ಎಲ್ಗಾರ್ ಪರಿಷದ್ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಸುಪ್ರೀಂ ಜಾಮೀನು

Date:

ಎಲ್ಗಾರ್ ಪರಿಷದ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಹಾಗೂ ಎಸ್‌ ವಿ ಎನ್‌ ಭಟ್ಟಿ ಅವರಿದ್ದ ಪೀಠ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಲು ತಡೆ ವಿಧಿಸಿದ್ದ ಆದೇಶವನ್ನು ವಿಸ್ತರಿಸಲು ನಿರಾಕರಿಸಿತು.

ಗೌತಮ್ ನವ್ಲಾಖಾ ಅವರು ಗೃಹ ಬಂಧನವಿದ್ದ ಅವಧಿಯಲ್ಲಿನ ಭದ್ರತಾ ವೆಚ್ಚಕ್ಕೆ 20 ಲಕ್ಷ ರೂ. ಪಾವತಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೈಕೋರ್ಟ್‌ ಆದೇಶದಂತೆ ಜಾಮೀನಿಗೆ ತಡೆ ಕೋರಲು ನಾವು ಒಲವು ಹೊಂದಿಲ್ಲ. ವಿಚಾರಣೆಯು ಹಲವು ವರ್ಷಗಳನ್ನು ತೆಗೆದುಕೊಂಡಿದ್ದು, ಮುಗಿಯಲು ಕೂಡ ಹಲವು ವರ್ಷಗಳಾಗುತ್ತವೆ. ವಿವಾದಗಳಿಗೆ ಹೆಚ್ಚು ಆಸ್ಪದ ನೀಡದೆ ನಾವು ಜಾಮೀನಿಗೆ ತಡೆ ನೀಡುವುದಿಲ್ಲ.ಪ್ರತಿವಾದಿ ಕಕ್ಷಿದಾರರಿಗೆ ಭದ್ರತಾ ವೆಚ್ಚ ಕೈಗೊಂಡಿದ್ದಕ್ಕಾಗಿ 20 ಲಕ್ಷ ರೂ. ಪಾವತಿಸಬೇಕೆಂದು” ಪೀಠವು ಹೇಳಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ಗೌತಮ್ ನವ್ಲಾಖಾ ಅವರು 4 ವರ್ಷಗಳಿಗೂ ಹೆಚ್ಚು ಕಾಲ ಸೆರೆಮನೆಯಲ್ಲಿದ್ದಾರೆ. ತನಿಖಾ ಸಂಸ್ಥೆ ಪ್ರಕರಣದಲ್ಲಿ ಯಾವುದೇ ಆರೋಪಗಳನ್ನು  ದಾಖಲಿಸಲಾಗಿಲ್ಲ ಎಂದು ಪೀಠ ತಿಳಿಸಿತು.

ಕಳೆದ ವರ್ಷ ಡಿಸೆಂಬರ್‌ 19ರಂದು ಬಾಂಬೆ ಹೈಕೋರ್ಟ್ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿತ್ತಾದರೂ, ರಾಷ್ಟ್ರೀಯ ತನಿಖಾ ಸಂಸ್ಥೆ ಮನವಿಯ ಮೇರೆಗೆ ಜಾಮೀನಿಗೆ ತಡೆ ನೀಡಲಾಗಿತ್ತು.

2018ರ ಆಗಸ್ಟ್‌ನಲ್ಲಿ ಬಂಧಿತರಾಗಿದ್ದ ಗೌತಮ್ ನವ್ಲಾಖಾ ಅವರು ಸುಪ್ರಿಂ ಕೋರ್ಟ್‌ ಆದೇಶದ ಮೇರೆಗೆ ಮುಂಬೈನ ನಿವಾಸದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿತ್ತು.

ಪುಣೆಯಲ್ಲಿ 2017ರ ಡಿಸೆಂಬರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಲ್ಗಾರ್‌ ಪರಿಷದ್‌ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಕಾರಣಕ್ಕಾಗಿ ಗೌತಮ್ ನವ್ಲಾಖಾ ಅವರನ್ನು ಬಂಧಿಸಲಾಗಿತ್ತು. ಸಭೆ ನಡೆದ ಮರುದಿನವೆ ಭೀಮಾ ಕೊರೆಗಾಂವ್‌ ಸ್ಮಾರಕದ ಬಳಿ ಹಿಂಸಾಚಾರ ಉಂಟಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಇವರಲ್ಲಿ 6 ಮಂದಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...