ಮಹಾರಾಷ್ಟ್ರ ಮಹಾಯುತಿಯಲ್ಲಿ ಒಡಕು; ಸಭೆಗಳನ್ನು ರದ್ದುಮಾಡಿ ಸ್ವಗ್ರಾಮಕ್ಕೆ ತೆರಳಿದ ಸಿಎಂ ಶಿಂದೆ?

Date:

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟದಲ್ಲಿ ಮುಖ್ಯಮಂತ್ರಿ ಮತ್ತು ಮಂತ್ರಿ ಸ್ಥಾನ ಹಂಚಿಕೆ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಇಂದು ನಿಗದಿಯಾಗಿದ್ದ ಸಭೆಗಳನ್ನು ದಿಢೀರ್ ರದ್ದು ಮಾಡಿ ಅನಿರೀಕ್ಷಿತವಾಗಿ ಸತಾರಾ ಜಿಲ್ಲೆಯಲ್ಲಿರುವ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರೊಂದಿಗೆ ಶಿಂದೆ ಅವರು ಶುಕ್ರವಾರ ಬೆಳಗ್ಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸಭೆ ನಡೆಸಿದ ಬಳಿಕ ಮುಂಬೈಗೆ ಆಗಮಿಸಿ ತಮ್ಮ ಗ್ರಾಮಕ್ಕೆ ಮರಳಿದ್ದಾರೆ.

ದೆಹಲಿ ಸಭೆ ಧನಾತ್ಮಕವಾಗಿದೆ ಎಂದು ಶಿಂದೆ ಹೇಳಿದ್ದರೂ ಈಗ ಎಲ್ಲ ಸಭೆಗಳನ್ನು ರದ್ದು ಮಾಡಿ ತಮ್ಮ ಸ್ವಗ್ರಾಮಕ್ಕೆ ತೆರಳಿದ್ದಾರೆ. ಶನಿವಾರ ಶಿಂದೆ ಮುಂಬೈಗೆ ಮರಳುವ ನಿರೀಕ್ಷೆಯಿದೆ. ದೆಹಲಿ ಸಭೆಯಲ್ಲಿ ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗುತ್ತಾರೆ. ನೀವು ಉಪ ಮುಖ್ಯಮಂತ್ರಿಯಾಗಬೇಕು ಎಂದು ತಿಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಂದ್ರಶೇಖರ ಸ್ವಾಮೀಜಿ ಬಾಯಿ ತಪ್ಪಲಿಲ್ಲ, ಮನಸಿನ ಮಾತೇ ಹೊರಬಿದ್ದಿದೆ

ಆರಂಭದಲ್ಲಿ ಶಿಂದೆ ಈ ಆಫರ್‌ ಸ್ವೀಕರಿಸಲು ಒಪ್ಪದೇ ಇದ್ದರೂ ನಂತರ ಅವರು ಒಪ್ಪಿಗೆ ಸೂಚಿಸಿದರು. ಅಷ್ಟೇ ಅಲ್ಲದೇ ತನಗೆ ಗೃಹ ಖಾತೆಯನ್ನು ನೀಡುವಂತೆ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಬ್ಬರು ಸಿಎಂ, ಇಬ್ಬರು ಡಿಸಿಎಂ ಹುದ್ದೆಗಳು ಮಹಾಯುತಿ ಸರ್ಕಾರದಲ್ಲಿ ಇರಲಿದೆ. ಬಿಜೆಪಿಗೆ 20 ಮಂತ್ರಿ ಸ್ಥಾನ ಸಿಗಲಿದೆ. ಎನ್‌ಸಿಪಿಗಿಂತ ಶಿವಸೇನೆಗೆ ಹೆಚ್ಚು ಮಂತ್ರಿ ಸ್ಥಾನ ದೊರೆಯಲಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 132 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಅದರ ಮಹಾಯುತಿ ಮಿತ್ರರಾದ ಶಿಂದೆ ಶಿವಸೇನೆ 57 ಕ್ಷೇತ್ರ, ಅಜಿತ್ ಎನ್‌ಸಿಪಿ 41 ಕ್ಷೇತ್ರಗಳಲ್ಲಿ ಜಯಗಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...