ಕೇರಳ | ಉತ್ಸವದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ: 29 ಮಂದಿಗೆ ಗಾಯ

Date:

ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.

ವಾದ್ಯಗಳ ಸದ್ದು, ಜನರ ಗದ್ದಲದ ನಡುವೆ ನಿಯಂತ್ರಣ ಕಳೆದುಕೊಂಡ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ, ವ್ಯಕ್ತಿಯೊಬ್ಬನನ್ನ ಎತ್ತಿ ಎಸೆದಿದೆ. ಈ ವೇಳೆ ಗುಂಪಿನಲ್ಲಿದ್ದ ಜನ ಭಯದಿಂದ ಓಡಿದ್ದಾರೆ. ಕೆಲವರು ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಬೆಳಗಿನ ಜಾವ 2.30ರ ಸುಮಾರಿಗೆ ಮಾವುತ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಉತ್ಸವದಲ್ಲಿ ಕನಿಷ್ಠ ಐದು ಆನೆಗಳು ಅಂಲಕಾರಭೂಷಿತವಾಗಿ ಪಾಲ್ಗೊಂಡಿದ್ದವು. ಈ ವೇಳೆ ಹಠಾತ್ತನೆ ಜನರ ಕಡೆಗೆ ನುಗ್ಗಿದ್ದ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ ದಾಳಿ ನಡೆಸಿದೆ. ಈ ಕುರಿತ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಮೂಲಗಳ ಪ್ರಕಾರ, ಆನೆ ದಾಳಿಗೆ ಒಳಗಾದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೋಟಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...