14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಬದಲಾವಣೆ

Date:

ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ಸಂಸದರು ರಾಜೀನಾಮೆ ನೀಡಿದ ಕಾರಣದಿಂದಾಗಿ ಖಾಲಿಯಾದ ಹುದ್ದೆಗೆ ಉಪಚುನಾವಣೆ ನಡೆಯಲು ಇನ್ನು ಹತ್ತು ದಿನಗಳಷ್ಟೇ ಬಾಕಿಯಿದೆ. ಈ ನಡುವೆ ಚುನಾವಣಾ ಆಯೋಗವು (ಇಸಿಐ) 14 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ದಿನಾಂಕವನ್ನು ಬದಲಾಯಿಸಿದೆ.

ಚುನಾವಣಾ ಆಯೋಗವು ಸೋಮವಾರ ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳ ಮನವಿಯಂತೆ ಉಪಚುನಾವಣೆಯನ್ನು ನವೆಂಬರ್ 13ರಿಂದ ನವೆಂಬರ್ 20ಕ್ಕೆ ಮರು ನಿಗದಿಪಡಿಸಿದೆ.

ಇಸಿಐ ಅಕ್ಟೋಬರ್ 15ರಂದು 48 ವಿಧಾನಸಭಾ ಸ್ಥಾನಗಳಿಗೆ ಮತ್ತು ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಘೋಷಿಸಿದೆ. 20ರಂದು ಮತದಾನ ನಡೆಯುವ ಮಹಾರಾಷ್ಟ್ರದ ನಾಂದೇಡ್ ಸಂಸದೀಯ ಕ್ಷೇತ್ರ ಮತ್ತು ಉತ್ತರಾಖಂಡದ ಕೇದಾರನಾಥ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಎಲ್ಲಾ ಸ್ಥಾನಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿತ್ತು. ಆದರೆ ಇದೀಗ ದಿನಾಂಕ ಬದಲಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಂಡೂರು ಉಪಚುನಾವಣೆ | ರೆಡ್ಡಿ-ರಾಮುಲು v/s ಲಾಡ್‌-ತುಕಾರಾಮ್; ಗೆಲ್ಲೋದ್ಯಾರು?

“ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ದಿನಾಂಕ ಬದಲಾವಣೆಗಾಗಿ ವಿವಿಧ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳು (ಬಿಜೆಪಿ, ಐಎನ್‌ಸಿ, ಬಿಎಸ್‌ಪಿ, ಆರ್‌ಎಲ್‌ಡಿ ಸೇರಿದಂತೆ) ಮತ್ತು ಕೆಲವು ಸಾಮಾಜಿಕ ಸಂಸ್ಥೆಗಳು ಮನವಿ ಮಾಡಿದೆ. ಮನವಿಯನ್ನು ಪರಿಗಣಿಸಿ ದಿನಾಂಕವನ್ನು ಬದಲಾಯಿಸಲಾಗಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

ಯಾವೆಲ್ಲ ಕ್ಷೇತ್ರಗಳಲ್ಲಿ ದಿನಾಂಕ ಬದಲು?

ಕೇರಳದ ಪಾಲಕ್ಕಾಡ್, ಪಂಜಾಬ್‌ನ ಡೇರಾ ಬಾಬಾ ನಾನಕ್, ಚಬ್ಬರ್ವಾಲ್, ಗಿಡ್ಡರ್ಬಹಾ, ಬರ್ನಾಲಾ, ಉತ್ತರ ಪ್ರದೇಶದ ಮೀರಾಪುರ, ಕುಂದರ್ಕಿ, ಗಾಜಿಯಾಬಾದ್, ಖೈರ್, ಕರ್ಹಾಲ್, ಸಿಸಮೌ, ಫುಲ್ಪುರ್, ಕತೇಹಾರಿ ಮತ್ತು ಮಜವಾನ್ ಕ್ಷೇತ್ರಗಳಲ್ಲಿ ನವೆಂಬರ್ 13ರ ಬದಲಾಗಿ ನವೆಂಬರ್ 20ರಂದು ಉಪಚುನಾವಣೆ ನಡೆಯಲಿದೆ. ಮತ ಎಣಿಕೆ ಈ ಹಿಂದೆ ಘೋಷಿಸಿದಂತೆ ನವೆಂಬರ್ 23ರಂದೇ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...