ಲೋಕಸಭೆ ಚುನಾವಣೆ | ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಅರ್ಜಿ, ಹೈಕೋರ್ಟ್ ನೋಟಿಸ್ ಜಾರಿ

Date:

ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಕಂಗನಾ ರಣಾವತ್‌ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರಾದ ಲಾಯಕ್ ರಾಮ್ ನೇಗಿ ಅವರು ಮಂಡಿಯಿಂದ ಸ್ಪರ್ಧಿಸಲು ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ ತಪ್ಪಾಗಿ ತಿರಸ್ಕರಿಸಿದ್ದಾರೆ ಎಂದು ಆರೋಪಿಸಿದರು.

ನೋಟಿಸ್ ಜಾರಿ ಮಾಡಿದ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್ ಅವರು ಆಗಸ್ಟ್ 21ರೊಳಗೆ ಉತ್ತರವನ್ನು ಸಲ್ಲಿಸುವಂತೆ ಕಂಗನಾ ರಣಾವತ್ ಅವರಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡಿ ಲೋಕಸಭಾ ಕ್ಷೇತ್ರದಿಂದ ರಣಾವತ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳಿಂದ ಸೋಲಿಸಿದರು. ವಿಕ್ರಮಾದಿತ್ಯ ಸಿಂಗ್ ಅವರಿಗೆ 4,62,267 ಮತಗಳು ಲಭಿಸಿದರೆ, ರಣಾವತ್ ಅವರು 5,37,002 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಇದನ್ನು ಓದಿದ್ದೀರಾ?  ಹಿಮಾಚಲ ಪ್ರದೇಶ: ಕಂಗನಾ ರಣಾವತ್‌ಗೆ ಕಪ್ಪು ಬಾವುಟ ಪ್ರದರ್ಶನ

ಅರಣ್ಯ ಇಲಾಖೆಯ ಮಾಜಿ ನೌಕರ ನೇಗಿ ಅವರು ಅಕಾಲಿಕ ನಿವೃತ್ತಿಯನ್ನು ಪಡೆದು ಚುನಾವಣಾಧಿಕಾರಿಗೆ ನಾಮಪತ್ರದ ಜೊತೆಗೆ ಇಲಾಖೆಯಿಂದ ‘ನೋ ಡ್ಯೂ ಸರ್ಟಿಫಿಕೇಟ್’ ಸಲ್ಲಿಸಿದ್ದಾರೆ ಎಂದು ಹೇಳಿದರು.

ಆದರೆ, ವಿದ್ಯುತ್, ನೀರು ಮತ್ತು ದೂರವಾಣಿ ಇಲಾಖೆಗಳಿಂದ ‘ನೋ ಡ್ಯೂ ಸರ್ಟಿಫಿಕೇಟ್’ ಸಲ್ಲಿಸಲು ಒಂದು ದಿನ ಕಾಲಾವಕಾಶ ನೀಡಿದ್ದು, ಅದನ್ನು ಸಲ್ಲಿಸಿದಾಗ ಚುನಾವಣಾಧಿಕಾರಿ ಅದನ್ನು ಸ್ವೀಕರಿಸದೆ ನಾಮಪತ್ರ ತಿರಸ್ಕರಿಸಿದ್ದಾರೆ ಎಂದು ದೂರಲಾಗಿದೆ.

ತನ್ನ ನಾಮಪತ್ರವನ್ನು ಅಂಗೀಕರಿಸಿದ್ದರೆ ತಾನು ಚುನಾವಣೆಯಲ್ಲಿ ಗೆಲ್ಲಬಹುದಿತ್ತು, ಆದ್ದರಿಂದ ಈ ಚುನಾವಣೆಯನ್ನು ರದ್ದು ಮಾಡಬೇಕು ಎಂದು ಲಾಯಕ್ ರಾಮ್ ನೇಗಿ ಅರ್ಜಿಯಲ್ಲಿ ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...