ಹೊಸೂರು | ಗ್ರಾಮೀಣ ಭಾಗದಲ್ಲಿ ಕಾಣಿಸಿಕೊಂಡ ಕಾಡಾನೆಗಳ ಹಿಂಡು; ರೈತರಲ್ಲಿ ಆತಂಕ

Date:

ಬೆಂಗಳೂರು ಮತ್ತು ತಮಿಳುನಾಡಿನ ಗಡಿಭಾಗ ಹೊಸೂರಿನ ಬಳಿ ಸುಮಾರು 80ಕ್ಕೂ ಹೆಚ್ಚು ಕಾಡಾನೆಗಳಿದ್ದ ಹಿಂಡುಗಳು ಕಾಣಿಸಿಕೊಂಡಿದೆ. ಹೊಸೂರಿನ ಶಾನಮಾನು ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಿಂಡು ಅಡ್ಡಾಡುತ್ತಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸೂರು ಪ್ರದೇಶದ ಶಾನಮಾವು, ಬಿರ್ಜೆಪೆಲ್ಲಿ, ರಾಮಾಪುರ, ಬೂದುರು, ಹಳಿಯಾಳ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆಗಳು ಓಡಾಡುತ್ತಿದ್ದು, ರೈತರಲ್ಲಿ ಬೆಳೆ ನಾಶವಾಗುವ ಭಯ ಆವರಿಸಿದೆ. ಆನೆಗಳನ್ನು ಮುತ್ಯಾಮಡುವು ಬಳಿ ಅಡ್ಡಗಟ್ಟಿ, ಕಾಡಿಗೆ ಹಿಮ್ಮೆಟ್ಟಲು ಅರಣ್ಯಾಧಿಕಾರಿಗಳು ಪಟಾಕಿ ಸಿಡಿದ್ದಾರೆ. ಆದರೂ, ಆನೆಗಳು ಇನ್ನೂ ಗ್ರಾಮೀಣ ಪ್ರದೇಶದಲ್ಲಿಯೇ ಓಡಾಡುತ್ತಿವೆ.

ಆನೆಗಳು ಮೂರು ಹಿಂಡುಗಳಾಗಿ ಓಡಾಡುತ್ತಿವೆ ಎಂದು ಹೇಳಲಾಗಿದೆ. ಆನೆಗಳ ಗ್ರಾಮಗಳಿಗೆ ನುಗ್ಗದಂತೆ ತಡೆಯಲು ಅರಣ್ಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಯಾರೂ ಕೂಡ ಗ್ರಾಮಗಳಿಂದ ಹೊರಭಾಗಕ್ಕೆ ಹೋಗಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...