ಈದ್ ಮಿಲಾದ್ ಮೆರವಣಿಗೆ ವೇಳೆ ಕಾಸರಗೋಡು ದೇವಾಲಯಕ್ಕೆ ವಿಶೇಷ ಗೌರವ: ವಿಡಿಯೋ ವೈರಲ್

Date:

ಕೇರಳದ ಕಾಸರಗೋಡಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ದೇವಾಲಯಕ್ಕೆ ವಿಶೇಷ ಗೌರವ ನೀಡಲಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋ ಹಂಚಿಕೊಂಡಿರುವ ಹಲವು ನೆಟ್ಟಿಗರು “ಇದು ನಿಜವಾದ ಕೇರಳ ಸ್ಟೋರಿ” ಎಂದು ಹೇಳಿದ್ದಾರೆ.

ಕಾಸರಗೋಡಿನ ಪಾಲಕುನ್ನುವಿನಲ್ಲಿರುವ ಕೊಟ್ಟಿಕುಲಂ ನೂರುಲ್ ಹುದಾ ಮದರಸಾ ಆಯೋಜಿಸಿದ್ದ ಈ ರ‍್ಯಾಲಿಯು ಪಾಲಕುನ್ನು ಕಜಕಂ ಭಗವತಿ ದೇವಸ್ಥಾನಕ್ಕೆ ವಿಶೇಷ ಗೌರವವನ್ನು ಸಲ್ಲಿಸಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶನಿವಾರ ಪೋಸ್ಟ್ ಮಾಡಲಾಗಿದ್ದು, ಸದ್ಯ ಭಾರೀ ವೈರಲ್ ಆಗಿದ್ದು, ಒಂದು ದಿನದಲ್ಲೇ ಸುಮಾರು 20 ಲಕ್ಷಕ್ಕೂ ಅಧಿಕ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ’ಈ ದಿನ’ ಎಕ್ಸ್‌ಕ್ಲೂಸಿವ್‌: ಬಜರಂಗದಳದ ರೋಹನ್ ಕಲ್ಲೆಸೆತವೇ ಶಿವಮೊಗ್ಗ ಗಲಭೆಯ ಆರಂಭ ಬಿಂದುವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಾಲಯದ ಬಳಿಯ ತನ್ನ ತಂದೆಯ ಅಂಗಡಿಯಲ್ಲಿದ್ದ ಪಾಲಕುನ್ನುವಿನ ಆರಟ್ಟುಕಡವಿನ ಅನಿಶಿತ್ ಕೆ ಎಂಬವರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, “ಇದು ಕೇರಳ. ಕೇರಳದ ವೈವಿಧ್ಯತೆಯಲ್ಲಿ ಏಕತೆ. ಮುಸ್ಲಿಮರು ನಬಿ ದಿನದಲ್ಲಿ ಹಿಂದೂ ದೇವಾಲಯಕ್ಕೆ ವಂದನೆ ಸಲ್ಲಿಸುವುದು, ಧರ್ಮಗಳ ನಡುವೆ ಗೌರವ ಮತ್ತು ಸಾಮರಸ್ಯವನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಓಣಂ ಹಬ್ಬ ಮತ್ತು ಪ್ರವಾದಿ ಮೊಹಮ್ಮದ್ ಅವರ ಜನ್ಮ ದಿನಾಚರಣೆಯಾದ ಈದ್-ಎ-ಮಿಲಾದ್ ಜೊತೆಜೊತೆಯಲ್ಲೇ ಬಂದಿದ್ದು, ಕೇರಳದ ಹಲವಾರು ಭಾಗಗಳು ಕೋಮು ಸೌಹಾರ್ದತೆಯ ಇಂತಹ ನಿದರ್ಶನಗಳಿಗೆ ಸಾಕ್ಷಿಯಾದವು. ಓಣಂ ಮತ್ತು ಈದ್-ಎ-ಮಿಲಾದ್‌ನ ಭಾಗವಾಗಿ ನಡೆದ ಮೆರವಣಿಗೆಗಳಲ್ಲಿ ಭಾಗವಹಿಸುವವರು ಅನೇಕ ಸ್ಥಳಗಳಲ್ಲಿ ಪರಸ್ಪರ ಶುಭಾಶಯ ಕೋರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ನಿಜವಾದ ಭಾರತ ಎಂದು ನೆಟ್ಟಿಗರು ಹೇಳಿದ್ದಾರೆ.

ಮತ್ತೋರ್ವ ನೆಟ್ಟಿಗರು, “ಒಂದು ಕಾಲದಲ್ಲಿ ಇವೆಲ್ಲವೂ ಕೂಡಾ ಸಾಮಾನ್ಯವಾಗಿತ್ತು. ಆದರೆ ಇಂದು ಅದನ್ನು ವೈಭವೀಕರಿಸಲಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆರ್‌ಎಸ್‌ಎಸ್‌ ಮತ್ತು ಬಿಪಿ ನಮ್ಮ ಭಾರತವನ್ನು ಹಿಂದೂಗಳ ಪಾಕಿಸ್ತಾನವನ್ನಾಗಿ ಪರಿವರ್ತಿಸುತ್ತಿರುವ ನಡುವೆ ಈ ಅಪರೂಪದ ದೃಶ್ಯ ಎಲ್ಲರ ಗಮನ ಸೆಳೆಯುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.

ಇದರ ಜತೆಗೆ ಹಿಂದೂ ಶಿಕ್ಷಕಿಯೊಬ್ಬರು ಈದ್ ಮಿಲಾದ್ ಮೆರವಣಿಗೆಗೆ ಮಳೆಯಲ್ಲಿ ಕಾದು ನಿಂತು ತನ್ನ ವಿದ್ಯಾರ್ಥಿಗೆ ನೋಟುಗಳ ಮಾಲೆಯನ್ನು ಉಡುಗೊರೆಯಾಗಿ ಹಾಕಿ ಮುತ್ತಿಟ್ಟು ಸಂತೋಷಪಟ್ಟ ಘಟನೆಯೂ ಕೇರಳದಲ್ಲಿ ನಡೆದಿದೆ. ಈ ವಿಡಿಯೋ ಕೂಡಾ ವೈರಲ್ ಆಗಿದ್ದು, ಇದು ನಿಜವಾದ ಕೇರಳ ಸ್ಟೋರಿ ಎಂದು ನೆಟ್ಟಿಗರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...