ಪ್ರತಿ 8 ನಿಮಿಷಕ್ಕೆ ಒಬ್ಬ ಭಾರತೀಯ ಮಹಿಳೆ ಸ್ತನ ಕ್ಯಾನ್ಸರ್‌ಗೆ ಬಲಿ: ಗ್ಲೋಬೊಕಾನ್ ವರದಿ

Date:

ಭಾರತೀಯ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ ಮತ್ತು ಸ್ತನ ಕ್ಯಾನ್ಸರ್ ಹಿಂದೆಂದಿಗಿಂತಲೂ ಅಧಿಕವಾಗಿ ಹೆಚ್ಚುತ್ತಿವೆ ಎಂಬುದನ್ನು ಗ್ಲೋಬೊಕಾನ್ 2020ರ ವರದಿ ಹೇಳಿದೆ. ಗ್ಲೋಬೊಕಾನ್ ದತ್ತಾಂಶದ ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬ ಮಹಿಳೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಸ್ತನ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾಳೆ.

“ಪ್ರತಿ ವರ್ಷ ಸುಮಾರು 1.78 ಲಕ್ಷ ಹೊಸ ಸ್ತನ ಕ್ಯಾನ್ಸರ್‌ ಪ್ರಕರಣಗಳು ಕಂಡುಬರುತ್ತಿವೆ. ಇದೇ ರೀತಿ ಮುಂದುವರೆದರೆ 2030ರ ವೇಳೆಗೆ ಈ ಸಂಖ್ಯೆ ಎರಡು ಲಕ್ಷ ದಾಟುವ ಸಾಧ್ಯತೆಯಿದೆ. ಇನ್ನೂ ಹೆಚ್ಚು ಕಳವಳಕಾರಿ ಸಂಗತಿಯೆಂದರೆ, ಪಾಶ್ಚಿಮಾತ್ಯ ದೇಶಗಳಲ್ಲಿನ ಮಹಿಳೆಯರಿಗಿಂತ ಸುಮಾರು ಒಂದು ದಶಕ ಮುನ್ನ ಅನೇಕ ಭಾರತೀಯ ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ” ಎಂದು ಸ್ತ್ರೀರೋಗತಜ್ಞೆ, ಐವಿಎಫ್ ತಜ್ಞೆ ಮತ್ತು ವಿಶ್ವಸಂಸ್ಥೆಯ ಸಲಹೆಗಾರ್ತಿ, ಜಾಗತಿಕ ಆರೋಗ್ಯ ತಂತ್ರಜ್ಞೆ ಡಾ. ಸಬೀನ್ ಕಪಾಸಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ | ಗರ್ಭ ಕೊರಳ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

30 ಮತ್ತು 40ರ ಹರೆಯದ ಮಹಿಳೆಯರು ನಿಯಮಿತವಾಗಿ ತಪಾಸಣೆಗೆ ಒಳಗಾಗಬೇಕು. ಆರಂಭಿಕ ಚಿಹ್ನೆಗಳನ್ನು ತಿಳಿದುಕೊಳ್ಳುವುದು ಅಗತ್ಯ. ಚಿಕಿತ್ಸೆಗಳು ಸುಧಾರಿಸುತ್ತಿದ್ದರೂ, ಕ್ಯಾನ್ಸರ್ ಇರುವುದು ತಡವಾಗಿ ಪತ್ತೆಯಾಗುವುದರಿಂದ ಭಾರತದಲ್ಲಿ ಇತರೆ ದೇಶಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಭಾರತದಲ್ಲಿ ಹತ್ತು ಸ್ತನ ಕ್ಯಾನ್ಸರ್ ಪ್ರಕರಣಗಳಲ್ಲಿ ಸುಮಾರು ಆರು ಪ್ರಕರಣಗಳಲ್ಲಿ ಕ್ಯಾನ್ಸರ್ ಮೂರು ಅಥವಾ ನಾಲ್ಕನೇ ಹಂತವನ್ನು ತಲುಪಿದಾಗ ಪತ್ತೆಯಾಗುತ್ತವೆ. ಇದರಿಂದಾಗಿ ಚಿಕಿತ್ಸೆ ಸಂಕೀರ್ಣಗೊಳ್ಳುತ್ತಿದೆ ಎಂದು ವರದಿ ಹೇಳಿದೆ.

“ಆರಂಭಿಕವಾಗಿ ಕಾಣುವ ಚಿಹ್ನೆಗಳನ್ನು ಮಹಿಳೆಯರು ನಿರ್ಲಕ್ಷಿಸುತ್ತಾರೆ. ಅನೇಕ ಮಹಿಳೆಯರು ವೈದ್ಯರ ಬಳಿಗೆ ಹೋಗುವುದನ್ನು ವಿಳಂಬ ಮಾಡುತ್ತಾರೆ. ಗಡ್ಡೆ ದೊಡ್ಡದಾಗುವವರೆಗೂ ತಪಾಸಣೆ ಮಾಡಿಸಿಕೊಂಡಿರುವುದಿಲ್ಲ. ಕೆಲವರು ರೋಗದ ಬಗ್ಗೆ ಭಯಪಡುತ್ತಾರೆ. ಹಲವರಿಗೆ ತಪಾಸಣೆಗೆ ಬೇಕಾದಷ್ಟು ಹಣ ಇರುವುದಿಲ್ಲ, ಆಸ್ಪತ್ರೆಗಳು ದೂರವಿರುತ್ತದೆ. ಇನ್ನು ಕೆಲವರು ಸ್ತನ ತಪಾಸಣೆಗೆ ಒಳಪಡಲು ಹಿಂಜರಿಯುತ್ತಾರೆ” ಎಂದು ಡಾ. ಕಪಾಸಿ ಹೇಳಿದ್ದಾರೆ.

ಸ್ತನದಲ್ಲಿ ನೋವುರಹಿತ ಗಡ್ಡೆ, ಕಂಕುಳಿನಲ್ಲಿ ಉಬ್ಬು, ಸ್ತನದ ಚರ್ಮದಲ್ಲಿ ಬದಲಾವಣೆ, ಸ್ತನತೊಟ್ಟುಗಳು ಒಳಮುಖವಾಗಿರುವುದು, ಸ್ತನತೊಟ್ಟಿನಲ್ಲಿ ಅಸಾಮಾನ್ಯ ಸ್ರಾವಗಳು ಸ್ತನ ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳಾಗಿವೆ. ಇವುಗಳು ಕ್ಯಾನ್ಸರ್ ಅಲ್ಲದಿದ್ದರೂ ಸಹ, ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆಗೆ ಒಳಪಡುವುದು ಉತ್ತಮ ಎನ್ನುತ್ತಾರೆ ವೈದ್ಯರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...