ಚುನಾವಣಾ ಬಾಂಡ್ | ಬಿಜೆಪಿಗೂ ಕೋಟ್ಯಂತರ ದಾನ ನೀಡಿದ್ದ ‘ಲಾಟರಿ ಕಿಂಗ್’

Date:

‘ಲಾಟರಿ ಕಿಂಗ್‌’ ಎಂದೆ ಹೆಸರಾಗಿರುವ ಸಾಂಟಿಯಾಗೊ ಮಾರ್ಟಿನ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಉದ್ಯಮಿಯಾಗಿದ್ದಾನೆ.

ನಿನ್ನೆಯಷ್ಟೆ(ಮಾ.21) ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿದ ಸಂಪೂರ್ಣ ಮಾಹಿತಿಯಲ್ಲಿ ಇದು ಬಹಿರಂಗಗೊಂಡಿದೆ.

ಲಾಟರಿ ಸಂಸ್ಥೆ ಫ್ಯೂಚರ್‌ ಗೇಮಿಂಗ್‌ ಅಂಡ್‌ ಹೋಟೆಲ್‌ ಸರ್ವೀಸ್ ಪ್ರೈವೇಟ್ ಲಿಮಿಟೆಡ್ ನಡೆಸುತ್ತಿರುವ ಲಾಟರಿ ಕಿಂಗ್ ಸಂಟಿಯಾಗೊ ಮಾರ್ಟಿನ್ ಏಪ್ರಿಲ್‌ 12, 2019 ರಿಂದ ಜನವರಿ 24, 2014ರವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಒಟ್ಟು 1368 ಕೋಟಿ ರೂ. ದಾನ ನೀಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಸ್ವಂತ ರಾಜ್ಯ ತಮಿಳುನಾಡಿನ ಪಕ್ಷಗಳಿಗೆ ಮಾತ್ರವಲ್ಲದೆ ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರಾಜಕೀಯ ಪಕ್ಷಗಳಿಗೂ ದೇಣಿಗೆ ನೀಡಿದ್ದಾನೆ.

ಅಂಕಿಅಂಶಗಳ ವರದಿಯಂತೆ ಈತನಿಂದ ಅತಿ ಹೆಚ್ಚು ದೇಣಿಗೆ ಪಡೆದ ರಾಜಕೀಯ ಪಕ್ಷ ಪಶ್ವಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌. 542 ಕೋಟಿ ರೂ. ಹಣವನ್ನು ಟಿಎಂಸಿಗೆ ನೀಡಿದ್ದಾನೆ. ಡಿಎಂಕೆ ಅತಿ ಹೆಚ್ಚು ದೇಣಿಗೆ ಪಡೆದ ಎರಡನೇ ಸ್ಥಾನದಲ್ಲಿದೆ. ದ್ರಾವಿಡ ಪಕ್ಷಕ್ಕೆ ಚುನಾವಣಾ ಬಾಂಡ್‌ಗಳ ಮೂಲಕ 503 ಕೋಟಿ ರೂ. ನೀಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಉತ್ತರಕ್ಕೆ ಬೆಂಕಿ ಹಚ್ಚದಿರಲಿ ಶೋಭಾ ಕರಂದ್ಲಾಜೆ

ಭಾರತೀಯ ಜನತಾ ಪಕ್ಷ ಕೂಡ ಲಾಟರಿ ಕಿಂಗ್‌ನಿಂದ 100 ಕೋಟಿ ರೂ. ದೇಣಿಗೆ ಪಡೆದಿದೆ. ಆಂಧ್ರ ಪ್ರದೇಶದ ವೈಎಸ್‌ಆರ್‌ ಪಕ್ಷ 154 ಕೋಟಿ ರೂ. ದೇಣಿಗೆ ಪಡೆದಿದೆ. ಕಾಂಗ್ರೆಸ್‌ ಪಕ್ಷಕ್ಕೂ ಕೂಡ 50 ಕೋಟಿ ರೂ. ದೇಣಿಗೆ ನೀಡಿದ್ದಾನೆ.

ಅದೇ ರೀತಿ ಸಿಕ್ಕಿಂ ಸೇರಿದಂತೆ ಹಲವು ಸಣ್ಣಪುಟ್ಟ ಪಕ್ಷಗಳಿಗೂ ಸಾಂಟಿಯಾಗೊ ಮಾರ್ಟಿನ್ ನೆರವು ನೀಡಿದ್ದಾನೆ.

ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ,ಆಲ್ಫಾನ್ಯೂಮರಿಕ್‌ ಸಂಖ್ಯೆಗಳನ್ನು ಒಳಗೊಂಡ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಫೆ.15, 2024ರ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿತ್ತು.

ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್‌ ಬ್ಯಾಂಕ್‌ ಆಲ್ಫಾನ್ಯೂಮರಿಕ್‌ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾ.21 ರಂದು ಅಪ್‌ಲೋಡ್‌ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...