75 ವರ್ಷ ದಾಟಿದರೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ: ಅಮಿತ್ ಶಾ

Date:

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಜೈಲಿನಿಂದ ಹೊರಬಂದ ನಂತರ ಶನಿವಾರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ್ ಕೇಜ್ರಿವಾಲ್, “ಬಿಜೆಪಿಯವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸುತ್ತಾರೆ. ನಾನು ಬಿಜೆಪಿಯವರಿಗೆ ನಿಮ್ಮ ಪ್ರಧಾನಿ ಯಾರು ಎಂದು ಕೇಳಬಯಸುತ್ತೇನೆ. ಯಾಕೆಂದರೆ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. 75 ವರ್ಷದ ನಂತರ ರಾಜಕೀಯ ನಿವೃತ್ತಿಯಾಗುವಂತೆ ಬಿಜೆಪಿಯೇ ನಿಯಮ ಮಾಡಿಕೊಂಡಿದೆ. ಆ ನಿಯಮದಂತೆ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಮಿತ್ರಾ ಮಹಾಜನ್ ಮತ್ತು ಯಶವಂತ್ ಸಿನ್ಹಾ ನಿವೃತ್ತರಾಗಿದ್ದರು. ಪ್ರಧಾನಿ ಮೋದಿ ನಿವೃತ್ತರಾಗಲಿದ್ದಾರೆ. ಮೋದಿ ಮತ್ತೆ ಗೆದ್ದರೆ, ಎರಡು ತಿಂಗಳೊಳಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬದಲಾಯಿಸುತ್ತಾರೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಜ್ರಿವಾಲ್ ಅವರ ಈ ಹೇಳಿಕೆಯನ್ನು ಉಲ್ಲೇಖಿಸಿ ತೆಲಂಗಾಣದ ಹೈದರಾಬಾದ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕತ್ರರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “75 ವರ್ಷ ದಾಟಿದರೂ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ” ಎಂದು ತಿಳಿಸಿದ್ದಾರೆ.

“ಮೋದೀಜಿಯವರಿಗೆ 75 ವರ್ಷ ಆಯಿತೆಂದು ಅರವಿಂದ್ ಕೇಜ್ರಿವಾಲ್ ಮತ್ತವರ ಕಂಪೆನಿ ಖುಷಿ ಪಡುವಂತಹ ಅಗತ್ಯವಿಲ್ಲ. ಬಿಜೆಪಿಯ ಸಂವಿಧಾನದಲ್ಲಿ 75 ವರ್ಷದ ನಂತರ ರಾಜಕೀಯ ನಿವೃತ್ತಿಯಾಗುವಂತಹ ಯಾವುದನ್ನೂ ಉಲ್ಲೇಖಿಸಲಾಗಿಲ್ಲ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಇಂಡಿಯಾ ಮೈತ್ರಿಕೂಟದ ಕಂಪೆನಿಗೆ ನಾನು ಇದನ್ನು ಹೇಳಲು ಬಯಸುತ್ತೇನೆ. ಮೋದಿಯವರು ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಪ್ರಧಾನಿಯಾಗಿ ಮತ್ತೊಮ್ಮೆ ಆಯ್ಕೆಯಾಗಿ ಮೋದಿಯವರೇ ದೇಶವನ್ನು ಮುನ್ನಡೆಸಲಿದ್ದಾರೆ. ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಸುಮ್ಮನೆ ಗೊಂದಲ ಸೃಷ್ಟಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...