ಅ.4ರಿಂದ ಮತ್ತೆ ಚುನಾವಣಾ ಬಾಂಡ್: ‘ಬಿಜೆಪಿಗೆ ಚಿನ್ನದ ಫಸಲು’ ಎಂದ ಪಿ ಚಿದಂಬರಂ

Date:

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ವಿತರಣೆ ಮಾಡಲು ಮತ್ತೊಮ್ಮೆ ಮುಂದಾಗಿದೆ. ಅಕ್ಟೋಬರ್ 4 ರಂದು 10 ದಿನಗಳ ಅವಧಿಗೆ ತೆರೆಯುವ 28 ನೇ ಹಂತದ ಚುನಾವಣಾ ಬಾಂಡ್‌ಗಳ ವಿತರಣೆಗೆ ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 29 ಅಧಿಕೃತ ಶಾಖೆಗಳ ಮೂಲಕ ಚುನಾವಣಾ ಬಾಂಡ್‌ಗಳನ್ನು ವಿತರಿಸುವ ಮತ್ತು ಎನ್‌ಕ್ಯಾಶ್ ಮಾಡುವ ಅಧಿಕಾರ ಹೊಂದಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ. ಅಧಿಕೃತ SBI ಶಾಖೆಗಳು ಬೆಂಗಳೂರು, ಲಕ್ನೋ, ಶಿಮ್ಲಾ, ಡೆಹ್ರಾಡೂನ್, ಕೋಲ್ಕತ್ತಾ, ಗುವಾಹಟಿ, ಚೆನ್ನೈ, ಪಾಟ್ನಾ, ನವದೆಹಲಿ, ಚಂಡೀಗಢ, ಶ್ರೀನಗರ, ಗಾಂಧಿನಗರ, ಭೋಪಾಲ್, ರಾಯ್ಪುರ್ ಮತ್ತು ಮುಂಬೈ ನಗರಗಳಲ್ಲಿವೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ ಈ ಘೋಷಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಕಾಂಗ್ರೆಸ್ ಮುಖಂಡ ತೀವ್ರ ಟೀಕೆ ಮಾಡಿದ್ದು, ‘ಚುನಾವಣಾ ಬಾಂಡ್ ಎಂಬುದು ಕಾನೂನುಬದ್ಧ ಲಂಚ. ಅ.4ರಂದು ಇದು ಪುನಃ ತೆರೆಯಲಿದ್ದು, ಬಿಜೆಪಿಗೆ ಚಿನ್ನದ ಫಸಲನ್ನೇ ನೀಡಲಿದೆ’ ಎಂದಿದ್ದಾರೆ.

ಚಿದಂಬರಂ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಒಂದು ಪೋಸ್ಟ್ ಹಾಕಿದ್ದಾರೆ. ‘ಅ.4ರಿಂದ ಮಾರಾಟವಾಗಲಿರುವ ಚುನಾವಣಾ ಬಾಂಡ್‌ಗಳಲ್ಲಿ ಈ ಹಿಂದಿನಂತೆಯೇ ಬಿಜೆಪಿಗೆ ಶೇ.90ರಷ್ಟು ದೇಣಿಗೆ ಸಲ್ಲಿಕೆಯಾಗಲಿದೆ. ಹೀಗಾಗಿ ಬಿಜೆಪಿಗೆ ಇದು ಚಿನ್ನದ ಫಸಲನ್ನೇ ನೀಡಲಿದೆ’ ಎಂದಿದ್ದಾರೆ.

‘ಕ್ರೋನಿ ಬಂಡವಾಳಶಾಹಿಗಳು ದೆಹಲಿಯಲ್ಲಿ ಕುಳಿತಿರುವ ತಮ್ಮ ಪ್ರಭು ಹಾಗೂ ಧಣಿಗಳಿಗೆ ಕಾಣಿಕೆ ನೀಡಲು ಚೆಕ್ ಪುಸ್ತಕಗಳನ್ನು ತೆರೆದಿಟ್ಟುಕೊಂಡಿದ್ದಾರೆ’ ಎಂದು ಅವರು ಲೇವಡಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ: ಮಹಿಳಾ ಮೀಸಲಾತಿ ಮಸೂದೆ 2034ರವರೆಗೂ ಜಾರಿಯಾಗುವುದಿಲ್ಲ, ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ: ಖರ್ಗೆ

2016-17ರ ಆರ್ಥಿಕ ವರ್ಷ ಮತ್ತು 2021-22 ರ ಆರ್ಥಿಕ ವರ್ಷಗಳ ನಡುವೆ ಬಿಜೆಪಿಯ 5,271.97 ಕೋಟಿ ರೂಪಾಯಿಗಳ ರಾಜಕೀಯ ದೇಣಿಗೆಯಲ್ಲಿ ಶೇಕಡಾ 52 ಕ್ಕಿಂತ ಹೆಚ್ಚು ಚುನಾವಣಾ ಬಾಂಡ್‌ಗಳಿಂದ ಬಂದಿದೆ. ಇದು ಕಪ್ಪು ಹಣವನ್ನು ಬಿಳಿ ಮಾಡುವ ತಂತ್ರವಾಗಿದೆ. ಹಾಗಾಗಿ ಚುನಾವಣಾ ಬಾಂಡ್‌ಗಳ ನಿಯಮವನ್ನು ಪಾರದರ್ಶಕಗೊಳಿಸಬೇಕು ಎನ್ನುವ ಒತ್ತಡ ಎಂದು ಕಾಂಗ್ರೆಸ್ ಸೇರಿದಂತೆ ಎಲ್ಲ ಪ್ರಮಖ ವಿರೋಧ ಪಕ್ಷಗಳಿಂದ ಕೇಳಿಬರುತ್ತಲೇ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...