ಸುಮಾರು 17 ಸಾವಿರ ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯವು(ಇಡಿ) ಆಗಸ್ಟ್ 5ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

66 ವರ್ಷದ ಅಂಬಾನಿ ಅವರಿಗೆ ದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ವರದಿಯಾಗಿದೆ. ಅನಿಲ್ ಅಂಬಾನಿ ಹೇಳಿಕೆಯನ್ನು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ದಾಖಲಿಸಲಿದೆ.

ಇದನ್ನು ಓದಿದ್ದೀರಾ? ಅನಿಲ್ ಅಂಬಾನಿ ವಂಚನೆ ಪ್ರಕರಣ: ಮೋದಿ ಅತ್ಯಾಪ್ತನ ಸಹೋದರ ಬ್ಯಾಂಕ್‌ಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಕಥೆ ಇದು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವಾರ ಇಡಿ ಅನಿಲ್ ಅಂಬಾನಿ ಅವರ ಅನೇಕ ಕಂಪನಿಗಳು ಮತ್ತು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಜುಲೈ 24ರಂದು ಪ್ರಾರಂಭವಾದ ಶೋಧ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿದೆ. ಅದಾದ ಬಳಿಕ ಇದೀಗ ಸಮನ್ಸ್ ಜಾರಿ ಮಾಡಿದೆ.

50 ಕಂಪನಿಗಳು ಮತ್ತು ಅನಿಲ್ ಅಂಬಾನಿ ಗ್ರೂಪ್ ಕಂಪನಿಗಳ ಹಲವು ಕಾರ್ಯನಿರ್ವಾಹಕರು ಸೇರಿ ಒಟ್ಟು 25 ಮಂದಿಯ ಕಚೇರಿ, ನಿವಾಸದಲ್ಲಿ ಶೋಧ ನಡೆದಿದೆ. ಮುಂಬೈನಲ್ಲಿ 35ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.

ಅನಿಲ್ ಅಂಬಾನಿ ಅವರ ಎಡಿಎಜಿಯ ಭಾಗವಾಗಿರುವ ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್, ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ ಹಾಗೂ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್‌ ಮೇಲೆ ಎಸ್‌ ಬ್ಯಾಂಕ್ ಬರೋಬ್ಬರಿ 3,000 ಕೋಟಿ ರೂ.ಗಳನ್ನು ಹೂಡಿಕೆ ಮಾಡಿತ್ತು. ಆದರೆ, ಸಾಲ ಪಡೆದ ಅನಿಲ್ ಅಂಬಾನಿ ಸಂಸ್ಥೆ ಆ ಹಣವನ್ನು ಅಕ್ರಮವಾಗಿ ಬಳಸಿಕೊಂಡಿದ್ದು, ಬ್ಯಾಂಕ್‌ಗೆ ಮೋಸ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ಆರೋಪಗಳ ಮೇಲೆ ಇಡಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ತನಿಖೆ ಆರಂಭಿಸಿದೆ. ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...